ಬೆಂಗಳೂರು: ಕರ್ನಾಟಕ ಚುನಾವಣೆಯ (Karnataka Election) ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ (PM Narendra Modi) ರೋಡ್ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನ 2 ರಿಂದ ರಾತ್ರಿ 7:30 ರವರೆಗೆ ಪರ್ಯಾಯ ರಸ್ತೆಗಳ ಬಳಕೆ ಮಾಡುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಗರದಲ್ಲಿನ ಕೆಲ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದು ಬದಲಿ ರಸ್ತೆಗಳಲ್ಲಿ ಸಂಚಾರ ಮಾಡಬೇಕೆಂದು ಪೊಲೀಸರು ವಿನಂತಿ ಮಾಡಿದ್ದಾರೆ. ಶನಿವಾರ ಸಂಜೆ ಮಾಗಡಿ ನೈಸ್ ರಸ್ತೆಯಿಂದ ಸುಮನಹಳ್ಳಿಯವರೆಗೆ ಸುಮಾರು 4.5 ಕಿ.ಮೀ ರೋಡ್ ಶೋ (Road Show) ನಡೆಸಲಿದ್ದಾರೆ.
ಈ ಕೆಳಕಂಡ ರಸ್ತೆಗಳ ಬದಲಿಗೆ ಪರ್ಯಾಯ ರಸ್ತೆಗಳನ್ನು ಬಳಸಿ:
ಹಳೆ ವಿಮಾನ ನಿಲ್ದಾಣ ರಸ್ತೆ, ಕೇಂಬ್ರಿಡ್ಜ್, ಲೇಔಟ್ ರಸ್ತೆ, ಕಬ್ಬನ್ ರಸ್ತೆ, ಡಿಕನ್ಸನ್ ರೋಡ್, ಲಾಲ್ ಬಾಗ್ ವೆಸ್ಟ್ ಗೇಟ್ ರಸ್ತೆ, ಅಂಬೇಡ್ಕರ್ ರಸ್ತೆ, ಕೆ.ಆರ್. ಸರ್ಕಲ್, ನೃಪತುಂಗ ರಸ್ತೆ ಕೃಂಬಿಗಲ್ ರಸ್ತೆ, ದೇವಾಂಗ ರಸ್ತೆ, ಆರ್.ವಿ. ಕಾಲೇಜ್ ರಸ್ತೆ, ಲಾಲ್ ಬಾಗ್ ಮುಖ್ಯ ರಸ್ತೆ, ಬಸವನಗುಡಿ 5) ಅಡಿ ಕೆನರಾ ಬ್ಯಾಂಕ್ ರಸ್ತೆ ಇದನ್ನೂ ಓದಿ: ಧಮ್ ಇದ್ದರೆ ಮೀಸಲಾತಿಯನ್ನು ಮುಟ್ಟಿ ನೋಡಿ: ಕಾಂಗ್ರೆಸ್ಗೆ ಬೊಮ್ಮಾಯಿ ಸವಾಲು
ಬದಲಿ ಮಾರ್ಗಗಳು ಯಾವುದು?
ಮಾಗಡಿ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಬರುವ ವಾಹನಗಳು ತಾವರೆಕೆರೆ ಜಂಕ್ಷನ್ನಲ್ಲಿ ಬಲತಿರುವು ಪಡೆದು ಹೆಮ್ಮಿಗೆದುರ ಕೊಮ್ಮಘಟ್ಟ, ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
ಮಾಗಡಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತಾವರೆಕರೆ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ಸೊಂಡೇಕೊಪ್ಪ- ನೆಲಮಂಗಲ ಮೂಲಕ ಸಂಚರಿಸಬಹುದು.
ತುಮಕೂರು ಕಡೆಯಿಂದ ಒಂದು ನೈಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳು ನೆಲಮಂಗಲ ಸೊಂಡೇಕೊಪ್ಪ ಬೈಪಾಸ್ನಲ್ಲಿ ಬಲತಿರುವು ಪಡೆದು ಸೊಂಡೇಕೊಪ್ಪ – ತಾವರೆಕರೆ – ಹೆಮ್ಮಿಗೆಪುರ – ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಪ್ರಯಾಣಿಸಬಹುದು
ನಗರದ ಒಳಭಾಗದಿಂದ ಮಾಗಡಿ ಕಡೆಗೆ ಸಂಚರಿಸುವ ವಾಹನಗಳು ಎಂಸಿ ಸರ್ಕಲ್ನಲ್ಲಿ ಎಡತಿರುವು ಪಡೆದು ಮೈಸೂರು ರಸ್ತೆ ಕೆಂಗೇರಿ – ಕೊಮ್ಮಘಟ್ಟ – ಹೆಮ್ಮಿಗೆಪುರ – ತಾವರೆಕರೆ ಮೂಲಕ ಸಂಚರಿಸಬಹುದು.
ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು, ನಾಯಂಡಹಳ್ಳಿ ಜಂಕ್ಷನ್ನಲ್ಲಿ ಮೈಸೂರು ರಸ್ತೆಗೆ ಚಲಿಸಿ ಕಂಗೇರಿ ಆರ್ ಆರ್ ಕಾಲೇಜು ಮೂಲಕ ರಾಮೋಹಳ್ಳಿ, ಚಂದ್ರಪ್ಪ ಸರ್ಕಲ್ – ತಾವರೆಕೆರೆ ಮೂಲಕ ಮಾಗಡಿ ರಸ್ತೆ ಮತ್ತು ತುಮಕೂರು ರಸ್ತೆಗೆ ಹೋಗಬಹುದು.
ಸಿ.ಎಂ.ಟಿ.ಐ ಜಂಕ್ಷನ್ನಿಂದ ನಾಯಂಡಹಳ್ಳಿ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಗೊರಗುಂಟೆಪಾಳ್ಯ – ವೆಸ್ಟ್ ಆಫ್ ಕಾರ್ಡ್ ರಸ್ತೆ – ಎಂ ಸರ್ಕಲ್ – ವಿಜಯನಗರ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
ಹಳೇ ರಿಂಗ್ ರಸ್ತೆಯಲ್ಲಿ ಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ಉಲ್ಲಾಳ, ಜಂಕ್ಷನ್ ನಲ್ಲಿ, ಎಡತಿರುವು ಪಡೆದು ಉಲ್ಲಾಳ ವಿಲೇಜ್, ರಾಮಸಂದ್ರ, ಬಿಟ್ ಹೆಮ್ಮಿಗೆ ಪರ – ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಪ್ರಯಾಣಿಸಬಹುದು.