ಹುಬ್ಬಳ್ಳಿ: ಆನೆ ಗಾತ್ರದ ಮೋದಿ (Narendra Modi) ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ (Priyank Kharge) ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಲೇವಡಿ ಮಾಡಿದರು.
ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರು ಪ್ರಧಾನಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸಿದಾಗ, ಖರ್ಗೆ ಜೀವನದ ಸಾಧನೆ ಮಣ್ಣುಪಾಲಾಯ್ತು. ಆನೆ ಗಾತ್ರದ ಮೋದಿಯವರ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ ಎಂದು ತಂದೆ ಹಾಗೂ ಮಗ ಇಬ್ಬರ ವಿರುದ್ಧವೂ ಗರಂ ಆದರು.
ಕಾಂಗ್ರೆಸ್ ಪ್ರಣಾಳಿಕೆ (Congress Manifesto) ಕುರಿತು ಮಾತನಾಡಿ, ಮುಸಲ್ಮಾನರನ್ನು ತೃಪ್ತಿಪಡಿಸುವುದೇ ಕಾಂಗ್ರೆಸ್ ಕೆಲಸವಾಗಿದೆ. ಬಜರಂಗದಳವನ್ನು ನಿಷೇಧ ಮಾಡುವ ವಿಚಾರದಲ್ಲಿ ಅವರಲ್ಲೇ ಗೊಂದಲವಿದೆ. ಭಾರತ ಸಂಸ್ಕೃತಿಯ ರಕ್ಷಣೆಗಿರುವ ಸಂಘಟನೆ ಬಜರಂಗದಳ. ಪಿಎಫ್‌ಐಗೆ ಹೋಲಿಸಿದ್ದು, ದೊಡ್ಡ ದುರಂತ. ಹಿಂದೂಗಳನ್ನು ಪಕ್ಕಕ್ಕೆ ಸರಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು.
ಜಗದೀಶ್ ಶೆಟ್ಟರ್ ಪರಿಸ್ಥಿತಿ ನೋಡಿ ಅಯ್ಯೋ ಪಾಪ ಅನಿಸುತ್ತಿದೆ. ಆರ್‌ಎಸ್‌ಎಸ್, ಹಿಂದುತ್ವ ವಿಧಾನಸಭೆಯಲ್ಲಿ ಮಾತನಾಡಿದ್ದ ಶೆಟ್ಟರ್ ಸ್ವಾಭಿಮಾನವನ್ನು ನಾನು ನಿರೀಕ್ಷಿಸುತ್ತಿದ್ದೆ. ಟಿಕೆಟ್‌ಗಾಗಿ ಶೆಟ್ಟರ್ ಸ್ವಾಭಿಮಾನ ಮಾರಿಕೊಳ್ಳುತ್ತಿದ್ದಾರೆ. ಶೆಟ್ಟರ್ ಬಹಿರಂಗವಾಗಿ ಕಾಂಗ್ರೆಸ್ ನಿಲುವನ್ನು ಖಂಡಿಸಲಿ ಎಂದು ಹೇಳಿದರು.
ಶೆಟ್ಟರ್ ಎಂದೂ ಸಿದ್ಧಾಂತವನ್ನು ಬಿಟ್ಟು ಹೋಗಿಲ್ಲ. ಶೆಟ್ಟರ್ ಪ್ರಧಾನಿ ಫೋಟೋ ಮನೆಯಲ್ಲಿ ಇಟ್ಟುಕೊಂಡಿದ್ದಾರೆ. ಯಾರೋ ಒಬ್ಬ ವ್ಯಕ್ತಿಯ ನಡೆಯ ಕಾರಣ ಪಕ್ಷ ತೊರೆದಿದ್ದಾಗಿ ಅವರೇ ಹೇಳುತ್ತಿದ್ದಾರೆ. ಇದು ರಾಷ್ಟ್ರೀಯವಾದಿಗಳಿಗೂ, ರಾಷ್ಟ್ರ ವಿರೋಧಿಗಳಿಗೂ ನಡುವೆ ನಡೆಯುತ್ತಿರುವ ಚುನಾವಣೆ ಎಂದು ತಿಳಿಸಿದರು. ಇದನ್ನೂ ಓದಿ: ನೀಟ್ ಅಭ್ಯರ್ಥಿಗಳಿಗೆ ಸಂಚಾರದ ಆತಂಕ – ಬೆಂಗಳೂರಲ್ಲಿ ಮೋದಿ ರೋಡ್ ಶೋನಲ್ಲಿ ಮತ್ತೆ ಬದಲಾವಣೆ
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜಾತಿವಾದಿ ರಾಜಕಾರಣಿಗಳು. ಕೆಪಿಸಿಸಿ ಅಧ್ಯಕ್ಷ ಒಕ್ಕಲಿಗರೆಲ್ಲಾ ನನ್ನ ಹಿಂದೆ ಬನ್ನಿ ಅಂತಾರೆ. ಇವನಿಗಿಂತ ಬೇರೆ ಜಾತಿವಾದಿ ಬೇರೆಯವರು ಬೇಕಾ? ಡಿ.ಕೆ.ಶಿವಕುಮಾರ್ ಹೆಸರು ಯಾಕೆ. ಕೆಡಿ ಶಿವಕುಮಾರ್ ಅಂತಾ ಇಟ್ಕೊ. ಕರ್ನಾಟಕದಲ್ಲಿ ಜಾತಿ ಹೆಸರಲ್ಲಿ ಬೆಂಕಿ ಹಚ್ಚಿದ್ದೀರಿ. ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕಳೆದುಕೊಳ್ತೀರಿ ಎಂದು ವಾಗ್ದಾಳಿ ನಡೆಸಿದರು.
ವೀರಪ್ಪ ಮೊಯ್ಲಿ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಧರ್ಮ ವಿರೋಧಿ, ದೇಶ ವಿರೋಧಿ. ಕೂಡಲೆ ಕಾಂಗ್ರೆಸ್‌ನವರು ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಎಂದು ಎಚ್ಚರಿಸಿದರು. ಇದನ್ನೂ ಓದಿ: ಬಜರಂಗದಳ ನಿಷೇಧ ವಿಚಾರಕ್ಕೆ ಕೈ ಹಾಕಿದ್ರೆ ಹುಷಾರ್: ಸಿದ್ದಲಿಂಗ ಶ್ರೀಗಳಿಂದ ಡಿಕೆಶಿಗೆ ಎಚ್ಚರಿಕೆ