ಧಾರವಾಡ: ಮೇ 10 ರಂದು ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 11ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಧಾರವಾಡ (Dharwad) ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ (Gurudatta Hegde) ತಿಳಿಸಿದ್ದಾರೆ.
ಧಾರವಾಡ ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 13 ರಂದು ಮತ ಎಣಿಕೆ ನಡೆಯುವುದರಿಂದ ಆ ದಿನವೂ ಬೆಳಿಗ್ಗೆ 6 ಗಂಟೆಯಿಂದ ಮೇ 14ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನ ನಿಷೇಧಿಸಲಾಗಿದೆ. ಈ ಹಿನ್ನೆಯೆಲ್ಲಿ ಜಿಲ್ಲೆಯಲ್ಲೂ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕಲಾಗಿದೆ ಎಂದರು. ಇದನ್ನೂ ಓದಿ: ನಾಳೆ ನನ್ನ ಶುಲ್ಕ ಮರೆಯುವುದಿಲ್ಲ – ವಿದ್ಯಾರ್ಥಿಗಳಿಗೆ ಬರೆಯುವ ಶಿಕ್ಷೆ ವಿಧಿಸಿದ್ದ ಟೀಚರ್ ಸಸ್ಪೆಂಡ್
Advertisement
Advertisement
ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 7,65,160 ಪುರುಷ ಮತದಾರರು, 7,57,831 ಮಹಿಳಾ ಮತದಾರರಿದ್ದಾರೆ. ಇತರೆ 89 ಮತದಾರರಿದ್ದು, ಒಟ್ಟು 15,23,080 ಮತದಾರರಿದ್ದಾರೆ. ಈಗಾಗಲೇ 80 ವರ್ಷ ಮೇಲ್ಪಟ್ಟ ಒಟ್ಟು 1,615 ಮಂದಿ ಮತದಾನ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಚನ್ನಬಸಪ್ಪ ಹುಲ್ಲತ್ತಿ ಮನೆ ಮೇಲೆ IT ರೇಡ್ – ಕೋಟಿ ಕೋಟಿ ಹಣ ಸೀಜ್
Advertisement
Advertisement
ಜಿಲ್ಲೆಯಲ್ಲಿ ಒಟ್ಟು 1,636 ಮುಖ್ಯ ಮತಗಟ್ಟೆಗಳು ಹಾಗೂ 6 ಆಕ್ಸಲರಿ ಮತಗಟ್ಟೆಗಳನ್ನ ತೆರೆಯಲಾಗಿದೆ. ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೆ 58 ಪ್ರಕರಣಗಳನ್ನ ದಾಖಲಿಸಿಕೊಳ್ಳಲಾಗಿದೆ. 1.58 ಕೋಟಿ ಹಣ ಸೀಜ್ ಮಾಡಲಾಗಿದೆ. 1.42 ಕೋಟಿ ಮೌಲ್ಯದ ಲಿಕ್ಕರ್ ಸೀಜ್ ಮಾಡಲಾಗಿದೆ. ಮತದಾನ ಪೂರ್ವ 48 ಗಂಟೆಗಳ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಮೇ 8ರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಹೇಳಿದ್ದಾರೆ.
ಮತದಾನಕ್ಕೆ ಒಟ್ಟು 8,319 ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಒಟ್ಟು 1,642 ಮತಗಟ್ಟೆಗಳ ಪೈಕಿ 824 ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಮಾಡಲಾಗಿದೆ. 175 ಮತಗಟ್ಟೆಗಳಿಗೆ ಮೈಕ್ರೊ ಅಬ್ಸರ್ವರ್‌ಗಳನ್ನ ನಿಯೋಜಿಸಲಾಗಿದೆ. ಮತದಾನದ ದಿನ ಸರ್ಕಾರಿ ಶಾಲಾ, ಕಾಲೇಜು, ಕಚೇರಿಗಳು, ವಿವಿಧ ಸಂಘ, ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ವಿವರಿಸಿದರು.