ಶೆಟ್ಟರ್ ಅರ್ಥ ಮಾಡಿಕೊಳ್ಳಲು ಆಗಲಿಲ್ಲ, ಫೇಲ್ ಆದೆ: ಜೋಶಿ

Public TV
2 Min Read
Pralhad Joshi HR Ranganath

ಬೆಂಗಳೂರು: ಜಗದೀಶ್‌ ಶೆಟ್ಟರ್ (Jagadish Shettar) ಅವರನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಾನು ಕರ್ನಾಟಕದ ರಾಜಕಾರಣಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ.

ಪಬ್ಲಿಕ್‌ ಟಿವಿ ಮುಖ್ಯಸ್ಥ ಎಚ್‌ಆರ್‌ ರಂಗನಾಥ್‌ (HR Ranganath) ಜೊತೆ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಪ್ರಧಾನಿ ನರೇಂದ್ರ ಮೋದಿ (Narendra Modi) ಕೆಳಗೆ ಕೆಲಸ ಮಾಡುವುದಕ್ಕೆ ಖುಷಿ ಇದೆ. ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಿತ್ರ ಶೆಟ್ಟರ್‌ ಅವರನ್ನು ಮನವೊಲಿಸಲು ಯಾಕೆ ಸಾಧ್ಯವಾಗಿಲ್ಲ ಎಂಬ ಪ್ರಶ್ನೆಗೆ, ನಾವು ಬಹಳಷ್ಟು ಪ್ರಯತ್ನ ಪಟ್ಟೆವು. ಆದರೆ ಅವರು ಈ ಬಾರಿ ಚುನಾವಣೆಗೆ ನಿಲ್ಲಲೇಬೇಕು ಎಂದು ಹಠ ಹಿಡಿದಿದ್ದರು. ಯಾಕೆ ಅಷ್ಟೊಂದು ಹಠ ಹಿಡಿದಿದ್ದಾರೆ ಎಂಬುದನ್ನು ತಿಳಿಯಲು ನನಗೆ ಸಾಧ್ಯವಾಗಲಿಲ್ಲ ಎಂದು ಉತ್ತರಿಸಿದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ

ಶೆಟ್ಟರ್ ಈಗಲೂ ನನ್ನ ಒಳ್ಳೆಯ ಸ್ನೇಹಿತ. ರಾಜಕೀಯವಾಗಿ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಆದರೆ ಒಂದು ದಿನ ಶೆಟ್ಟರ್‌ ತಮ್ಮ ನಿರ್ಧಾರಕ್ಕೆ ಪಶ್ಚಾತ್ತಾಪ ಪಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 

ಮುಂದೆ ಲಿಂಗಾಯತ ಸಿಎಂ (Lingayat CM) ಎಂದು ಯಾಕೆ ಇನ್ನೂ ಘೋಷಣೆ ಮಾಡಿಲ್ಲ ಎಂಬ ಪ್ರಶ್ನೆಗೆ, ಅಧಿಕಾರ ಇದ್ದಾಗ ನಾವು ಎಲ್ಲಿಯೂ ಮುಂದಿನ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ. ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ನಾವು ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ. ಉತ್ತರಾಖಂಡದ ಚುನಾವಣೆಯ ಉಸ್ತುವಾರಿ ನನಗೆ ನೀಡಲಾಗಿತ್ತು. ಅಲ್ಲಿನ ಸಿಎಂ ಚುನಾವಣೆಯಲ್ಲಿ ಸೋತಿದ್ದರೂ ಮತ್ತೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿದ್ದೇವೆ ಎಂದರು.

 

ನನಗೆ ಲೋಕಸಭೆ ಚುನಾವಣೆ ಭಯ ಇಲ್ಲ. ಇಲ್ಲಿ ಬಿಜೆಪಿ, ಮೋದಿ ಫ್ಯಾಕ್ಟರ್ ಇದೆ. ರಾಜ್ಯದಲ್ಲಿ ಯಡಿಯೂರಪ್ಪ, ಬೊಮ್ಮಾಯಿ ನಮ್ಮ ನಾಯಕರು. ಈ ಬಾರಿ ನಾವು ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಏರುತ್ತೇವೆ. ಜೆಡಿಎಸ್‍ಗೆ 10-15 ಸೀಟ್ ಬರಬಹುದು. 2006ರ ನಂತರ ಜೆಡಿಎಸ್ ಜೊತೆ ಯಾವುದೇ ಸಂಬಂಧ ಇಲ್ಲ. ಸೆಕ್ಯುಲರ್‌ ಎಂದು ಹೇಳಿ ಕಾಂಗ್ರೆಸ್, ಜೆಡಿಎಸ್ ನಾಯಕರು ಸೇರುತ್ತಾರೆ ಎಂದು ಟಾಂಗ್‌ ನೀಡಿದರು.

Share This Article