ಬೆಂಗಳೂರು: ರಾಜ್ಯದಲ್ಲಿ ಮತದಾನ (Karnataka Election) ಆರಂಭವಾಗಿದ್ದು ವಿಶೇಷವಾಗಿ ಬೆಂಗಳೂರಿನಲ್ಲಿ (Bengaluru) ಬೆಳಗ್ಗೆ ಜನರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
ಪ್ರತಿಬಾರಿಯೂ ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ದಾಖಲಾಗುತ್ತದೆ. ಹೀಗಾಗಿ ಈ ಬಾರಿ ರಾಜಕೀಯ ಪಕ್ಷಗಳು, ಚುನಾವಣಾ ಆಯೋಗ (Election Commission) ಮತ ಪ್ರಮಾಣ ಹೆಚ್ಚಿಸಲು ಕಸರತ್ತು ಮಾಡಿತ್ತು. ಇದನ್ನೂ ಓದಿ: Karnataka Election 2023 | ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮತದಾನ | Live Updates
ಬೆಳಗ್ಗೆ 7 ಗಂಟೆಗೆ ಜನರು ಸರದಿ ನಿಂತು ವೋಟ್ ಹಾಕಿದ್ದಾರೆ. 2018ರ ಚುನಾವಣೆ ಮೇ 12 ಶನಿವಾರ ನಡೆದಿತ್ತು. ವೀಕೆಂಡ್ ಆದ ಹಿನ್ನೆಲೆಯಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದಿತ್ತು. ಆದರೆ ಈ ಬಾರಿ ಬುಧವಾರ ನಡೆಯುತ್ತಿರುವ ಕಾರಣ ಹೆಚ್ಚಿನ ಪ್ರಮಾಣದ ಮತದಾನ ನಡೆಯುವ ನಿರೀಕ್ಷೆಯಿದೆ. ಮಧ್ಯಾಹ್ನದ ಬಳಿಕ ಮಳೆ ಬರುವ ಸಾಧ್ಯತೆ ಇರುವುದರಿಂದ ನಗರದ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಯತ್ತ ಬರುತ್ತಿದ್ದಾರೆ.
ಮತಗಟ್ಟೆಯ ಒಳಗಡೆ ಮೊಬೈಲ್ (Mobile) ತೆಗೆದುಕೊಂಡು ಹೋಗುವುದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಕೆಲವೊಂದು ಕಡೆ ಪೊಲೀಸರೇ ಸ್ವಿಚ್ ಆಫ್ ಮಾಡಿ ತೆಗೆದುಕೊಂಡು ಹೋಗಲು ಅನುಮತಿ ನೀಡಿದ್ದಾರೆ. ಮೊಬೈಲ್ ವಿಚಾರದ ಬಗ್ಗೆ ಕೆಲವೊಂದು ಕಡೆ ಕಿರಿಕಿರಿ ನಡೆದ ಘಟನೆ ನಡೆದಿದೆ.
ಕರ್ನಾಟಕ ಅಸೆಂಬ್ಲಿ ಚುನಾವಣೆ ವಿಶೇಷ
* ಒಟ್ಟು ಮತ ಕ್ಷೇತ್ರ – 224
* ಒಟ್ಟು ಅಭ್ಯರ್ಥಿಗಳು – 2631
* ಬಿಜೆಪಿ ಅಭ್ಯರ್ಥಿಗಳು – 224
* ಕಾಂಗ್ರೆಸ್ ಅಭ್ಯರ್ಥಿಗಳು – 223 (ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ)
* ಜೆಡಿಎಸ್ ಅಭ್ಯರ್ಥಿಗಳು – 207
* ಮತ ಕೇಂದ್ರ – 58,282
* ಮತಗಟ್ಟೆಯ ಭದ್ರತಾ ಸಿಬ್ಬಂದಿ – 84,119
* ವಿಶೇಷ ಸಿಬ್ಬಂದಿ ಸಂಖ್ಯೆ – 2,959
* ಮತದಾರರ ಸಂಖ್ಯೆ – 5.21 ಕೋಟಿ
* ಪುರುಷ ಮತದಾರರ ಸಂಖ್ಯೆ – 2.62 ಕೋಟಿ
* ಮಹಿಳಾ ಮತದಾರರ ಸಂಖ್ಯೆ – 2.59 ಕೋಟಿ
* 112 ಕ್ಷೇತ್ರಗಳಲ್ಲಿ ಪುರುಷರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು
* ಫಸ್ಟ್ ಟೈಮ್ ವೋಟರ್‌ಗಳ ಸಂಖ್ಯೆ – 9.17 ಲಕ್ಷ
* 100 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ – 16,976
* ಶಾಂತಿ ಭದ್ರತೆಗೆ ನಿಯೋಜನೆಯಾದ ಪೊಲಿಸರು – 2.2 ಲಕ್ಷ