ಬೆಂಗಳೂರು: ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ವೇಳಾಪಟ್ಟಿಯಂತೆ ಈಗಾಗಲೇ ಚುನಾವಣೆ (Election) ಘೋಷಿಸಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.
ನಾಮಪತ್ರಗಳನ್ನು ಸಲ್ಲಿಸಲು ಸಮಯವನ್ನು ನಿಗದಿಪಡಿಸಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್. ಶಂಕರ್
Advertisement
Advertisement
ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿ ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಚುನಾವಣಾಧಿಕಾರಿಗಳ ಕಚೇರಿಗೆ ಪ್ರವೇಶಿಸಲು ಅವಕಾಶವಿದ್ದು, 100 ಮೀಟರ್ ವ್ಯಾಪ್ತಿಯಲ್ಲಿ 3 ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿರುತ್ತದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಏಪ್ರಿಲ್ 24ರಂದು ಮಧ್ಯಾಹ್ನ 3 ಗಂಟೆಯೊಳಗಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇದನ್ನೂ ಓದಿ: ರಾಜಕಾರಣ ನನಗೆ ಹೊಸದಲ್ಲ, ಹೊಂದಾಣಿಕೆ ಮಾತೇ ಇಲ್ಲ: ಡಿಕೆಶಿ
Advertisement
Advertisement
ರಾಜ್ಯದಲ್ಲಿ ಈಗಾಗಲೇ ಚುನಾವಣೆಗೆ ಅವಶ್ಯವಿರುವ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, 146 ವೆಚ್ಚ ನಿರ್ವಹಣಾ ವೀಕ್ಷಕರು, 120 ಸಾಮಾನ್ಯ ವೀಕ್ಷಕರು ಸೇರಿದಂತೆ 37 ಪೊಲೀಸ್ ವೀಕ್ಷಕರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಯಶಸ್ವಿಯಾಗಿದ್ದೇವೆ, ಯಾವ ಬಂಡಾಯಕ್ಕೆ ಹೆದರಬೇಡಿ – ಬೊಮ್ಮಾಯಿಗೆ ಹೈಕಮಾಂಡ್ ಭರವಸೆ
ಗುರುವಾರ ಅಧಿಕೃತ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುತ್ತಿದ್ದು, ಮತದಾನದ ಸಮಯ ಸೇರಿದಂತೆ ಇತರೆ ಪ್ರಮುಖ ವಿಷಯಗಳನ್ನು ಅಧಿಸೂಚನೆ ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ (Press Release) ತಿಳಿಸಿರುತ್ತಾರೆ. ಇದನ್ನೂ ಓದಿ: ಮತ್ತೆ ಜೆಡಿಎಸ್ ಬಾಗಿಲು ತಟ್ಟಿದ ದತ್ತಾ