ಮೈಸೂರು: ಕರ್ನಾಟಕದಲ್ಲಿ (Karnataka) ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಅಂತ ಪ್ರಧಾನಿ ಮೋದಿ (Narendra Modi) ಪಟ್ಟ ತೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ (Mysuru) ಸುಮಾರು 4 ಕಿ.ಮೀವರೆಗೆ ಮೋದಿ ರೋಡ್ ಶೋ (Road Show) ನಡೆಸಿದರು.
ಮತದಾನಕ್ಕೆ ಇನ್ನು 10 ದಿನ ಬಾಕಿ ಇದ್ದು ರೋಡ್‍ಶೋ, ರ‍್ಯಾಲಿಗಳನ್ನು ತೀವ್ರಗೊಳಿಸಿದ್ದಾರೆ. 2ನೇ ದಿನವಾದ ಇವತ್ತು ಕೋಲಾರ, ಚನ್ನಪಟ್ಟಣ, ಬೇಲೂರು, ಮೈಸೂರಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಕೋಲಾರ, ಚನ್ನಪಟ್ಟಣ, ಬೇಲೂರಿನಲ್ಲಿ ಬೃಹತ್ ಸಮಾವೇಶದ ಬಳಿಕ ಮೈಸೂರಿನ ಓವೆಲ್ ಮೈದಾನದಲ್ಲಿ ಇಳಿದ ಮೋದಿ ಬಳಿಕ ರೋಡ್ ಶೋ ನಡೆಸಿದರು.
Advertisement
Advertisement
ನಿನ್ನೆ ಬೆಂಗಳೂರಿನಲ್ಲಿ ನಡೆಸಿದಂತೆ ಅರಮನೆ ನಗರಿ ಮೈಸೂರಿನಲ್ಲಿ ಇವತ್ತು ಸುಮಾರು 4 ಕಿ.ಮೀ. ರೋಡ್ ಶೋ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಅವರು ಕೇಸರಿ ಶಾಲು ಧರಿಸಿ ಗಮನ ಸೆಳೆದರು. ರೋಡ್ ಶೋದ ರಸ್ತೆ ಇಕ್ಕೆಲೆಗಳಲ್ಲಿ ಕೇಸರಿ ಕಾರ್ಯಕರ್ತರು, ಅಭಿಮಾನಿಗಳು ಮೋದಿ ನೋಡಿ ಪುಳಕಿತರಾದರು. ದಾರಿಯುದ್ಧಕ್ಕೂ ಹೂಮಳೆ ಸುರಿಸಿದರು. ಹೂ ಹಾಕುವಾಗ ಅಭಿಮಾನಿಯೊಬ್ಬನ ಮೊಬೈಲ್ ಅಚಾನಕ್ ತೂರಿ ಬಂದ ಘಟನೆಯೂ ನಡೆಯಿತು. ಮೊಬೈಲ್ ಪ್ರಚಾರ ವಾಹನದ ಮೇಲ್ಗಡೆ ಬಿತ್ತು.ಇದನ್ನೂ ಓದಿ: ಕಾಲಿಗೆ ಬೀಳಲು ಬಂದ ನಾಯಕರಿಗೆ ಬುದ್ಧಿ ಹೇಳಿದ ಮೋದಿ
Advertisement
Advertisement
ಗನ್‍ಹೌಸ್ ಸರ್ಕಲ್‍ನಿಂದ ಆರಂಭವಾದ ಪವರ್ ಶೋ, ಕಾಪೋರೇಷನ್ ಸರ್ಕಲ್, ಸಿಟಿ ಬಸ್ ನಿಲ್ದಾಣ, ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದ ಸರ್ಕಲ್, ಮಿಲೀನಿಯಂ ಸರ್ಕಲ್‍ನಲ್ಲಿ ಸಾಗಿ ಅಂತ್ಯವಾಯಿತು. ಮೋದಿ ಜೊತೆ ಈಶ್ವರಪ್ಪ, ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ರಾಮದಾಸ್ ಇದ್ದರು. ಈ ರೋಡ್ ಶೋ ಮೂಲಕ, ಸಿದ್ದರಾಮಯ್ಯ ಸೇರಿದಂತೆ 3 ಜಿಲ್ಲೆಗಳಿಗೆ ಮೋದಿ ಸಂದೇಶ ರವಾನಿಸಿದರು. ನಾಳೆ ಮೋದಿ ಪ್ರಚಾರಕ್ಕೆ ವಿರಾಮ ಇದ್ದು, ನಾಡಿದ್ದು ಮತ್ತೆ ರಾಜ್ಯಕ್ಕೆ ಬರಲಿದ್ದಾರೆ. ಇದನ್ನೂ ಓದಿ: ನಮ್ಮ ಜೊತೆ ಮೋದಿ ಇದ್ದಾರೆ, ಕಾಂಗ್ರೆಸ್ ಜೊತೆ ಭ್ರಷ್ಟರಿದ್ದಾರೆ: ಆರ್.ಅಶೋಕ್