ಬೆಳಗಾವಿ: ಮತದಾರರಿಗೆ ಹಂಚುವ ಸಲುವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಚುನಾವಣಾ ಅಧಿಕಾರಿಗಳು (Election Officers) ಜಪ್ತಿಪಡಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramadurga) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಮದುರ್ಗ ಬಿಜೆಪಿ (BJP) ಅಭ್ಯರ್ಥಿ ಚಿಕ್ಕರೇವಣ್ಣ ಬುಧವಾರ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ (Nomination Papers) ಸಲ್ಲಿಸಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪ ಹೊರಿಸಲಾಗಿತ್ತು. ರಾಮದುರ್ಗ ತುರನೂರು ಬಳಿ ಹಣ ಹಂಚಿಕೆ ಮಾಡುತ್ತಿದ್ದು, ಹಣ ಹಂಚುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ದಿಢೀರ್ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
Advertisement
Advertisement
ಈ ಖಚಿತ ಮಾಹಿತಿಯ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಕಾರು ಚಾಲಕನನ್ನು ಬಂಧಿಸಿದ್ದಾರೆ. ಹಣವನ್ನು (Money) ವಶಕ್ಕೆ ಪಡೆದುಕೊಂಡ ಬಳಿಕ ಈ ಪ್ರಕರಣವನ್ನು ಆದಾಯ ತೆರಿಗೆ (Income Tax) ಇಲಾಖೆಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ : ಸೋಮಣ್ಣ ಸವಾಲು