ಬೆಂಗಳೂರು: ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪನವರ (Kagodu Timmappa) ಪುತ್ರಿ ಡಾ.ರಾಜನಂದಿನಿ (Rajanandini) ಬುಧವಾರ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಸಾಗರ (Sagar) ಕ್ಷೇತ್ರದ ಕೈ ಟಿಕೆಟ್ ತಪ್ಪಿದ ಹಿನ್ನೆಲೆ ಅವರು ಬಿಜೆಪಿಗೆ (BJP) ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಟಿಕೆಟ್‍ಗಾಗಿ ಬಾರೀ ಲಾಬಿ ನಡೆಸಿದ್ದರು. ಆದರೆ ಕಾಗೋಡು ತಿಮ್ಮಪ್ಪ ಅವರ ಸೋದರ ಅಳಿಯ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಈ ಬಾರಿಯ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಧಾನಗೊಂಡು ಅವರು ಬಿಜೆಪಿ ಕಡೆ ಮುಖ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಬಂಡಾಯ..!
ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ (Yediyurappa) ಮಾತನಾಡಿ, ನಾಡು ಕಂಡ ಅಪರೂಪದ ರಾಜಕಾರಣಿ, ಕಾಗೋಡು ತಿಮ್ಮಪ್ಪ ಪುತ್ರಿ ಕಾಂಗ್ರೆಸ್ (Congress) ಸ್ಥಾನಮಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ಪಕ್ಷಕ್ಕೆ ಶಕ್ತಿ ತಂದಿದೆ. ಹಿಂದುಳಿದ ವರ್ಗಕ್ಕೆ ಸೇರಿದ ರಾಜನಂದಿನಿ ವೃತ್ತಿಯಲ್ಲಿ ವೈದ್ಯರು. ಇವರ ಸೇರ್ಪಡೆಯಿಂದ ನಮ್ಮ ಅಭ್ಯರ್ಥಿಗಳು ಗೆಲುವಿಗೆ ಸಹಕಾರಿಯಾಗಲಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರಿಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಇರಿದಂತಾಗಿದೆ – ಕಾಗೋಡು ತಿಮ್ಮಪ್ಪ