ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಘೋಷಣೆಯಾದ ತಕ್ಷಣ ಬೇರೆ ಬೇರೆ ರಾಜಕೀಯ ವಿದ್ಯಮಾನಗಳ ನಡೆಯುತ್ತಿದೆ. ಕೆಲ ಪಕ್ಷದ ಶಾಸಕರು ರಾಜೀನಾಮೆ ನೀಡಿ ಬೇರೆ ಪಕ್ಷ ಸೇರುತ್ತಿದ್ದಾರೆ. ಈ ನಡುವೆ ಕರಾವಳಿಯ ರಾಜಕಾರಣಿಗಳ ಪೈಕಿ ಛಾಪು ಮೂಡಿಸಿದ್ದ ಹಾಲಾಡಿ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದಾರೆ. ಗುರುವಿನ ಋಣ ತೀರಿಸಲು ನಿರ್ಧರಿಸಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ (Halady Srinivas Shetty) ಕುಂದಾಪುರದ ವಾಜಪೇಯಿ ಎಂದೇ ಫೇಮಸ್. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕ. ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಈಗಿನ ರಾಜಕೀಯಕ್ಕೆ ನನ್ನ ಮನಸ್ಸು ಒಪ್ಪುವುದಿಲ್ಲ ಎಂಬ ಅಭಿಪ್ರಾಯಗಳನ್ನು ಹಾಲಾಡಿ ತಮ್ಮ ಆಪ್ತರ ಜೊತೆ ಹೇಳಿಕೊಂಡಿದ್ದಾರಂತೆ.
Advertisement
ಭಾನುವಾರ ಬೆಂಗಳೂರಿನಲ್ಲಿ ನಡೆದ ಬಿಜೆಪಿ (BJP) ಕೋರ್ ಕಮಿಟಿ ಸಭೆಯಲ್ಲೂ ಹಾಲಾಡಿ ಭಾಗವಹಿಸಿದ್ದರು. ರಾಜ್ಯದ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮುಂದೆ ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಇದ್ದಕ್ಕಿದ್ದಂತೆ ತಮ್ಮ ಆಪ್ತರ ಜೊತೆ ನಿವೃತ್ತಿಯ ಮಾತುಗಳನ್ನಾಡಿ ಸೋಮವಾರ ಸಂಜೆ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: 25 ವರ್ಷಗಳಿಂದ ಸೋಲಿಲ್ಲದ ಸರದಾರ – ಕರಾವಳಿಯ ವಾಜಪೇಯಿ ಶ್ರೀನಿವಾಸ ಶೆಟ್ಟಿ
Advertisement
Advertisement
Advertisement
ಪ್ರಕಟಣೆಯಲ್ಲಿ ಏನಿದೆ?
ಕುಂದಾಪುರ ಕ್ಷೇತ್ರದ( Kundapura Assembly constituency) ಜನ ನನ್ನನ್ನು ಐದು ಬಾರಿ ಆಯ್ಕೆ ಮಾಡಿದ್ದಾರೆ. ಗ್ರಾಮೀಣ ಭಾಗ ಹೆಚ್ಚಿರುವ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡುವ ಅವಕಾಶ ಸಿಕ್ಕಿದೆ. ಕುಂದಾಪುರ ಕ್ಷೇತ್ರದ ಶಾಸಕನಾಗಿ ನಿಷ್ಠೆಯಿಂದ, ಪ್ರೀತಿಯಿಂದ ಕೆಲಸ ಮಾಡಿದ್ದೇನೆ. ಈ ಬಾರಿ ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಐದು ಬಾರಿ ದಾಖಲೆಯ ಮತಗಳಿಂದ ಗೆಲ್ಲಿಸಿದ್ದಕ್ಕೆ ಧನ್ಯವಾದ. ಅಧಿಕಾರಿ ವರ್ಗ, ಕುಂದಾಪುರ ಜನತೆ -ಮಾಧ್ಯಮಗಳಿಗೆ ಧನ್ಯವಾದ. ಪಕ್ಷದ ಕಾರ್ಯಕರ್ತರಿಗೆ, ಬಿಜೆಪಿ ನಾಯಕರಿಗೆ ಅಭಿಮಾನಿಗಳಿಗೆ ನಾನು ಚಿರಋಣಿ. ನಾಲ್ಕು ಬಾರಿ ಕುಂದಾಪುರದ ಟಿಕೆಟ್ ನೀಡಿದ ಬಿಜೆಪಿಗೆ ಧನ್ಯವಾದಗಳು. ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಎಲ್ಲಾ ಮತಬಾಂಧವರು ಸಹಕರಿಸಿ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿದ್ದ ಎ.ಜಿ ಕೊಡ್ಗಿ ರಾಜಕೀಯಕ್ಕೆ ಕರೆದುಕೊಂಡು ಬಂದಿದ್ದರು. ಆರಂಭದ ಎರಡು ಅವಧಿಗಳಲ್ಲಿ ಹಾಲಾಡಿಯ ಗೆಲುವಿನ ಹಿಂದೆ ಕೊಡ್ಗಿ ಬೆಂಬಲ ಇತ್ತು. ಗುರುವಿನ ಋಣವನ್ನು ತೀರಿಸಲು ಎ ಜಿ ಕೊಡ್ಗಿ (AG Kodgi) ಅವರ ಪುತ್ರ ಕಿರಣ್ ಕೊಡ್ಗಿ ಅವರಿಗೆ ಈ ಬಾರಿ ಕುಂದಾಪುರದ ಟಿಕೆಟ್ ಕೊಡಿಸಲು ಹಾಲಾಡಿ ಉತ್ಸುಕರಾಗಿದ್ದಾರೆ. ಹಾಲಾಡಿ ಅವರು ತಮ್ಮ ಹಿತೈಷಿಗಳ ಜೊತೆ ಆಪ್ತರ ಜೊತೆ ಈ ಮಾತುಗಳನ್ನು ಹೇಳಿದ್ದಾರೆ. ಇದನ್ನೂ ಓದಿ: ನನ್ನದು ಮೌನ ವೃತ, ಪ್ರತಿಭಟಿಸಿ ಸಚಿವನಾಗೋದು ಧರ್ಮವಲ್ಲ: ಹಾಲಾಡಿ
ಹಾಲಾಡಿ ರಾಜಕೀಯ ನಿವೃತ್ತಿಯಾಗಿ ಕುಂದಾಪುರದ ಬಿಜೆಪಿ ಟಿಕೆಟ್ ಕೊಡ್ಗಿಗೆ ಸಿಕ್ಕರೆ ಇಡೀ ಜಿಲ್ಲೆಯ ರಾಜಕೀಯ ಚಿತ್ರಣ ಬದಲಾಗುತ್ತದೆ. ಹಾಲಾಡಿ ಬಂಟ ಸಮುದಾಯಕ್ಕೆ ಸೇರಿದ್ದು ಆ ಸಮುದಾಯಕ್ಕೆ ಬೇರೆ ಕಡೆ ಟಿಕೆಟ್ ಕೊಡಬೇಕಾಗುತ್ತದೆ. ಈ ಎಲ್ಲಾ ಲೆಕ್ಕಾಚಾರವನ್ನು ಇಟ್ಟುಕೊಂಡು ಜಿಲ್ಲೆಯ ಕೆಲ ಹಾಲಿ ಶಾಸಕರ ಟಿಕೆಟ್ ತಪ್ಪುವ ಸಾಧ್ಯತೆ ಇದೆ.