ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ (Jagadish Shettar) ಟಿಕೆಟ್ ಸಿಗುವ ವಿಶ್ವಾಸವಿದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ನಗರದಲ್ಲಿ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯಲ್ಲಿ 52 ಜನ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಶೆಟ್ಟರ್‌ಗೆ ಟಿಕೆಟ್ ಸಿಗುವ ನೀರಿಕ್ಷೆ ಇದೆ. ಈಗಾಗಲೆ ನಮ್ಮ ಅಭಿಪ್ರಾಯವನ್ನು ಮುಖಂಡರ ಬಳಿ ಹೇಳಿದ್ದೇವೆ. ಎಲ್ಲವೂ ಸುಲಲಿತವಾಗಿ ಪರಿಹಾರ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಏ.17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಸುತ್ತೇನೆ: ಲಕ್ಷ್ಮಣ ಸವದಿ
Advertisement
Advertisement
ಕಾಂಗ್ರೆಸ್‍ನಂತೆ ವಂಶಕ್ಕೆ ಟಿಕೆಟ್ ಕೊಡಲ್ಲ
ಬಿಜೆಪಿಯಲ್ಲಿ (BJP) ಕಾಂಗ್ರೆಸ್‍ನಂತೆ (Congress) ಅಪ್ಪ ಮಕ್ಕಳಿಗೆ ಟಿಕೆಟ್ ಕೊಡುವುದಿಲ್ಲ. ಕಾಂಗ್ರೆಸ್ ಯೂಸ್ ಎಂಡ್ ಥ್ರೋ ಪಕ್ಷ, ಅಂತಹ ಪಕ್ಷಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೋಗಬಾರದು ಅನ್ನೋದು ನಮ್ಮ ಅಪೇಕ್ಷೆ. ಸವದಿ ಅವರಿಗೆ ನಮ್ಮ ಪಾರ್ಟಿ ಎಲ್ಲವನ್ನು ಕೊಟ್ಟಿದೆ. ಅವರನ್ನು ಉಪಮುಖ್ಯಮಂತ್ರಿಯಾಗಿ ಮಾಡಿದ್ದು ನಮ್ಮ ಪಕ್ಷ. ಇಲ್ಲಿ ಅವರಿಗೆ ಉತ್ತಮ ಭವಿಷ್ಯ ಇತ್ತು ಎಂದಿದ್ದಾರೆ.
Advertisement
Advertisement
ಬಿಜೆಪಿಯಲ್ಲಿ ಟಿಕೆಟ್‍ಗೆ ಬಹಳ ಅಭ್ಯರ್ಥಿಗಳಿದ್ದರು. ಇದರಿಂದ ಕೆಲವು ಕಡೆ ಗೊಂದಲ ಆಗಿದೆ. ಯಾವ ಪಕ್ಷ ಗೆಲ್ಲುತ್ತದೆಯೋ ಅಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ಇನ್ನೆರಡು ದಿನದಲ್ಲಿ ಪಕ್ಷದಲ್ಲಿ ಎದ್ದಿರುವ ಗೊಂದಲಗಳು ಬಗೆಹರಿಯುತ್ತವೆ. ನಮ್ಮೊಂದಿಗೆ ಪಕ್ಷದ ಕಾರ್ಯಕರ್ತರು ಜೊತೆಗೆ ನಿಲ್ಲುತ್ತಾರೆ ಎಂದಿದ್ದಾರೆ.
ಅಂಬೇಡ್ಕರ್ (Ambedkar) ದೇಶಕ್ಕೆ ಬಲವಾದ ಆರ್ಥಿಕ ಬುನಾದಿ ಹಾಕಿದ್ದಾರೆ. ಅವರಿಗೆ ಸಿಗಬೇಕಾದ ಪ್ರಾಶಸ್ತ್ಯ ಕಾಂಗ್ರೆಸ್ ಕಾಲದಲ್ಲಿ ಸಿಗಲಿಲ್ಲ. ನಾವು ಅಂಬೇಡ್ಕರ್ ಹುಟ್ಟಿದ ಸ್ಥಳ, ಅಧ್ಯಯನ ಸ್ಥಳ ಅಭಿವೃದ್ಧಿ ಮಾಡಿದ್ದೇವೆ. ಅವರಿಗೆ ಗೌರವ ಕೊಡುವ ಕೆಲಸ ಬಿಜೆಪಿ ಸರ್ಕಾರ ಮಾಡಿದೆ. ದೇಶದಲ್ಲಿ ಉತ್ತಮ ಸರ್ಕಾರ ಇದೆ. ಮೋದಿ ಪ್ರಧಾನಿ ಆಗಲು ಅಂಬೇಡ್ಕರ್ ಕಾರಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಂಪಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ