ಬೆಳಗಾವಿ: ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ ಎಂದು ಪರಿಗಣಿಸಿ ಚುನಾವಣೆಯನ್ನು (Election) ಎದುರಿಸುತ್ತೇನೆ. ಜನರ ಆಶೀರ್ವಾದದಿಂದ 7ನೇ ಬಾರಿಗೆ ಶಾಸಕನಾಗುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ.
ಗೋಕಾಕ್ (Gokak) ಬಿಜೆಪಿ (BJP) ಅಭ್ಯರ್ಥಿಯಾಗಿ ನಾಮಪತ್ರ (Nomination Papers) ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತು ನಾಮಪತ್ರ ಸಲ್ಲಿಸಲು ಯುವಕರ ದಂಡೇ ಹರಿದು ಬಂದಿದೆ. ನಾನು ಯಾವತ್ತೂ ನನ್ನ ಎದುರಾಳಿಯನ್ನು ಪ್ರಬಲ ಅಭ್ಯರ್ಥಿ ಎಂದು ಪರಿಗಣಿಸುತ್ತೇನೆ. ಜನ ಹೆಚ್ಚಿದ್ದಾರೆ ಎಂದು ಹಿಗ್ಗುವುದಿಲ್ಲ. ಹಾಗೆಯೇ ಕಡಿಮೆ ಜನ ಸೇರಿದ್ದಾರೆ ಎಂದು ಕುಗ್ಗುವುದಿಲ್ಲ. ನನ್ನ ಎದುರಾಳಿ ಪ್ರಬಲ ಅಭ್ಯರ್ಥಿ ಎಂದು ತಿಳಿದು ಚುನಾವಣೆ ಎದುರಿಸುತ್ತೇನೆ. ಜನರ ಆಶೀರ್ವಾದದಿಂದ 7ನೇ ಬಾರಿಗೆ ಶಾಸಕನಾಗುತ್ತೇನೆ ಎಂದರು. ಇದನ್ನೂ ಓದಿ: ಸೋಮಣ್ಣನನ್ನು ಬಲವಂತವಾಗಿ ವರುಣಾದಲ್ಲಿ ನಿಲ್ಲಿಸಿದ್ದಾರೆ: ಸಿದ್ದರಾಮಯ್ಯ
Advertisement
Advertisement
ಅಮರನಾಥ ಜಾರಕಿಹೊಳಿ (Amaranath Jarkiholi) ನಾಮಪತ್ರ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ನನ್ನ ಪುತ್ರ ಮಂಗಳವಾರ ಡಮ್ಮಿ ನಾಮಪತ್ರ ಸಲ್ಲಿಸಿದ್ದಾರೆ. ಅದನ್ನು ವಾಪಸ್ ತೆಗೆದುಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯ ಫೀಲ್ಡ್‌ಗೆ ಎಂಟ್ರಿ
Advertisement
Advertisement
ತನಗೆ ಹೈಕಮಾಂಡ್ (High Command) ಜವಾಬ್ದಾರಿ ನೀಡಿದ ವಿಚಾರದ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೇನೆ. ಜಿಲ್ಲೆಯಲ್ಲಿ ಹಲವು ನಾಯಕರು ಇದ್ದಾರೆ. ನಾನು ಮೇ 10ರ ವರೆಗೆ ಯಾವುದೇ ಪತ್ರಿಕಾಗೋಷ್ಠಿ ನಡೆಸಲು, ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ವಿಚಿತ್ರವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಚುನಾವಣಾ ಫಲಿತಾಂಶ ಬರುವವರೆಗೆ ನಾನು ಮಾತನಾಡಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿ ರೋಡ್ ಶೋ ಮುಖಾಮುಖಿ – ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು