ಬೆಂಗಳೂರು: ಕರ್ನಾಟಕ ಚುನಾವಣಾ (Karnataka Election) ಪ್ರಚಾರಕ್ಕೆ ತಮಿಳುನಾಡಿನ ಇಬ್ಬರು ನಾಯಕರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.
ಡಿಎಂಕೆ ಸಂಸದೆ ಕನಿಮೋಳಿ (Kanimozhi) ಮತ್ತು ತಮಿಳು ಚಿತ್ರ ರಂಗದ ಸೂಪರ್ ಸ್ಟಾರ್ ಕಮಲ್ ಹಾಸನ್ (Kamal Haasan) ಅವರಿಗೂ ಆಹ್ವಾನ ನೀಡಿದೆ. ಇದನ್ನೂ ಓದಿ: ರೈತರ ಶೇ.85ರಷ್ಟು ಹಣವನ್ನ ಕಾಂಗ್ರೆಸ್ಸಿನವರೇ ನುಂಗಿ ನೀರು ಕುಡಿದಿದ್ದಾರೆ – ಮೋದಿ ಸಿಡಿಮಿಡಿ
ತಮಿಳು (Tamil) ಪ್ರಾಬಲ್ಯದ ಬೆಂಗಳೂರು, ಶಿವಮೊಗ್ಗ ಹಾಗೂ ಕೋಲಾರ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇವರಿಗೆ ಆಹ್ವಾನ ನೀಡಿದ್ದಾರೆ.
ಬಿಜೆಪಿ ಅಭ್ಯರ್ಥಿಗಳ ಪರ ಈಗಾಗಲೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಪ್ರಚಾರ ನಡೆಸುತ್ತಿದ್ದಾರೆ. ಈಗ ಕಾಂಗ್ರೆಸ್ ತಮಿಳುನಾಡು ನಾಯಕರ ಮೂಲಕ ಪ್ರಚಾರ ನಡೆಸಲು ಮುಂದಾಗಿದೆ.