ರಾಮನಗರ: ಪುತ್ರನಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ(Anitha Kumaraswamy) ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ(Ramangara) ಕ್ಷೇತ್ರದಿಂದ ಪುತ್ರ ನಿಖಿಲ್(Nikhil Kumaraswamy) ಸ್ಪರ್ಧಿಸಲಿದ್ದಾನೆ ಎಂದು ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.
ರಾಮನಗರದ ಹಳೇ ಬಸ್ ನಿಲ್ದಾಣದಲ್ಲಿ ಪಂಚರತ್ನ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಖಿಲ್ ರಾಮನಗರದ ಅಭ್ಯರ್ಥಿ ಎಂದು ಪ್ರಕಟಿಸಿದ್ದಾರೆ. ನಿಖಿಲ್ ಹೆಸರು ಘೋಷಣೆ ಆಗುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಘಾರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಕ್ಸರ್, ಬೌಂಡರಿಗಳ ಸುರಿಮಳೆ – ಭಾರತಕ್ಕೆ ಅಂಧರ ವಿಶ್ವಕಪ್
ನಾನು ದೇವರ ಮುಂದೆ ನಿಂತಾಗ ನನ್ನ ಪತಿ ಹಾಗೂ ಪುತ್ರನ ಏಳಿಗೆಯನ್ನು ಬಯಸುತ್ತೇನೆ. ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಯಾವುದೇ ಗೊಂದಲಕ್ಕೂ ಎಡೆಮಾಡಿಕೊಡಬೇಡಿ ಎಂದು ಹೇಳಿ ಅನಿತಾ ಕುಮಾರಸ್ವಾಮಿ ಭಾವುಕರಾದರು.