ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಮೀಸಲು ಕ್ಷೇತ್ರದ (Mudigere Assembly Constituency) ಬಿಜೆಪಿ ಅಭ್ಯರ್ಥಿಯಾಗಲು ನಗರದ ಐಡಿಎಸ್‌ಜಿ ಕಾಲೇಜಿನ ಗ್ರಂಥಪಾಲಕ ಶೀಘ್ರವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿದ್ದಾರೆ.
ಆರ್‌ಎಸ್‌ಎಸ್ (RSS) ಕಟ್ಟಾಳು ನರೇಂದ್ರ (Narendra) ಅವರೇ ಜಿಲ್ಲೆಯ ಮೂಡಿಗೆರೆ ಮೀಸಲು ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ಎಂದು ಬಿಂಬಿತವಾಗಿದೆ. ಹಾಗಾಗಿ ಆರ್‌ಆರ್‌ಎಸ್ ಈಗಾಗಲೇ ಅವರನ್ನು ಸಂಘದ ಎಲ್ಲಾ ಹುದ್ದೆಯಿಂದ ಮುಕ್ತಿಗೊಳಿಸಿದೆ.
Advertisement
Advertisement
ಟಿಕೆಟ್ ಘೋಷಣೆಯಾದ ಕೂಡಲೇ ಗ್ರಂಥಪಾಲಕರ ಹುದ್ದೆಗೂ ನರೇಂದ್ರ ರಾಜೀನಾಮೆ ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ. ಮೂಡಿಗೆರೆಯಲ್ಲಿ ಮೂರು ಬಾರಿ ಶಾಸಕರಾಗಿರುವ ಎಂ.ಪಿ.ಕುಮಾರಸ್ವಾಮಿ ಹಾಲಿ ಶಾಸಕರಾಗಿದ್ದಾರೆ. ಆದರೂ ಬಿಜೆಪಿ ಹೊಸ ಮುಖಕ್ಕೆ ಮಣೆ ಹಾಕಲು ಮುಂದಾಗಿದೆ. ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ (MP Kumaraswamy) ಪಕ್ಷದೊಳಗೆ ತೀವ್ರ ವಿರೋಧ ಇರುವುದರಿಂದ ಬಿಜೆಪಿ ಗುಜರಾತ್ ಮಾದರಿಯಲ್ಲಿ ಹೊಸ ಮುಖಕ್ಕೆ ಮಣೆ ಹಾಕಲು ಚಿಂತಿಸಿದೆ.
Advertisement
ಗುಜರಾತ್ ಮಾಡೆಲ್ (Gujarat Model) ಜಾರಿಯಾಗಿದ್ದೇ ಆದಲ್ಲಿ ಕುಮಾರಸ್ವಾಮಿಗೆ ಟಿಕೆಟ್ ಕೈ ತಪ್ಪುವುದು ಗ್ಯಾರಂಟಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೂಡಿಗೆರೆಯಲ್ಲಿ ಹಾಲಿ ಐದಾರು ಜನ ಟಿಕೆಟ್‍ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ನರೇಂದ್ರ ಹೆಸರು ಅಚ್ಚರಿ ಎಂಬಂತೆ ಹೊರಬಿದ್ದಿದೆ. ಇದನ್ನೂ ಓದಿ: ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
Advertisement
ಬಿಜೆಪಿ ಹಾಗೂ ಆರ್‌ಎಸ್‌ಎಸ್ ನರೇಂದ್ರ ಅವರಿಗೆ ಕ್ಷೇತ್ರದಲ್ಲಿ ಓಡಾಡುವಂತೆ ಸೂಚಿಸಿದ್ದು, ಸಂಘದ ಎಲ್ಲಾ ಜವಾಬ್ದಾರಿಯಿಂದ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಕೂಡ ಹಲವು ಬಾರಿ ಕುಮಾರಸ್ವಾಮಿ ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರು. ಕಾಂಗ್ರೆಸ್-ಜೆಡಿಎಸ್ ಸೇರುತ್ತಾರೆಂಬ ಊಹಾಪೋಹಗಳು ಕ್ಷೇತ್ರದಲ್ಲಿ ಸಾಕಷ್ಟು ಚರ್ಚೆಯಾಗಿದ್ದವು. ಕ್ಷೇತ್ರದಲ್ಲಿ ಬಿಜೆಪಿಗರೇ ಶಾಸಕ ಕುಮಾರಸ್ವಾಮಿಯನ್ನು ಒಪ್ಪಲು ಸುತಾರಾಂ ಸಿದ್ಧರಿಲ್ಲ. ಹಾಗಾಗಿ ಮೀಸಲು ಕ್ಷೇತ್ರ ಹಾಗೂ ಹಿಂದುತ್ವದ ಬೆಲ್ಟ್ ಆಗಿರುವ ಮಲೆನಾಡಲ್ಲಿ ಗೆಲ್ಲುವ ಕುದುರೆಗೆ ಬಿಜೆಪಿ ಮಣೆ ಹಾಕಲು ಮುಂದಾಗಿದೆ.
ಹಲವು ದಶಕಗಳಿಂದ ಸಂಘದ ಕಾರ್ಯಕರ್ತರಾಗಿರುವ ನರೇಂದ್ರ ಅವರನ್ನು ಬಿಜೆಪಿ ಕಣಕ್ಕಿಳಿಸಲು ಎಲ್ಲಾ ಸಿದ್ಧತೆ ನಡೆಸಿದೆ. ಟಿಕೆಟ್ ಘೋಷಣೆಯಾದ ಕೂಡಲೇ ನರೇಂದ್ರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಆದರೆ ದೀಪಕ್ ದೊಡ್ಡಯ್ಯ, ವಿಜಯ್‍ಕುಮಾರ್ ಹಾಗೂ ವಿಭಾ ಸುಷ್ಮಾ ಟಿಕೆಟ್‍ಗಾಗಿ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಆದರೆ ಸಂಘವೇ ನರೇಂದ್ರ ಅವರಿಗೆ ಕ್ಷೇತ್ರದಲ್ಲಿ ಓಡಾಡಲು ಸೂಚಿಸಿರುವುದರಿಂದ ಉಳಿದವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k