ಕಲಬುರಗಿ:ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಗ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ನಾಲಾಯಕ್ ಎಂದು ಮೂದಲಿಸಿದ್ದಾರೆ.
ಮೋದಿ ಸೇಡಂ ಮಳಖೇಡಕ್ಕೆ ಬಂದಾಗ ಬಂಜಾರಾ (Banjara) ಸಮಾಜದವರಿಗೆ ನಿಮ್ಮ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ ಬಂಜಾರಾ ಸಮುದಾಯದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದೆ. ಇಂತಹ ನಾಲಾಯಕ್ ಮಗನಿದ್ದರೆ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ದೇಶ ನಡೆಸುವುದು ಮಾತ್ರವಲ್ಲ. ಮನೆಯಲ್ಲಿ ಒಬ್ಬ ನಾಲಾಯಕ್ ಮಗನಿದ್ದರೂ ಮನೆ ಸುಸೂತ್ರವಾಗಿ ನಡೆಯುವುದಿಲ್ಲ ಎಂದು ಹೇಳಿದರು.
Advertisement
ಮೋದಿ ಅವರು 91 ಬಾರಿ ಕಾಂಗ್ರೆಸ್ ನಿಂದಿಸಿದ ಬಗ್ಗೆ ಮಾತನಾಡುವುದಕ್ಕೆ ಸಮಯವಿದೆ. ಆದರೆ ಗುತ್ತಿಗೆದಾರರ ಸಂಘ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ, ಗೂಳಿಹಟ್ಟಿ ಶೇಖರ್ ಅವರ ಪತ್ರದ ಬಗ್ಗೆ ಉತ್ತರ ಕೊಟ್ಟಿಲ್ಲ. ಬಿಜೆಪಿಯ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಬಿಜೆಪಿ ಭ್ರಷ್ಟಾಚಾರ ಬಗ್ಗೆ ಮೋದಿ ಮಾತನಾಡಬೇಕು ಎಂದರು.
Advertisement
ಸುದ್ದಿಗೋಷ್ಠಿಯ ಕೊನೆಗೆ ನಾನು ಮೋದಿಗೆ ಹಾಗೆ ಅಂದಿಲ್ಲ. ನನಗೆ ವೈಯಕ್ತಿಕ ನಿಂದನೆಗಿಂತ ನನ್ನ ಪ್ರಶ್ನೆಗಳಿಗೆ ಉತ್ತರ ಬೇಕಿತ್ತು ಎಂದು ಪ್ರಿಯಾಂಕ್ ಖರ್ಗೆ ತನ್ನ ನಾಲಾಯಕ್ ಹೇಳಿಕೆಗೆ ಸಮಜಾಯಿಷಿ ನೀಡಿದರು.