ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆ (Assembly Election) ಹೊಸ್ತಿಲಲ್ಲಿ ಎಲ್ಲಾ ಪಕ್ಷಗಳು ಪ್ರಣಾಳಿಕೆ (Manifesto) ಬಿಡುಗಡೆ ಮಾಡುತ್ತಿವೆ. ಈ ನಡುವೆ ಬೆಳಗಾವಿಯ (Belagavi) ಪಕ್ಷೇತರ ಅಭ್ಯರ್ಥಿಗಳಿಬ್ಬರು ವಿನೂತನ ರೀತಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರೂ ಹುಬ್ಬೇರಿಸಿ ನೋಡುವಂತೆ ಮಾಡಿದ್ದಾರೆ.
ಅರಭಾವಿ (Arabhavi) ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ್ (Gokak) ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ ವಿಶೇಷವಾಗಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವುದಾಗಿ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮೋದಿಗೆ ಚುನಾವಣೆ ಅಂದ್ರೆ ಭಯನಾ?: ವಿಶ್ವನಾಥ್
ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರಾಗಿದ್ದು ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ್‌ನಿಂದ ಸ್ಪರ್ಧೆಗೆ ಇಳಿದಿದ್ದಾರೆ. ಎರಡೂ ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ರಾಮತೀರ್ಥ ಹೆಲಿಪ್ಯಾಡ್‌ನಲ್ಲಿ ಬೆಂಕಿ