ಬೆಂಗಳೂರು: ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುವ ಮೂಲಕ ಕಾನೂನು ಉಲ್ಲಂಘಿಸಿದವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳು ಜನಸಾಮಾನ್ಯರಿಗೆ ವಿವಿಧ ರೀತಿಯ ಉಚಿತ ಉಡುಗೊರೆ, ಆಮಿಷಗಳನ್ನು ಒಡ್ಡುತ್ತಿರುವುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಈ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಕಾನೂನು/ನಿಯಮಗಳಂತೆ ಕ್ರಮವಹಿಸಿ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗದುಕೊಳ್ಳುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: Union Budget 2023 – ಮಧ್ಯ ಕರ್ನಾಟಕ, ಮಲೆನಾಡು, ಹಳೇ ಮೈಸೂರು ಮತಗಳ ಮೇಲೆ ಬಿಜೆಪಿ ಕಣ್ಣು
Advertisement
Advertisement
ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಯ ಕುರಿತು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಸದರಿ ಸಭೆಯಲ್ಲಿ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಕುರಿತು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ.
Advertisement
ಮತದಾರರಿಗೆ ಮದ್ಯಪಾನ ಸೇರಿದಂತೆ ವಿವಿಧ ರೀತಿಯ ಉಡುಗೂರೆಗಳ ಆಮಿಷಗಳನ್ನು ಕೂಪನ್‍ಗಳ ಮೂಲಕ ವಿತರಿಸುತ್ತಿರುವ ಬಗ್ಗೆ ಸಹ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಅಂತರರಾಜ್ಯ ಚೆಕ್ ಪೋಸ್ಟ್‌ಗಳನ್ನು ತೆರೆಯಲು ಹೇಳಿದ್ದಾರೆ. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?
Advertisement
ಸಮಾಜದಲ್ಲಿ ನಡೆಯುತ್ತಿರುವ ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಸುಗಮ ಚುನಾವಣೆಗೆ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ವಿವಿಧ ಇಲಾಖೆಗಳ ಮೂಲಕ ಸ್ವೀಕರಿಸಲಾಗುವ ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮ ಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಾಣಿಕೆ ಮೇಲೆ ನಿಗಾವಹಿಸಬೇಕು. ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು. ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೂಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k