ಬೆಂಗಳೂರು: ಕಾಂಗ್ರೆಸ್ (Congress) ಬಸ್ ಹೊರಟಿದೆ. ಹೋಗ್ತಾ, ಹೋಗ್ತಾ ಬ್ರೇಕ್‍ಫೇಲ್ ಆಗುತ್ತಿದೆ. ಇನ್ನೊಂದು ಪಂಚರತ್ನ ಯಾತ್ರೆ ಆರಂಭವಾಗಿದೆ. ವಿಜಾಪುರ ತಲುಪುವಾಗ ಹಾಸನದಲ್ಲಿ ಪಂಕ್ಚರ್ ಹಾಕುವ ಪ್ರಯತ್ನಗಳು ಪ್ರಾರಂಭವಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ್ ಭವನದಲ್ಲಿ ಇಂದು (ಸೋಮವಾರ) ಕಾಂಗ್ರೆಸ್- ಜೆಡಿಎಸ್ ಮುಖಂಡರ ಮತ್ತು ಬೆಂಬಲಿಗರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಯಾತ್ರೆಗಳು ಮುಂದಿನ ಚುನಾವಣೆವರೆಗೆ ಪೂರ್ತಿ ಆಗುವುದಿಲ್ಲ. ಆದರೆ, ಬಿಜೆಪಿ ಸಂಕಲ್ಪ ಯಾತ್ರೆ ವಿಜಯಿ ಯಾತ್ರೆಯಾಗಿ ಪರಿವರ್ತನೆ ಹೊಂದುತ್ತಿದೆ. ಬಿಜೆಪಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆದ್ದೇಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Advertisement
Advertisement
ಪಕ್ಷ ಬದಲಾವಣೆ ಕೇವಲ ವಾಸು ಅವರ ಮನೆಯಲ್ಲಿ ಆಗಿಲ್ಲ. ಒಬ್ಬ ಕಾಂಗ್ರೆಸ್ ಶಾಸಕನ ಮನೆಯಲ್ಲಿ ಅವರ ಮಗ ಬಿಜೆಪಿ ಸೇರಿದಂತೆ, ಮುಂದಿನ ದಿನದಲ್ಲಿ ಸಿದ್ರಾಮಣ್ಣನ ಮಗನೂ, ಖರ್ಗೆ ಅವರ ಮಗನೂ, ಡಿಕೆಶಿ ಮನೆಯಿಂದಲೂ ಬಿಜೆಪಿಗೆ ಬರುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಮತ್ತೆ ಡಬಲ್ ಎಂಜಿನ್ ಸರ್ಕಾರ ರಚಿಸಿ ಅಭಿವೃದ್ಧಿಯ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.
Advertisement
ಬಿಜೆಪಿ ಕೆಲಸವನ್ನು ನೋಡುತ್ತದೆ. ಮನೆತನದ, ಕುಟುಂಬದ ಹಿನ್ನೆಲೆ ನೋಡುವುದಿಲ್ಲ. ಬಿಜೆಪಿ ಸಮಾಜದ ಜೊತೆಗಿನ ಒಡನಾಟ, ಸಿದ್ಧಾಂತದ ಮೇಲಿನ ನಂಬಿಕೆ, ಕೆಲಸಗಳನ್ನು ಗುರುತಿಸಿ ಅವಕಾಶ ಕೊಡುತ್ತದೆ. ಇದಕ್ಕೆ ಚಹಾ ಮಾರಾಟ ಮಾಡುತ್ತಿದ್ದ ಹುಡುಗ ಪ್ರಧಾನಿ ಆಗಿದ್ದು, ಭಿತ್ತಿಪತ್ರ ಹಂಚುವ ಹುಡುಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು ಉದಾಹರಣೆ ಎಂದರು.
Advertisement
ಕೋವಿಡ್ ಲಸಿಕೆ ಸಂಶೋಧನೆ ಆದ ಬಳಿಕ ಪ್ರಧಾನಿಯವರು ತಾವು ಮತ್ತು ಪಕ್ಷದವರಿಗೆ ಮೊದಲ ಆದ್ಯತೆ ಕೊಡಲಿಲ್ಲ. ಬದಲಾಗಿ ಆರೋಗ್ಯ ಕ್ಷೇತ್ರ, ಪೂರಕವಾಗಿ ಕೆಲಸ ಮಾಡುವವರಿಗೆ ಆದ್ಯತೆ ನೀಡಿದರು. ಕಾಂಗ್ರೆಸ್ ಆಡಳಿತದಲ್ಲಿ ಇದ್ದರೆ ಸೋನಿಯಾ, ರಾಹುಲ್, ಪ್ರಿಯಾಂಕಾ ಅವರಿಗೆ ಮೊದಲು ಲಸಿಕೆ ಕೊಡುತ್ತಿದ್ದರು ಎಂದು ತಿಳಿಸಿದರು. ಪ್ರಧಾನಿಯವರು ತಮ್ಮ ತಾಯಿ ನಿಧನರಾದಾಗ ದೆಹಲಿಯಿಂದ ಸಾಮಾನ್ಯ ಕಾರ್ಯಕರ್ತರಂತೆ ಬಂದು ಕೇವಲ ಮೂರು ಗಂಟೆಗಳಲ್ಲೇ ತಮ್ಮ ಕರ್ತವ್ಯಕ್ಕೆ ಹಿಂತಿರುಗಿದರು. ನರೇಂದ್ರ ಮೋದಿಯವರ ಈ ಆದರ್ಶವನ್ನು ಬಿಜೆಪಿ ಸದಾ ಪಾಲಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಟಿಕೆಟ್ ಕೊಡಲು ‘ತ್ರೀ’ ಸೂತ್ರಕ್ಕೆ ಬಿಜೆಪಿ ಮೊರೆ
ಇಡೀ ದೇಶ ಮತ್ತು ರಾಜ್ಯದಲ್ಲಿ ಇಂದು ರಾಜಕೀಯ ಪರಿವರ್ತನೆ ಆಗುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದು, ರಾಜ್ಯದ ರಾಜಕೀಯ ತಿರುವನ್ನು ಪಡೆದಿದೆ. 5 ವರ್ಷಗಳ ಹಿಂದೆ ರಾಜ್ಯದ ಜನರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತಿರಸ್ಕರಿಸಿದ್ದರು. ಜನರು ಮತದಾನದ ಮೂಲಕ ಬಿಜೆಪಿಗೆ ಅತಿ ಹೆಚ್ಚಿನ ಗೌರವ ಕೊಟ್ಟಿದ್ದರು. ಆದರೆ, ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶದಿಂದ ಕುಟುಂಬ ವಾದ ಮತ್ತು ಪರಿವಾರ ವಾದ ಒಂದಾಗಿ ಅನೈತಿಕವಾಗಿ ಸರ್ಕಾರ ರಚಿಸಿದ್ದರು ಎಂದು ಆಕ್ಷೇಪಿಸಿದರು.
ಸರ್ಕಾರ ರಚಿಸಿ ಒಂದು ವರ್ಷ ಕಾಲ ಆ ರಥ ಹೊರಡಲೇ ಇಲ್ಲ. ಇದರಿಂದ ಬೇಸತ್ತು ರಾಜ್ಯದಲ್ಲಿ ಮೊದಲ ಬಾರಿಗೆ 17 ಶಾಸಕರು ರಾಜೀನಾಮೆ ಕೊಟ್ಟು ವಿರೋಧ ಪಕ್ಷಕ್ಕೆ ಬೆಂಬಲ ಕೊಟ್ಟರು. ಬಳಿಕ ರಾಜಕೀಯ ಪರಿವರ್ತನೆ ಆಗಿದೆ. ಇವತ್ತು ಯಡಿಯೂರಪ್ಪ ಅವರ ಮಾರ್ಗದರ್ಶನ ಮತ್ತು ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ. ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ, ಬಿಜೆಪಿಗೆ ಭವಿಷ್ಯವಿದೆ ಎಂದು ನಿರ್ಧರಿಸಿ ಹತ್ತಾರು ಜನರು ಬಿಜೆಪಿ ಸೇರಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ತುಮಕೂರು ನಗರದ ಮುಂದಿನ ಶಾಸಕ ನಾನೇ: ಪ್ರಚಾರ ಆರಂಭಿಸಿದ ಆಕಾಂಕ್ಷಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k