ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ: ಹೆಚ್‍ಡಿಕೆ

Public TV
1 Min Read
HDKumaraswamy 1

ಮಂಗಳೂರು: ಜಗದೀಶ್ ಶೆಟ್ಟರ್‌ರಂತಹ (Jagadish Shettar) ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ (BJP) ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜಗದೀಶ್ ಶೆಟ್ಟರ್ ನನ್ನೊಂದಿಗೆ ಯಾವುದೇ ಸಂಪರ್ಕದಲ್ಲಿ ಇಲ್ಲ. ಅಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ. ನಮ್ಮದು ಸಣ್ಣ ಪಕ್ಷ, ದೊಡ್ಡ ನಾಯಕರ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ಗೆ ಗುಡ್‌ಬೈ

Jagadish Shettar Hubli National Flag Congress Narendra Modi

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಯ ಆಂತರಿಕ ವಿಚಾರವಾಗಿದೆ. ಅವರೊಬ್ಬ ಅನುಭವಸ್ಥ ರಾಜಕಾರಣಿ, ಜನಸಂಘದ ಕಾಲದಿಂದ ಕೆಲಸ ಮಾಡಿದವರು. ಅವರಂತವರೇ ಇವತ್ತು ಇಂತಹ ತೀರ್ಮಾನ ಮಾಡಿದ್ದಾರೆ. ನಾನು ಈ ಹಿಂದೆ ಬಿಜೆಪಿಯ ಡಿಎನ್ ಬಗ್ಗೆ ಮಾತಾಡಿದ್ದೆ. ಪ್ರಸ್ತುತ ಬಿಜೆಪಿಯಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ್‌ನ್ನು ಯಾರು ಕ್ಷಮಿಸಲ್ಲ : ಬಿಎಸ್‍ವೈ ವಾಗ್ದಾಳಿ

Share This Article