ಮಂಡ್ಯ: ಜೀವನದಲ್ಲಿ ಕೊನೆ ಹಂತಕ್ಕೆ ಬಂದುಬಿಟ್ಟಿದ್ದೇನೆ, ದೇವರು ನನ್ನನ್ನು ಕರೆದುಕೊಂಡು ಬಿಡ್ತಾನೆ ಎಂದು ತಿಳಿದುಕೊಂಡಿದ್ದೀರಾ? ಮನಸ್ಸಿನಲ್ಲಿರುವ ಈ ಯೋಚನೆ ತೆಗೆದು ಹಾಕಿ. ಶಿವ ನಿಮ್ಮನ್ನು ಸದ್ಯಕ್ಕೆ ಕರೆದುಕೊಳ್ಳಲ್ಲ. ನೀವು ಮಾಡಲಿಕ್ಕೆ ಆಗದ ಸಾಧನೆ ನಾನು ಮಾಡುತ್ತೇನೆ. ಇದನ್ನು ನೀವು ನಿಮ್ಮ ಕಣ್ಣಾರೆ ನೋಡಬೇಕು. ನಿಮ್ಮ ಆಸೆಯನ್ನು ಮಕ್ಕಳಾಗಿ ಈಡೇರಿಸುವ ಸವಾಲು ಸ್ವೀಕರಿಸಿದ್ದೇನೆ. ಅಲ್ಲಿಯವರೆಗೂ ನೀವು ಬದುಕಿರುತ್ತೀರಿ. ಯಾವುದೇ ಕಾರಣಕ್ಕೂ ಮಾನಸಿಕ ಚಿಂತನೆಗೆ ಒಳಗಾಗಿ ನಿಮ್ಮ ಪ್ರಾಣ ಹೋಗಬಾರದು ಎಂದು ದೇವೇಗೌಡರ (HD Deve Gowda) ಬಗ್ಗೆ ಕುಮಾರಸ್ವಾಮಿ (HD Kumaraswamy) ಭಾವುಕರಾಗಿ ಮಾತನಾಡಿದರು.
Advertisement
ಕೆಆರ್ ಪೇಟೆಯಲ್ಲಿ (KR Pete) ಮಾತನಾಡಿದ ಹೆಚ್‌ಡಿಕೆ, ದೇವೇಗೌಡರು 60 ವರ್ಷ ರಾಜಕೀಯ ಮಾಡಿದ್ದಾರೆ. ಅದರಲ್ಲಿ ಅಧಿಕಾರ ಮಾಡಿದ್ದು 10 ತಿಂಗಳು ಪ್ರಧಾನ ಮಂತ್ರಿಯಾಗಿ, 15 ತಿಂಗಳು ಸಿಎಂ ಆಗಿ, 2-3 ವರ್ಷ ನೀರಾವರಿ ಮಂತ್ರಿಯಾಗಿ. ಉಳಿದ ವರ್ಷಗಳು ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದಾರೆ. ಬಡವರು, ರೈತರ ಪರ ಕಾರ್ಯಕ್ರಮ ತರುವುದು ದೇವೇಗೌಡರ ಕನಸು. ಅವರ ಕನಸು ನನಸು ಮಾಡಲಿಕ್ಕೆ ನಾನು ಶ್ರಮಪಡುತ್ತಿದ್ದೇನೆ ಎಂದು ನುಡಿದರು.
Advertisement
ನನಗೆ 2 ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ಈಗ 3ನೇ ಬಾರಿ ಮುಖ್ಯಮಂತ್ರಿಯಾಗಲು ನನ್ನ ಹೋರಾಟವಲ್ಲ. ನಾನು 3ನೇ ಬಾರಿ ಸಿಎಂ ಆದರೂ ಮಣ್ಣಿಗೆ ಹೋಗುವಾಗ ನಾನು ಮಾಜಿ ಮುಖ್ಯಮಂತ್ರಿಯೇ. ನನ್ನ ಹೋರಾಟ ಬಡವರ ಬದುಕು ಸರಿಪಡಿಸಲು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಭಾವುಕರಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಅಳೆದುತೂಗಿ ಹೈಕಮಾಂಡ್‌ಗೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಶಿಫಾರಸು ಮಾಡ್ತೇವೆ: ಜೋಶಿ
Advertisement
Advertisement
ನನ್ನ ಈ ಹೋರಾಟ ಸ್ವಾರ್ಥಕ್ಕಲ್ಲ, ನನಗೆ ಜಾತಿ ಇಲ್ಲ. ಜಾತಿಯ ವ್ಯಾಮೋಹ ಬೇಡ. ನನ್ನ ಮೇಲೆ ವಿಶ್ವಾಸ ಇಡಿ. ಸಿಕ್ಕ ಅವಕಾಶದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ಸೋಲಿಸಲು ನಮ್ಮವರೇ ಪ್ರಯತ್ನ ಮಾಡುತ್ತಿದ್ದಾರೆ. ಕೆಆರ್ ಪೇಟೆಯಲ್ಲಿ 30 ಸಾವಿರಕ್ಕೂ ಹೆಚ್ಚು ಅಂತರದಲ್ಲಿ ಜೆಡಿಎಸ್ ಗೆಲ್ಲಲಿದೆ. ಅದಕ್ಕೆಲ್ಲಾ ಬಲಿಯಾಗಬೇಡಿ ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದರು.
ಸಮೀಕ್ಷೆಗಳನ್ನು ರಾಷ್ಟ್ರೀಯ ಪಕ್ಷಗಳು ದುಡ್ಡು ಕೊಟ್ಟು ಮಾಡಿಸಿದ್ದಾರೆ. ಕಾಂಗ್ರೆಸ್, ಬಿಜೆಪಿಗಿಂತ 10-15 ಸ್ಥಾನ ಹೆಚ್ಚು ಗೆಲ್ಲುತ್ತೇವೆ. ಜೆಡಿಎಸ್ ಸ್ವತಂತ್ರ ಸರ್ಕಾರ ಬರಲು ಸಹಕರಿಸಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಹುಕ್ಕೇರಿ ಕ್ಷೇತ್ರದಲ್ಲಿ ನಿರ್ಣಯವಾಗದ ಉಮೇಶ್ ಕತ್ತಿ ಉತ್ತರಾಧಿಕಾರಿ: ಕುಟುಂಬದಲ್ಲಿ ಬಿರುಕಿಲ್ಲ ಎಂದು ಕಣ್ಣೀರಿಟ್ಟ ಕತ್ತಿ ಪುತ್ರ