ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ

Public TV
1 Min Read
PRIYANK KHARGE 1

ಕಲಬುರಗಿ: ಕಾಂಗ್ರೆಸ್ (Congress) ಶಾಸಕ ಹಾಗೂ ಚಿತ್ತಾಪುರ (Chittapura) ಅಭ್ಯರ್ಥಿಯಾಗಿರುವ ಪ್ರಿಯಾಂಕ್ ಖರ್ಗೆ (Priyank Kharge) ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಒಂದೆಡೆ ಚುನಾವಣೆ (Election) ಹತ್ತಿರ ಬರುತ್ತಿದ್ದು, ಇನ್ನೊಂದೆಡೆ ತಮ್ಮ ಪತ್ನಿ ಶ್ರುತಿ ಖರ್ಗೆ (Shruthi Kharge) ಅನಾರೋಗ್ಯದಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಶ್ರುತಿ ಖರ್ಗೆ ಬ್ರೈನ್ ಟ್ಯೂಮರ್‌ನಿಂದ (Brain Tumor) ಬಳಲುತ್ತಿದ್ದು, ಮುಂಬೈನ (Mumbai) ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ

BJP Congress

ಪತ್ನಿ ಅಲ್ಲದೇ ಒಡಹುಟ್ಟಿದ ಸಹೋದರ ಕೂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ಹಾಗೂ ಆರೋಗ್ಯ ವಿಚಾರಣೆಗಾಗಿ ಪ್ರಿಯಾಂಕ್ ಖರ್ಗೆ ಒಂದು ದಿನ ಆಸ್ಪತ್ರೆಗೆ ತೆರಳಿದರೆ ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ

ನಾಮಪತ್ರ ಸಲ್ಲಿಕೆಯ ಬಳಿಕ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದಲ್ಲೇ ಪ್ರವಾಸ ಮಾಡುತ್ತಿದ್ದಾರೆ. ಈ ಬಾರಿ ಬಿಜೆಪಿ (BJP) ನಾಯಕರು ಪ್ರಿಯಾಂಕ್ ಖರ್ಗೆಯವರನ್ನು ಟಾರ್ಗೆಟ್ ಆಗಿ ಇರಿಸಿಕೊಂಡು ಸೋಲಿಸುವ ಪ್ಲಾನ್ ಮಾಡಿಕೊಂಡಿದ್ದಾರೆ. ಪತ್ನಿಯ ಆರೋಗ್ಯ ದೃಷ್ಟಿಯಿಂದ ಪ್ರಿಯಾಂಕ್ ಖರ್ಗೆ ಯಾವುದೇ ಕಾರ್ಯಕ್ರಮದಲ್ಲಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಕಳೆದ ಎರಡು ಮೂರು ದಿನದಿಂದ ನೋವಿನ ನಡುವೆಯೂ ಚಿತ್ತಾಪುರ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ನನ್ನ ಬಿಟ್ಟು ಬೇರೆ ಯಾರೂ CM ಆಗಲು ಸಾಧ್ಯವಿಲ್ಲ: ಹೆಚ್‌ಡಿಕೆ ಗುಡುಗು

ಪುತ್ರ ಪ್ರಿಯಾಂಕ್ ಖರ್ಗೆ ಗೆಲುವಿಗಾಗಿ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಏಪ್ರಿಲ್ 6ರಂದು ಚಿತ್ತಾಪುರ ವಿಧಾನಸಭಾ ಕ್ಷೇತ್ರದ ರಾವೂರ್ ಮತ್ತು ದಂಡೋತ್ತಿ ಗ್ರಾಮದಲ್ಲಿ ಬೃಹತ್ ಸಮಾವೇಶವನ್ನು ನಡೆಸಲಿದ್ದಾರೆ. ಇದನ್ನೂ ಓದಿ: ಮೇ 10 ರಂದು ತಪ್ಪದೇ ವೋಟ್‌ ಮಾಡಿದವರಿಗೆ ಸಿಗುತ್ತೆ ಬಂಪರ್‌ ಗಿಫ್ಟ್‌..!

Share This Article