Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ

Bidar

ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ – ಕನ್ನಡದಲ್ಲೇ ಮೋದಿ ಘೋಷಣೆ

Public TV
Last updated: April 29, 2023 12:21 pm
Public TV
Share
2 Min Read
narendra modi 4
SHARE

– ಜಗದ್ಗುರು ಭಸವೇಶ್ವರ, ಶಿವಶರಣರ ನಾಡಿಗೆ ಮೋದಿ ನಮನ
– ದೇಶದಲ್ಲೇ ಕರ್ನಾಟಕ ನಂ.1 ಆಗಲು ಡಬಲ್‌ ಎಂಜಿನ್‌ ಸರ್ಕಾರ ಬರಬೇಕು
– ಕಾಂಗ್ರೆಸ್‌ಗೆ ರೈತರ ಮೇಲೆ ದ್ವೇಷ ಇದೆ

ಬೀದರ್: ದೇಶದಲ್ಲೇ ಕರ್ನಾಟಕ ನಂಬರ್‌ 1 ಆಗಲು ಡಬಲ್‌ ಎಂಜಿನ್‌ ಸರ್ಕಾರ ಬರಬೇಕು ಎಂದು ರಾಜ್ಯದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. “ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ ಎಂದು ಕನ್ನಡದಲ್ಲೇ ಘೋಷಿಸುವ ಮೂಲಕ ಮೋದಿ ಗಮನ ಸೆಳೆದರು.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೀದರ್‌ನಲ್ಲಿ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಂಡು ನರೇಂದ್ರ ಮೋದಿ ಮಾತನಾಡಿದರು. “ಜಗದ್ಗುರು ಬಸವೇಶ್ವರ ಮತ್ತು ಶಿವಶರಣರ ಭೂಮಿಗೆ ನನ್ನ ನಮಸ್ಕಾರಗಳು” ಎಂದು ಕನ್ನಡದಲ್ಲೇ ಮೋದಿ ಭಾಷಣ ಆರಂಭಿಸಿದರು.

narendra modi basavaraj bommai

ಬಸವೇಶ್ವರ ಅವರ ಆಶೀರ್ವಾದ ನಿಮ್ಮ ಕೆಲಸ ಮಾಡಲು ಶಕ್ತಿ ಕೊಡುತ್ತದೆ. ಕರ್ನಾಟಕದ ಕೀರಿಟ ಬೀದರ್‌ನಲ್ಲಿ ಮೊದಲ ಬಾರಿ ಪ್ರಧಾನಿಯಾದ ವೇಳೆ ಆಶೀರ್ವಾದ ಸಿಕ್ಕಿತ್ತು. ಅಂದಿನಿಂದ ಸಂಬಂಧ ಮುಂದುವರಿದಿದೆ. ದೊಡ್ಡ ಸಂಖ್ಯೆಯಲ್ಲಿ ಬಂದು ದೇಶಕ್ಕೆ ನೀವು ಸಂದೇಶ ನೀಡುತ್ತಿದ್ದೀರಾ. ಕರ್ನಾಟಕದಲ್ಲಿ ಬಹುಮತ ಬಿಜೆಪಿ ಸರ್ಕಾರದ ಬರಲಿದೆ ಎಂದು ಸಂದೇಶ ನೀಡಿದ್ದೀರಾ. ಇದು ಸರ್ಕಾರ ಮಾಡುವ ಚುನಾವಣೆ ಮಾತ್ರವಲ್ಲ. ದೇಶದಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ. ಭಾರತದ ಅಭಿವೃದ್ಧಿಯ ಚುನಾವಣೆ ಎಂದು ತಿಳಿಸಿದರು.

ಭಾರತದ ಅಭಿವೃದ್ಧಿಯಾದರೆ ದೇಶದ ಎಲ್ಲ ಕೋಣೆ ಕೋಣೆಯೂ ಅಭಿವೃದ್ಧಿಯಾಗಲಿದೆ. ರಾಜ್ಯದಲ್ಲಿ ಸಾಕಷ್ಟು ಅವಕಾಶಗಳು ಸೃಷ್ಟಿಯಾಗಲಿದೆ. ಕರ್ನಾಟಕದ ಜನರು ಕನಸಗಳಿಂದ ದೂರ ಸರಿಯಬಾರದು. ಕಳೆದ ಐದು ವರ್ಷದಿಂದ ನಡೆಯುತ್ತಿರುವ ಅಭಿವೃದ್ಧಿ ನಿಲ್ಲಬಾರದು. ಅಭಿವೃದ್ಧಿ ಮುಂದುವರಿಯಲು ಬಿಜೆಪಿಗೆ ಅಧಿಕಾರ ನೀಡಬೇಕು. ದೇಶದಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಡಬಲ್ ಎಂಜಿನ್ ಸರ್ಕಾರದ ಅಗತ್ಯ ಇದೆ. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ನಂಬರ್ ಒನ್ ಆಗಲಿದೆ ಎಂದು ಹೇಳಿದರು.

bidar people

ಕರ್ನಾಟಕದಲ್ಲಿ ಗಣನೀಯ ಪ್ರಮಾಣದ ವಿದೇಶಿ ಹೂಡಿಕೆಯಾಗಿದೆ. ಕಾಂಗ್ರೆಸ್ ಅವಧಿಯಲ್ಲಿ 30,000 ಕೋಟಿ ಹೂಡಿಕೆ ಬರುತ್ತಿತ್ತು. ಈಗ 90,000 ಕೋಟಿ ಹೂಡಿಕೆ ಬರುತ್ತಿದೆ. ಮೂರಕ್ಕೂ ಅಧಿಕ ಪಟ್ಟು ಹೂಡಿಕೆ ಕರ್ನಾಟಕಕ್ಕೆ ಬರ್ತಿದೆ. ಕೊರೊನಾ, ಯುದ್ಧದ ನಡುವೆ ನಾವು ಈ ಪ್ರಮಾಣದ ಹೂಡಿಕೆ ತಂದಿದ್ದೇವೆ. ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ಸ್ಪೀಡ್ ಇರಲಿದೆ. ಕಾಂಗ್ರೆಸ್ ಸರ್ಕಾರದ ಸಾಕಷ್ಟು ಯೋಜನೆಗಳು ಧೂಳು ತಿನ್ನುತ್ತಿದೆ. ಬಹಳಷ್ಟು ಯೋಜನೆಗಳನ್ನು ನಾವು ಮಾಡಿದ್ದೇವೆ. ಅದರಲ್ಲಿ ಹಲವು ಯೋಜನೆ ಕರ್ನಾಟಕದವು ಇದೆ ಎಂದಿದ್ದಾರೆ.

ಬೀದರ್‌ನ ಯೋಜನೆಗಳೂ ಇವೆ. ಕಿಸಾನ್ ಸಮ್ಮಾನ್ ನಿಧಿಯಿಂದ ರೈತರಿಗೆ ಸಾಕಷ್ಟು ಲಾಭವಾಗಿದೆ. ಅಲ್ಲಿ ಇಲ್ಲಿ ಓಡಾಡುವ ಅವಶ್ಯಕತೆ ಇಲ್ಲ. ಕೃಷಿ ಸಮ್ಮಾನ್ ಯೋಜನೆ ಶುರು ಮಾಡಿದಾಗ ಕಾಂಗ್ರೆಸ್ ಜೆಡಿಎಸ್ ಸರ್ಕಾರ ಇತ್ತು. ಅವರು ರೈತರ ಮಾಹಿತಿ ನೀಡುತ್ತಿರಲಿಲ್ಲ. ಕಾಂಗ್ರೆಸ್‌ಗೆ ರೈತರ ಮೇಲೆ ಎಷ್ಟು ದ್ವೇಷ ಇದೆ ಎಂದು ಕಿಡಿಕಾರಿದರು.

ನಾವು ಈಗ ಹಣ ನೀಡುತ್ತಿದ್ದೇವೆ. ಎಲ್ಲ ಹಣ ಪೋಲ್ ಆಗ್ತಿಲ್ಲ. ಲಕ್ಷಾಂತರ ಜನರು ನಮ್ಮ ಸರ್ಕಾರದ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಕೇಂದ್ರದ 6,000 ರೂ. ಜೊತೆಗೆ ರಾಜ್ಯ ಸರ್ಕಾರ 4,000 ರೂ. ಕೊಡಲಾಗುತ್ತಿದೆ. ಏಳು ಲಕ್ಷ ರೈತರು ರಾಜ್ಯದಲ್ಲಿ ಲಾಭ ಪಡೆಯುತ್ತಿದ್ದಾರೆ. 18 ಲಕ್ಷ ಕೋಟಿ ರೂ. ನೀಡಿದೆ. ಚುನಾವಣೆಗೆ ಮುನ್ನ ಸಾಲ ಮನ್ನಾ ಮಾಡುವ ಭರವಸೆಯ ನಾಟಕ ಮಾಡುತ್ತಾರೆ. ಆದರೆ ಸಾಲ ಮನ್ನಾ ಆಗಿಲ್ಲ ಎಂದು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

TAGGED:bidarbjpKarnataka Election 2023narendra modiಕರ್ನಾಟಕ ಚುನಾವಣೆನರೇಂದ್ರ ಮೋದಿಬಿಜೆಪಿಬೀದರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
25 minutes ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
1 hour ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
2 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
2 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?