ವಿಜಯನಗರ: ಸಚಿವ ಆನಂದ್ ಸಿಂಗ್ (Anand Singh) ಅವರ ಸಹೋದರಿ ರಾಣಿ ಸಂಯುಕ್ತ ಸಿಂಗ್ (Rani Samyukta Singh) ಅವರು ಶನಿವಾರ ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದಾರೆ.
ರಾಣಿ ಸಂಯುಕ್ತ ಸಿಂಗ್ ಬಿಜೆಪಿಯ ಮಹಿಳಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆಯಾಗಿದ್ದರು. ವಿಜಯನಗರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು, ಸಚಿವ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ ಸಿಂಗ್ ಅವರಿಗೆ ಪಕ್ಷ ಟಿಕೆಟ್ ಘೋಷಣೆ ಮಾಡಿದ್ದ ಬೆನ್ನಲ್ಲೆ ಅಸಮಾಧಾನ ಹೊರ ಹಾಕಿದ್ದರು. ಪಕ್ಷದ ನಡೆಯಿಂದ ಬೇಸರಗೊಂಡಿದ್ದ ಅವರು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಕಮಲ ಬಿಟ್ಟು ಕೈ ಹಿಡಿದಿದ್ದಾರೆ. ಇದನ್ನೂ ಓದಿ: ಬಿಜೆಪಿ, ಪಕ್ಷೇತರ ಅಭ್ಯರ್ಥಿ ಬೆಂಬಲಿಗರ ನಡುವೆ ಮಾರಾಮಾರಿ – ಹಲ್ಲೆಯಿಂದ ತಪ್ಪಿಸಿಕೊಳ್ಳಲು ಮನೆಯ ಮೇಲ್ಛಾವಣೆ ಏರಿದ್ರು!
ಕಳೆದ ಎರಡು ದಿನಗಳಿಂದ ರಾಣಿ ಸಂಯುಕ್ತ ಅವರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದರು. ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ (Surjewala), ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar), ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದೀಗ ಬೆಂಬಲಿಗರೊಂದಿಗೆ ರಾಣಿ ಸಂಯುಕ್ತ ಸಿಂಗ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕಲ್ಲ: ನಿಖಿಲ್ ಕುಮಾರಸ್ವಾಮಿ