ಚಿತ್ರದುರ್ಗ: ನಂಬಿಸಿ ಕುತ್ತಿಗೆ ಕೊಯ್ದ ಅಧ್ಯಕ್ಷ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ವಿರುದ್ಧ ಚಿತ್ರದುರ್ಗ ಮಾಜಿ ಎಂಎಲ್‍ಸಿ ರಘು ಆಚಾರ್ (Raghu Achar) ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಗುರುವಾರ ಕೋಟೆನಾಡಲ್ಲಿ ಭಿನ್ನಮತ ಭುಗಿಲೆದ್ದಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಪರಿಷತ್ ಸದಸ್ಯ ರಘು ಆಚಾರ್ ಪಕ್ಷದ ವಿರುದ್ಧ ರೆಬಲ್ ಆಗಿದ್ದಾರೆ. ಇದನ್ನೂ ಓದಿ: ದಾಖಲೆ ಇಲ್ಲದ ಹಣವನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದ ಖತರ್ನಾಕ್ ವ್ಯಕ್ತಿಗಳು!
Advertisement
ಎಂಎಲ್‍ಸಿಯಾಗಿದ್ದ ನನಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದರು. 2ನೇ ಬಾರಿಗೆ ಎಂಎಲ್‍ಸಿ ಆಗುವುದು ಬೇಡ, ಶಾಸಕ ಸ್ಥಾನಕ್ಕೆ ಸ್ಪರ್ಧಿಸುವಂತೆ ಕೈ ನಾಯಕರು ಹೇಳಿ ನಂಬಿಸಿ ಅರ್ಧ ದಾರಿಯಲ್ಲೇ ಕತ್ತು ಕೊಯ್ದಿದ್ದಾರೆ ಎಂದು ಆರೋಪಿಸಿದ್ದಾರೆ.
Advertisement
Advertisement
ರಾಜ್ಯದಲ್ಲಿ ಜಾತಿಯ ಜನಸಂಖ್ಯೆ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಇದಕ್ಕೆ ಜಿಲ್ಲೆಯ ಜನ ಉತ್ತರಿಸಲಿದ್ದಾರೆ. ಕಾಂಗ್ರೆಸ್ ಕೇವಲ ನನಗೊಬ್ಬನಿಗೆ ಅಲ್ಲ, ತರಿಕೆರೆ ಕ್ಷೇತ್ರದ ಗೋಪಿಕೃಷ್ಣ ಅವರಿಗೂ ಅನ್ಯಾಯೆಸಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಿಡಿಕಾರಿದ್ದಾರೆ.
Advertisement
ರಾಜ್ಯದ 197 ಸಣ್ಣ ಸಮುದಾಯಗಳಿಗೆ ಕಾಂಗ್ರೆಸ್ ಒಂದು ಸ್ಥಾನ ನೀಡಿಲ್ಲ. ಸಣ್ಣ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಗೌರವ ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಡಿ.ಕೆ ಶಿವಕುಮಾರ್ ವಿರುದ್ಧ ರಘು ಆಚಾರ್ ಅಸಮಧಾನ ಹೊರಹಾಕಿದ್ದಾರೆ.
ಟಿಕೆಟ್ ಹಂಚಿಕೆ ವೇಳೆ ಸಾಮಾಜಿಕ ನ್ಯಾಯ ಮರೆತು ಕಾಂಗ್ರೆಸ್ ತೀರ್ಮಾನಿಸಿದೆ. ಪಕ್ಷಕ್ಕೆ ಸೇವೆ ಸಲ್ಲಿಸಿದ್ದ ನನ್ನನ್ನು ನಿರ್ಲಕ್ಷ್ಯಿಸಿದೆ. ಇಡೀ ರಾಜ್ಯ ಸುತ್ತಿ ವಿಶ್ವಕರ್ಮ ಸಮಾಜ ಕಾಂಗ್ರೆಸ್‍ಗೆ (Congress) ಮತ ಹಾಕದಂತೆ ಹೋರಾಟ ನಡೆಸಲಿದ್ದೇನೆ ಎಂದು ಹೇಳಿದ್ದಾರೆ.
ಶೀಘ್ರದಲ್ಲೇ ಚಿತ್ರದುರ್ಗದಲ್ಲಿ (Chitradurga) ನನ್ನ ಬೆಂಬಲಿಗರೊಂದಿಗೆ ಸಭೆ ನಡೆಸುತ್ತೇನೆ. ಬಳಿಕ ಮಾ.17 ರಂದು ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದರು. ಈ ವೇಳೆ ರಘು ಆಚಾರ್ ನಿವಾಸದ ಬಾಗಿಲಿಗೆ ಅಂಟಿಸಿದ್ದ ರಘು ಆಚಾರ್ ಭಾವಚಿತ್ರ ಸಹಿತ ಇದ್ದ ಕಾಂಗ್ರೆಸ್ ಸ್ಟಿಕ್ಕರನ್ನು ಬೆಂಬಲಿಗರು ತೆರವುಗೊಳಿಸಿದ್ದಾರೆ. ಇದನ್ನೂ ಓದಿ: ಶಾಸಕ ಪ್ರೀತಂ ಗೌಡರಿಂದ 100 ಕೋಟಿ ಗುಳುಂ- ಹೆಚ್.ಕೆ.ಮಹೇಶ್ ಆರೋಪ