ರಾಮನಗರ: ರಾಮನಗರ (Ramanagara) ಜಿಲ್ಲೆ ಮಾಡಿದ್ದು ಕುಮಾರಸ್ವಾಮಿ. ರಾಮನಗರ ಬಿಟ್ಟು ಕುಮಾರಸ್ವಾಮಿ ಹೋಗುವ ಪ್ರಶ್ನೆಯೇ ಇಲ್ಲ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಮಂಡ್ಯದಲ್ಲಿ (Mandya) ಕುಮಾರಸ್ವಾಮಿ (H.D.Kumaraswamy) ಸ್ಪರ್ಧೆ ಮಾಡುವ ವಿಚಾರವಾಗಿ ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಬರೆದಿಟ್ಟುಕೊಳ್ಳಿ. ಕುಮಾರಸ್ವಾಮಿಯವರು ಚನ್ನಪಟ್ಟಣ ಬಿಟ್ಟು ಮಂಡ್ಯದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಅವರು ಚನ್ನಪಟ್ಟಣ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಇನ್ನೊಂದು ದಿನ ಎಲ್ಲವೂ ಗೊತ್ತಾಗುತ್ತದೆ, ಕಾದು ನೋಡಿ. ಇದರ ಬಗ್ಗೆ ನಿತ್ಯ ಚರ್ಚೆ ನಡೆಯುತ್ತಿದೆ. ಇದಕ್ಕೆ ತೆರೆ ಎಳೆಯಬೇಕು. ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಸುಮಲತಾ ಸ್ಪರ್ಧೆ ಮಾಡುವುದಿಲ್ಲ ಎಂಬ ವಿಚಾರದ ಕುರಿತು, ನಾನು ಆ ತಾಯಿಯ ಬಗ್ಗೆ ಮಾತನಾಡುವುದಿಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವ ನಾಮಪತ್ರ ಸಲ್ಲಿಕೆ ವೇಳೆ ಭಿನ್ನಮತ ಸ್ಪೋಟ – ಮಾಜಿ ಶಾಸಕಿ ಮನೆಗೆ ತೆರಳಿ ಸ್ಪರ್ಧೆಗೆ ಒತ್ತಾಯಿಸಿದ ಕಾರ್ಯಕರ್ತರು
Advertisement
Advertisement
ರಾಮನಗರದಲ್ಲಿ ಉತ್ತಮ ವಾತಾವರಣವಿದೆ. 30 ವರ್ಷಗಳಿಂದ ರಾಮನಗರದಲ್ಲಿ ನಮ್ಮ ಪರವಾದ ವಾತಾವರಣವಿದೆ. ಅನೇಕ ದಿನಗಳಿಂದ ಒಡನಾಟ ಇಟ್ಟುಕೊಂಡಿದ್ದೇನೆ. ಹಳ್ಳಿ ಹಳ್ಳಿಗೂ ಎರಡು ಬಾರಿ ಓಡಾಡಿದ್ದೇನೆ. ಈಗಲೂ ಪ್ರಚಾರ ಮಾಡುತ್ತಿದ್ದೇನೆ. ಜನರ ಸೇವೆ ಮಾಡಿದ್ದೇವೆ. ಜನ ನಮ್ಮ ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು. ಇದನ್ನೂ ಓದಿ: ಪುತ್ರನ ನಾಮಪತ್ರ ಸಲ್ಲಿಸಲು ತನ್ನ ಹಳೆಯ ಅಂಬಾಸಿಡಾರ್ ಕಾರಿನಲ್ಲಿ ಪ್ರಯಾಣಿಸಿದ ಯಡಿಯೂರಪ್ಪ
Advertisement
ರಾಮನಗರದಲ್ಲಿ ಕಾಂಗ್ರೆಸ್ (Congress) ಮುಸ್ಲಿಂ ಅಭ್ಯರ್ಥಿ ಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, 2018ರಲ್ಲಿ ಕಾಂಗ್ರೆಸ್ ಜೆಡಿಎಸ್ ಮೇಲೆ ಬಿಜೆಪಿಯ ಬಿ ಟೀಂ ಎಂದು ಆರೋಪ ಮಾಡಿದ್ದರು. ರಾಜ್ಯದ ಜನ ನೋಡಿದ್ದಾರೆ. ಬಿಜೆಪಿ (BJP) ಬೆಳೆಯಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಬಿಜೆಪಿಯ ಬಿ ಟೀಂ. ಹಲಾಲ್, ಹಿಜಾಬ್ ವಿಚಾರದಲ್ಲಿ ಕುಮಾರಸ್ವಾಮಿ ಬಿಟ್ಟು ಯಾವ ಕಾಂಗ್ರೆಸ್ ನಾಯಕರೂ ಮುಸ್ಲಿಂ ಪರವಾಗಿ ಮಾತನಾಡಲಿಲ್ಲ. ಕಳೆದ ಬಾರಿ ಹಲವು ಗೊಂದಲಗಳನ್ನು ಸೃಷ್ಟಿ ಮಾಡಿದ್ದರು. ನಮ್ಮ ಕ್ಷೇತ್ರ ಅತಿ ಹೆಚ್ಚು ಮುಸ್ಲಿಂ ಸಮುದಾಯ ಹೊಂದಿರುವ ಕ್ಷೇತ್ರ. ಈ ಬಾರಿ ಮುಸ್ಲಿಂ ಬಂಧುಗಳು ಕಾಂಗ್ರೆಸ್ ಆರೋಪಕ್ಕೆ ಕಿವಿ ಕೊಡದೆ ನಮ್ಮ ಜೊತೆ ನಿಲ್ಲುತ್ತಾರೆ. ರಾಜ್ಯದಲ್ಲಿ ಎ ಟೀಂ, ಬಿ ಟೀಂ ಎಂದು ಇದ್ದರೆ ಅದು ಬಿಜೆಪಿ ಮತ್ತು ಕಾಂಗ್ರೆಸ್. ಮಂಡ್ಯ ಲೋಕಸಭಾ ಚುನಾವಣೆ, ಎಂಎಲ್ಸಿ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಆದರೆ ರಾಮನಗರದಲ್ಲಿ ಇದು ಪ್ರೂವ್ ಆಗುವುದಿಲ್ಲ. ಆದರೂ ಪ್ರಯತ್ನ ಪಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮನವಿ
Advertisement
ಸಿಎಂ ಪರವಾಗಿ ಸುದೀಪ್ ಪ್ರಚಾರದ ಕುರಿತು ಮಾತನಾಡಿದ ಅವರು, ಸುದೀಪ್ ಪ್ರಚಾರದಿಂದ ಎಷ್ಟು ಪರಿಣಾಮ ಬೀರುತ್ತದೆ ಎಂದು ನಮಗೆ ಗೊತ್ತಿಲ್ಲ. ಸುದೀಪ್ ಅವರು ಈಗಾಗಲೇ ಸ್ಪಷ್ಟವಾಗಿ ಸಿಎಂ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಬೊಮ್ಮಾಯಿ (Basavaraj Bommai) ಅವರ ಒಡನಾಟದಿಂದ ಹಾಗೂ ಅನೇಕ ವರ್ಷಗಳ ನಂಟಿರುವುದರಿಂದ ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ಅವರ ಮೇಲಿನ ಗೌರವದಿಂದ ಪ್ರಚಾರ ಮಾಡುತ್ತಿರಬಹುದು. ಜೆಡಿಎಸ್ (JDS) ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್ ಕ್ಯಾಂಪೇನರ್‌ಗಳು. ನಮಗೆ ದೇವೇಗೌಡರ ಹೆಸರೇ ಸಾಕು ಎಂದರು. ಇದನ್ನೂ ಓದಿ: ಏ.21, 22ರಂದು ದಾವಣಗೆರೆ, ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ
ರಾಮನಗರದಲ್ಲಿ ದೇವೇಗೌಡರ (H.D.Deve Gowda) ಪ್ರಚಾರದ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಅವರ ಆರೋಗ್ಯದ ದೃಷ್ಟಿಯಿಂದ ಅವರಿಗೆ ಹೆಚ್ಚು ಶ್ರಮ ಕೊಡುವುದಿಲ್ಲ. ಅವರ ಸೇವೆ ಇನ್ನೂ ಅನೇಕ ವರ್ಷ ಈ ದೇಶ ಹಾಗೂ ರಾಜ್ಯಕ್ಕೆ ಬೇಕು. ಅವರು ರಾಮನಗರಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ. ಒಂದು ದಿನ ಬಂದು ಪ್ರಚಾರ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬೊಮ್ಮಾಯಿ ಮಾಮಾನನ್ನು ಮತ್ತೊಮ್ಮೆ ಗೆಲ್ಲಿಸಿ: ಜನರಲ್ಲಿ ಸುದೀಪ್ ಮನವಿ
ಬಿ ಫಾರಂ ತೆಗೆದುಕೊಳ್ಳುವ ಸಂದರ್ಭದಲ್ಲಿ ಭಾವುಕರಾದ ವಿಚಾರದ ಕುರಿತು ಮಾತನಾಡಿದ ಅವರು, ನಮ್ಮ ಜೀವನದಲ್ಲಿ ಅದೊಂದು ಎಮೋಷನಲ್ ಮೊಮೆಂಟ್. ಅಂತಹ ಪುಣ್ಯಾತ್ಮನ ಕೈಯಲ್ಲಿ ಬಿ ಫಾರಂ ಪಡೆಯುವುದು ನಮ್ಮ ಪುಣ್ಯ ಅಷ್ಟೇ, ಬೇರೇನೂ ಇಲ್ಲ ಎಂದರು. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಶಾಕ್ – ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡದ ಸುಪ್ರೀಂ