ನವದೆಹಲಿ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧೆ ಮಾಡುವುದಾದರೆ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪರ್ಧೆ ಮಾಡಬೇಕು ಎಂದು ಮಂಡ್ಯ ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭೇಟಿಯಾದ ನಿಯೋಗದ ಸದಸ್ಯರು ಹೊಸ ಮನವಿ ಮಾಡಿದ್ದಾರೆ. ಮಾಜಿ ಸಚಿವ ಆತ್ಮಾನಂದ ನೇತೃತ್ವದಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಸ್ಥಳೀಯ ನಾಯಕರು ಮಂಡ್ಯದಲ್ಲಿ (Mandya) ಡಿ.ಕೆ ಶಿವಕುಮಾರ್ (DK Shivakumar) ಸ್ಪರ್ಧಿಸಬೇಕು ಇಲ್ಲದಿದ್ದರೆ ಸ್ಥಳೀಯ ಮೂಲ ಕಾಂಗ್ರೆಸ್ (Congress) ನಾಯಕರಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
Advertisement
Advertisement
ಮಂಡ್ಯದಲ್ಲಿ ಹತ್ತಕ್ಕೂ ಅಧಿಕ ಮಂದಿ ಟಿಕೆಟ್ ಆಕಾಂಕ್ಷೆಯಲ್ಲಿದ್ದಾರೆ. ಅಮರಾವತಿ ಚಂದ್ರಶೇಖರ್, ಸಿದ್ದಾರೂಢ ಸತೀಶ್ ಗೌಡ, ರಾಮಲಿಂಗಯ್ಯ, ಬಿ.ಸಿ. ಶಿವಾನಂದ, ಹೆಚ್.ಸಿ ಶಿವಲಿಂಗೇಗೌಡ ಸೇರಿದಂತೆ ಹಲವು ನಾಯಕರು ಪಕ್ಷ ಸಂಘಟನೆಯಲ್ಲಿದ್ದಾರೆ. ಆದರೆ ಈ ನಡುವೆ ಪಕ್ಷ ಸೇರಿರುವ ಕೆಲವು ನಾಯಕರು ಟಿಕೆಟ್‌ಗಾಗಿ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಮಸ್ಯೆಗಳನ್ನು ಸರಿಪಡಿಸಿಕೊಂಡು ಟೋಲ್ ಕಲೆಕ್ಟ್ ಮಾಡಿ: ನಿಖಿಲ್
Advertisement
Advertisement
ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಸ್ಥಳೀಯ ನಾಯಕರಿಗೆ ಆದ್ಯತೆ ನೀಡಬೇಕು. ಒಂದು ವೇಳೆ ಮೂಲ ಕಾಂಗ್ರೆಸ್ಸಿರಿಗೆ ಟಿಕೆಟ್ ನೀಡದಿದ್ದರೇ ನಾವು ನೀವು ನೀಡುವ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ ಎಂದು ಒತ್ತಡವನ್ನು ಹಾಕಿದ್ದಾರೆ. ಮಂಡ್ಯ ನಾಯಕರ ಬೇಡಿಕೆಗೆ ಖರ್ಗೆ ಅವರು ಸ್ಪಂದಿಸಿದ್ದು, ಮೂಲ ಕಾಂಗ್ರೆಸ್ ನಾಯಕರಿಗೆ ಮಣೆ ಹಾಕುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಗುಳಿಗನ ನಿಂದಿಸಿದ ಆರಗ- ಬಿಜೆಪಿಯ ಧರ್ಮ ಪ್ರೇಮದ ಬಣ್ಣ ಕಳಚುತ್ತಿದೆ ಎಂದ ದೈವಾರಾಧಕರು