ಬೆಂಗಳೂರು: ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್ (Congress) ಸೇರ್ಪಡೆ ಪೂರ್ವ ನಿಯೋಜಿತವಾಗಿದೆ. ಅವರ ಮಕ್ಕಳಿಗೆ ಮತ್ತು ಶ್ರೀಮತಿಗೆ ಟಿಕೆಟ್ ಕೊಡುತ್ತೇವೆ ಎಂದು ಹೇಳಿದರೂ ಒಪ್ಪದೇ ಹೋಗಿರುವುದು ನೋಡಿದರೆ ಮೊದಲೇ ಪ್ಲಾನ್ (Plan) ಮಾಡಿಕೊಂಡು ಹೋಗಿದ್ದಾರೆ ಎಂದು ಅನಿಸುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ (R.Ashok) ಟೀಕಿಸಿದರು.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಹೋಗಿದ್ದು ನನಗೆ ಆಶ್ಚರ್ಯ ಉಂಟುಮಾಡಿದೆ. ಮುಖ್ಯಮಂತ್ರಿ ಆಗಬೇಕು ಎನ್ನುವ ಕೊರಗು ಅವರಿಗೆ ಇದ್ದಿದ್ದರೆ ಕಾಂಗ್ರೆಸ್‌ಗೆ ಹೋಗಿದ್ದಾರೆ ಎನ್ನಬಹುದು. ಆದರೆ ಅವರಿಗೆ ಈ ರೀತಿಯಾದ ಕೊರಗು ಇರಲಿಲ್ಲ. ಅವರ ಕುಟುಂಬಕ್ಕೆ ಟಿಕೆಟ್ ಕೊಡುತ್ತೇವೆ ಎಂದರೂ ಹೋಗಿದ್ದಾರೆ. ಅವರ ಏರಿಯಾದಲ್ಲಿ ಏನೋ ಕೆಲಸ ಪೆಂಡಿಂಗ್ ಇದೆ ಎಂದಾಗಿದ್ದರೆ ಅವರ ಮಗ ಅಥವಾ ಶ್ರೀಮತಿ ಕೈಯಲ್ಲಿಯೇ ಮಾಡಿಸಬಹುದಿತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಶೆಟ್ಟರ್‌ನಿಂದ ಉತ್ತರ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ಸಿಗುವ ವಿಶ್ವಾಸವಿದೆ: ಖರ್ಗೆ
Advertisement
Advertisement
ಶೆಟ್ಟರ್ ಕಾಂಗ್ರೆಸ್‌ಗೆ ಹೋಗಿ ದುಡುಕಿನ ನಿರ್ಧಾರ ಮಾಡಿದ್ದಾರೆ. ಇದು ಒಳ್ಳೆಯದಲ್ಲ. ಅವರ ಕಷ್ಟ ಕಾಲದಲ್ಲಿ ಬಿಜೆಪಿ (BJP) ಅವರ ಜೊತೆಗಿತ್ತು. ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕಾದರೆ ಬಿಬಿ ಶಿವಪ್ಪನವರ (B.B.Shivappa) ಹೆಸರಿತ್ತು. ಇವರಿಗೆ ಬೆಂಬಲ ಇಲ್ಲದಿರುವ ಸಮಯದಲ್ಲಿ ಯಡಿಯೂರಪ್ಪ (B.S.Yediyurappa) ಹಾಗೂ ಅನಂತ್‌ಕುಮಾರ್ ಇವರ ಹೆಸರನ್ನು ಸೂಚಿಸಿ ಅವರಿಗೆ ಅವಕಾಶ ಮಾಡಿಕೊಟ್ಟರು. ಇದಾದ ಬಳಿಕ ಎಲ್ಲಾ ರೀತಿಯಾದ ಅಧಿಕಾರವನ್ನು ಅನುಭವಿಸಿದ್ದಾರೆ. ಇಷ್ಟೆಲ್ಲಾ ಅಧಿಕಾರವನ್ನು ಕೊಟ್ಟಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಹೋಗಿರುವುದು ಬಹಳ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿಕೊಂಡು ‘ಕೈ’ ಸೇರ್ಪಡೆ : ಶೆಟ್ಟರ್
Advertisement
Advertisement
ಯಡಿಯೂರಪ್ಪನವರು ನಮ್ಮ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕರು. ಅವರ ಮಟ್ಟಕ್ಕೆ ಇವರು ಯಾರೂ ಅವರ ಹತ್ತಿರ ಸುಳಿಯಲು ಆಗುವುದಿಲ್ಲ. ಆ ರೀತಿಯಾದ ವರ್ಚಸ್ಸು ಇವರಿಗಿಲ್ಲ. ಯಡಿಯೂರಪ್ಪನವರು ಏನು ಹೇಳುತ್ತಾರೋ ಅದನ್ನು ಮಾಡುತ್ತಾರೆ. ಬಿಜೆಪಿ ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎನ್ನುವುದು ಸುಳ್ಳು. ಯಾಕೆಂದರೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಕೂಡಾ ಲಿಂಗಾಯತರು. ಯಡಿಯೂರಪ್ಪನವರು ರಾಷ್ಟ್ರೀಯ ಸಂಸದೀಯ ಮಂಡಳಿಯಲ್ಲಿದ್ದಾರೆ. ಅದು ಉನ್ನತ ಹುದ್ದೆಯಾಗಿದೆ. ಈಗಾಗಲೇ ಯಡಿಯೂರಪ್ಪನವರು ಕ್ಷೇತ್ರಗಳಲ್ಲಿ ಓಡಾಡಿ ಬಿಜೆಪಿ ಗೆಲ್ಲಿಸುತ್ತೇವೆ ಎಂದು ಹೇಳಿದ್ದಾರೆ. ಅದರಂತೆ ನಾವು ನಡೆಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ತೊರೆದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ
ಸೋಮವಾರ ಪದ್ಮನಾಭನಗರ (Padmanabhanagar) ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಮಪತ್ರ (Nomination Papers) ಸಲ್ಲಿಕೆಗೂ ಮುನ್ನ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತೇನೆ. ಬಳಿಕ ಮಧ್ಯಾಹ್ನ ಒಂದು ಗಂಟೆಗೆ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಮಂಗಳವಾರ ಕನಕಪುರದಲ್ಲಿ (Kanakapura) ನಾಮಪತ್ರ ಸಲ್ಲಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲ ಕಾಂಗ್ರೆಸ್‌ಗೆ ಬರ್ತಿದ್ದಾರೆ: ಡಿಕೆಶಿ