ಮಡಿಕೇರಿ: ಇದು ನನ್ನ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ (Election) ಬಿಜೆಪಿ (BJP) ಭದ್ರಕೋಟೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಶಾಸಕ ಅಪ್ಪಚ್ಚು ರಂಜನ್ (Appachu Ranjan) ಹೇಳಿದ್ದಾರೆ.
ಸೋಮವಾರಪೇಟೆಯಲ್ಲಿ ಸುದ್ದಿಗಾರರೊದಿಗೆ ಮಾತಾನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯ ನಾಯಕರು ಬಿಜೆಪಿ ಭದ್ರಕೋಟೆ ಕೊಡಗಿನಲ್ಲಿ (Kodagu) ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸದಿಂದ ಟಿಕೆಟ್ ಘೋಷಣೆ ಮಾಡಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಂಡು ಹೋಗುತ್ತೇವೆ. ಈ ಬಾರಿ ಮಡಿಕೇರಿ (Madikeri) ಕ್ಷೇತ್ರದ ಜನರು ನಮ್ಮ ಪರವಾಗಿ ಇದ್ದಾರೆ. ನಾವು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕಾರ್ಯಗಳೆ ನಮಗೆ ಶ್ರೀರಕ್ಷೆಯಾಗುತ್ತದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಬಂಡಾಯದ ಸಿಡಿಲು – ಕೈ ಕಟ್ಟಾಳು ಕಾಗೋಡು ಪುತ್ರಿ ಬಿಜೆಪಿಗೆ ಸೇರ್ಪಡೆ
Advertisement
Advertisement
ಪ್ರಕೃತಿ ವಿಕೋಪದ ಸಂದರ್ಭದಿಂದ ಹಿಡಿದು ಕೋವಿಡ್ ಸಮಯದವರೆಗೂ ನಾವು ಜನರೊಂದಿಗೆ ಇದ್ದೆವು. ಕಳೆದ ಬಾರಿ ಮಡಿಕೇರಿ ಕ್ಷೇತ್ರದ ಬಡ ಜನತೆ ನಮಗೆ ಆಶೀರ್ವಾದ ಮಾಡಿದರು. ಈ ಬಾರಿಯು ಅವರು ನಮಗೆ ಬೆಂಬಲ ಕೊಟ್ಟು ಗೆಲುವಿಗೆ ಕಾರಣರಾಗುತ್ತಾರೆ. ಈಗಿರುವ ಕಾಂಗ್ರೆಸ್ (Congress) ಅಭ್ಯರ್ಥಿ ಹೊರ ಜಿಲ್ಲೆಯವರು. ಅವರಿಗೆ ಕ್ಷೇತ್ರದ ಜನರು ಮಣೆ ಹಾಕುವುದಿಲ್ಲ. ಈ ಬಾರಿ 30 ಸಾವಿರ ಮತಗಳಿಂದ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಇರಿದಂತಾಗಿದೆ – ಕಾಗೋಡು ತಿಮ್ಮಪ್ಪ
Advertisement
Advertisement
ಈಗಾಗಲೇ ಕಾರ್ಯಕರ್ತರು ಹುರುಪಿನಿಂದ ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿರುತ್ತದೆ. ಮತದಾರರ ಬಳಿ ಕೊನೆಯ ಬಾರಿ ಆಶೀರ್ವಾದ ಮಾಡಲು ಹೇಳುತ್ತೇವೆ. ಅಲ್ಲದೇ ಮುಂದಿನ ದಿನಗಳಲ್ಲಿ ಕಾರ್ಯಕರ್ತರನ್ನು ಉತ್ತಮ ನಾಯಕರನ್ನಾಗಿ ಮಾಡಿ ಅವರ ಪರವಾಗಿ ಕೆಲಸ ಮಾಡಲು ನಿಶ್ಚಯಿಸಿದ್ದೇನೆ ಎಂದರು. ಇದನ್ನೂ ಓದಿ: ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್. ಶಂಕರ್