ಕಲಬುರಗಿ: ಜೆಡಿಎಸ್ (JDS) ರಾಜ್ಯ ಕಾರ್ಯದರ್ಶಿಯಾಗಿದ್ದ, ರೈತ ಹೋರಾಟಗಾರ ಕೇದಾರಲಿಂಗಯ್ಯ ಹಿರೇಮಠ (Kedarlingayya Hiremath) ಮಾಜಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಶಾಸಕ ಡಾ.ಅಜಯಸಿಂಗ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬುಧವಾರ ಕಾಂಗ್ರೆಸ್ (Congress) ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ (Ramalinga Reddy) ಅವರು ಕೇದಾರಲಿಂಗಯ್ಯ ಅವರಿಗೆ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು. ಇದನ್ನೂ ಓದಿ: ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯತ್ನಿಸಿ ಸೋತರು; ರಾಜ್ಯ ರಾಜಕಾರಣದಲ್ಲೇ ಗೆಲುವು ಕಂಡರು!
Advertisement
Advertisement
ಜೇವರ್ಗಿ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧಿಸಿ ನಾಲ್ಕು ಬಾರಿಯೂ ಮತಗಳಿಕೆಯಲ್ಲಿ ಮೂರನೇ ಸ್ಥಾನ ಪಡೆದಿದ್ದ ಕೇದಾರಲಿಂಗಯ್ಯ ಹಿರೇಮಠ ಅವರು ಜೇವರ್ಗಿ ಕ್ಷೇತ್ರದಲ್ಲಿ ಐದನೇ ಬಾರಿಗೆ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಜೆಡಿಎಸ್ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ (H.D.Kumaraswamy) ಅವರು ಪ್ರಕಟಿಸಿದ್ದ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇದಾರಲಿಂಗಯ್ಯ ಅವರ ಹೆಸರು ಇರಲಿಲ್ಲ. ಹೀಗಾಗಿ ಅಂದಿನಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈಗ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಇದನ್ನೂ ಓದಿ: ಮತದಾನಕ್ಕೂ ಮುನ್ನ ಬಿ.ಸಿ.ಪಾಟೀಲ್ ಗೆಲುವು ಘೋಷಿಸಿದ ನಟಿ ಪ್ರೇಮಾ
Advertisement
Advertisement
ಕೇದಾರಲಿಂಗಯ್ಯ ಜೊತೆ ಅವರ ಕಾರ್ಯಕರ್ತರು, ಅಭಿಮಾನಿಗಳು ಸೇರಿ ನೂರಾರು ಜನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಳಿಕ ಮಾತನಾಡಿದ ರಾಮಲಿಂಗ ರೆಡ್ಡಿ, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದೆ. ಶ್ರಮಿಕ ವರ್ಗ, ಕಾರ್ಮಿಕ ಮತ್ತು ರೈತರ ಪರ ಕಾಂಗ್ರೆಸ್ ಉತ್ತಮ ಆಡಳಿತ ನೀಡಲಿದೆ. ಜಿಲ್ಲೆಯ ಎಲ್ಲ 9 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು. ಇದನ್ನೂ ಓದಿ: ಏ.27ರಂದು ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶ- ಕೊಟ್ಟ ಮಾತು ಉಳಿಸಿಕೊಂಡ ಬಿಜೆಪಿಗೆ ಪ್ಲಸ್ ಆಗುತ್ತಾ?
ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯಿಂದ ಬಡವರನ್ನು ಮತ್ತಷ್ಟು ಬಡತನಕ್ಕೆ ದೂಡಿದೆ. ಕೇಂದ್ರದಲ್ಲಿ 9 ವರ್ಷಗಳ ಬಿಜೆಪಿ (BJP) ಆಡಳಿತದಿಂದ 20 ಕೋಟಿ ಜನ ಇನ್ನೂ ಬಡತನ ರೇಖೆಗಿಂತ ಕೆಳಗೆ ಇಳಿದಿದ್ದಾರೆ. ಅದೇ ಮನಮೋಹನ್ ಸಿಂಗ್ (Manmohan Singh) ಸರ್ಕಾರದಲ್ಲಿ 23 ಕೋಟಿ ಜನ ಬಡವರು ಬಡತನ ರೇಖೆಗಿಂತ ಮೇಲೆ ಬಂದಿದ್ದರು ಎಂದರು. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಸತ್ಯೇಂದರ್ ಜೈನ್ ಜಾಮೀನು ಅರ್ಜಿ ವಜಾ
ಶಾಸಕ ಅಜಯ್ ಸಿಂಗ್, ಮಾಜಿ ಸಚಿವ ಶರಣಬಸಪ್ಪಾ ದರ್ಶನಾಪುರ್, ಮಾಜಿ ಶಾಸಕ ಬಿ.ಆರ್ ಪಾಟೀಲ್, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: SSLC ಪರೀಕ್ಷಾ ಕೇಂದ್ರದಲ್ಲಿ ನಕಲು – ಮುಖ್ಯೋಪಾಧ್ಯಾಯ ಸೇರಿ 15 ಸಿಬ್ಬಂದಿ ಅಮಾನತು