ರಾಮನಗರ: ಕನಕಪುರದಲ್ಲಿ ಪ್ರಧಾನಿ ಮೋದಿ (Narendra Modi) ಹಾಗೂ ಗೃಹ ಸಚಿವ ಅಮಿತ್ ಶಾ (Amit Shah) ಚುನಾವಣಾ ತಂತ್ರಗಳು ಫಲಿಸುವುದಿಲ್ಲ ಎಂದು ಸಂಸದ ಡಿ.ಕೆ ಸುರೇಶ್ (D.K Suresh) ಹೇಳಿದ್ದಾರೆ.
ಕನಕಪುರದಲ್ಲಿ (Kanakapur) ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧೆ ವಿಚಾರವಾಗಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಹಿಂದೆ ಡಿಕೆ ಶಿವಕುಮಾರ್ ಮಾಜಿ ಪ್ರಧಾನಿ ದೇವೇಗೌಡ (H. D. Deve Gowda) ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಚುನಾವಣೆ ಎದುರಿಸಿದ್ದರು. ಇಡೀ ಜೀವನವನ್ನೇ ನಾವು ಹೋರಾಟವಾಗಿ ಮಾಡಿಕೊಂಡು ಬಂದಿದ್ದೇವೆ. ಬಿಜೆಪಿಯ ತಂತ್ರಗಳ ಎದುರು ಸ್ಪರ್ಧಿಸುವುದು ದೊಡ್ಡ ವಿಚಾರವಲ್ಲ. ನನಗೆ ರಾಜಕೀಯ ಹೊಸದಲ್ಲ ರಾಜಕೀಯದ ಅನುಭವವಿದೆ ಎಂದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಡಿಕೆ ಶಿವಕುಮಾರ್ ಕೇವಲ ಅರ್ಜಿ ಹಾಕಿ ರಾಜ್ಯ ಸುತ್ತಲು ಆಗಲ್ಲ: ಸಿಪಿ ಯೋಗೇಶ್ವರ್
Advertisement
Advertisement
ಪದ್ಮನಾಭನಗರದಿಂದ ಶಿವಕುಮಾರ್ ಸಹೋದರ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರ ಕೇಳಿ ಬಂದಿತ್ತು. ಕನಕಪುರದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಬಿಜೆಪಿ ಹೈಕಮಾಂಡ್ ಅಶೋಕ್ ಅವರಿಗೆ ಟಿಕೆಟ್ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಅಶೋಕ್ ವಿರುದ್ಧ ಡಿಕೆ ಸುರೇಶ್ ಅವರನ್ನು ಕಣಕ್ಕೆ ಇಳಿಸಿದರೆ ಉತ್ತಮ ಎಂಬ ಸಲಹೆ ವ್ಯಕ್ತಪಡಿಸಿದ್ದರು.
Advertisement
Advertisement
ಆರ್.ಅಶೋಕ್‍ಗೆ (R. Ashoka) ಟಿಕೆಟ್ ನೀಡಿದ ವಿಚಾರವಾಗಿ ಬಿಜೆಪಿ ನಾಯಕರು ಡಿ.ಕೆ ಶಿವಕುಮಾರ್ ವಿರುದ್ಧ ಪ್ರಬಲ ಒಕ್ಕಲಿಗ ನಾಯಕ ಆರ್. ಅಶೋಕ್‍ರನ್ನು ಕಣಕ್ಕಿಳಿಸಲಾಗಿದೆ. ಈ ಚುನಾವಣೆ ಗೆಲ್ಲುವ ಭರವಸೆ ಇದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ?