ಮಂಗಳೂರು: ಮೂಡುಶೆಡ್ಡೆಯಲ್ಲಿ (Moodushedde) ನಡೆದ ಅಹಿತಕರ ಘಟನೆಗಳಿಗೆ ಮಿಥುನ್ ರೈ (Mithun Rai) ಪ್ರಚೋದನೆಯೇ ಕಾರಣ ಎಂದು ಮೂಡಬಿದರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮನಾಥ್ ಕೋಟ್ಯಾನ್ (Umanatha Kotian) ಕಿಡಿಕಾರಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮತಯಂತ್ರಗಳನ್ನು ಡಿಮಸ್ಟರಿಂಗ್ ಕ್ಷೇತ್ರಕ್ಕೆ ಒಯ್ಯುತ್ತಿದ್ದಾಗ ಬಿಜೆಪಿ (BJP) ಕಾರ್ಯಕರ್ತರು ಪ್ರಧಾನಿ ಮೋದಿ (Narendra Modi) ಪರ ಘೋಷಣೆ ಕೂಗಿದ್ದಾರೆ. ಅಲ್ಲಿಗೆ ಬಂದ ಕಾಂಗ್ರೆಸ್ (Congress) ಅಭ್ಯರ್ಥಿ ಮಿಥುನ್ ರೈ ಬಿಜೆಪಿ ಕಾರ್ಯಕರ್ತರು ಸೇರಿದ್ದ ಬೂತ್ ಎದುರೇ ಕಾರು ನಿಲ್ಲಿಸಿದ್ದಾರೆ. ಅವರು ಬಿಜೆಪಿ ಕಾರ್ಯಕರ್ತರನ್ನು ಪ್ರಶ್ನಿಸಿದ್ದಲ್ಲದೇ ಅವರನ್ನು ತಳ್ಳಾಡಿದ್ದಾರೆ. ಈ ವೇಳೆ ಅವರ ಜೊತೆಗಿದ್ದ ಬೆಂಬಲಿಗರು ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಪ್ರಚೋದನಕಾರಿ ನಡವಳಿಕೆಗೆ ಬಿಜೆಪಿ ಕಾರ್ಯಕರ್ತರು ಪ್ರತಿರೋಧ ತೋರಿದ್ದಾರೆ ಎಂದರು. ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ
Advertisement
Advertisement
ಘಟನೆಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಈ ಎಲ್ಲಾ ಘಟನೆಗಳಿಗೆ ಮಿಥುನ್ ರೈ ಮತ್ತು ಅವರ ಬೆಂಬಲಿಗರೇ ನೇರ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದಲ್ಲಿ ಬಳಕೆ ಮಾಡಿದ ಇವಿಎಂ ಬಳಸಿಲ್ಲ: ಸುರ್ಜೇವಾಲಾ ಆರೋಪಕ್ಕೆ ಆಯೋಗದ ಉತ್ತರ