ರಾಮನಗರ: ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ನಾಮಪತ್ರದ ವಿರುದ್ಧ ಸಲ್ಲಿಸಿದ್ದ ಆಕ್ಷೇಪಣೆಯನ್ನು ಪರಿಶೀಲನೆ ಮಾಡಿ ಚುನಾವಣಾಧಿಕಾರಿಗಳು ನಾಮಪತ್ರವನ್ನು ಸ್ವೀಕಾರ ಮಾಡಿದ್ದಾರೆ. ಈ ಬಗ್ಗೆ ನಮ್ಮ ಬಿಜೆಪಿ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ (BJP) ಪರ ವಕೀಲ ಎಲ್.ಎನ್ ಹೆಗ್ಗಡೆ ತಿಳಿಸಿದ್ದಾರೆ.
Advertisement
ರಾಮನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅವರ ಆದಾಯ ತೆರಿಗೆ ವಿಚಾರದಲ್ಲಿ ಸಾಕಷ್ಟು ತಪ್ಪುಗಳಿರುವುದು ಗಮನಕ್ಕೆ ಬಂದಿತ್ತು. ಅಫಿಡವಿಟ್‍ನಲ್ಲಿ ಕೆಲವೊಂದು ಕಡೆ ನಿಲ್ ಎಂದು ತೋರಿಸಿದ್ದಾರೆ. ಸರ್ಕಾರಕ್ಕೆ ಕಟ್ಟ ಬೇಕಾದ ತೆರಿಗೆಯನ್ನು ಕಟ್ಟದೆ ಉಳಿಸಿಕೊಂಡಿದ್ದಾರೆ. ಆದರೆ ಚುನಾವಣಾಧಿಕಾರಿಗಳು ಅದನ್ನ ಗಮನಕ್ಕೆ ತೆಗೆದುಕೊಂಡಿರಲಿಲ್ಲ. ನಾವು ಅದನ್ನು ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದೇವೆ. ಈ ಬಗ್ಗೆ ಆಕ್ಷೇಪಣಾ ಅರ್ಜಿಸಲ್ಲಿಸಿದ್ದೆವು ಎಂದಿದ್ದಾರೆ. ಇದ್ನನೂ ಓದಿ: ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ : BL ಸಂತೋಷ್
Advertisement
Advertisement
ಸಲ್ಲಿಸಿದ್ದ ಆಕ್ಷೇಪಣಾ ಅರ್ಜಿಯನ್ನು ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿ ನಾಮಪತ್ರ ಸ್ವೀಕಾರ ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿರುತ್ತದೆ. ಈ ಬಗ್ಗೆ ನಮ್ಮ ಅಭ್ಯರ್ಥಿಯೊಂದಿಗೆ ಚರ್ಚೆ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದ್ದಾರೆ. ಇದ್ನನೂ ಓದಿ: ಡಿಕೆಶಿಗೆ ಬಿಗ್ ರಿಲೀಫ್ – ನಾಮಪತ್ರ ಸ್ವೀಕೃತ