ಬೆಳಗಾವಿ: ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಮಹಾನಯಕನ ವಿರುದ್ಧ ಕಿಡಿಕಾರಿದ್ದಾರೆ.
Advertisement
ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ಕೊಣ್ಣೂರಿನ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಈಗಾಗಲೇ 6 ಬಾರಿ ಶಾಸಕನಾಗಿದ್ದೇನೆ (MLA). ಇನ್ನೊಂದು ಅವಧಿಗೆ ಸ್ಪರ್ಧಿಸುತ್ತೇನೆ. 8ನೇ ಬಾರಿಗೆ ನಾನು ಶಾಸಕನಾಗಬೇಕೋ? ಬೇಡವೋ? ಎಂಬುದನ್ನ ಪಕ್ಷದ ಕಾರ್ಯಕರ್ತರು ನಿರ್ಧರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ವಾಣಿಜ್ಯ ಬಳಕೆಗೆ ತಮ್ಮ ಹೆಸರು, ಧ್ವನಿ ಬಳಸದಂತೆ ರಜನಿಕಾಂತ್ ಎಚ್ಚರಿಕೆ ನೋಟಿಸ್
Advertisement
Advertisement
2023ರ ಚುನಾವಣೆ (Karnataka Election 2023) ಬಳಿಕ ನಾನು ರಾಜಕೀಯ ನಿವೃತ್ತಿ ಆಗಬೇಕು ಎಂಬ ಚಿಂತನೆಯಿದೆ. ಬೇರೆಯವರಿಗೆ ಅವಕಾಶ ಕೊಡಬೇಕಿದೆ. ಈ ಬಗ್ಗೆ ನಮ್ಮ ಕಾರ್ಯಕರ್ತರು, ನಾಯಕರು ನಿರ್ಧಾರ ತೆಗೆದುಕೊಳ್ಳಬೇಕು. 2023ರ ಚುನಾವಣೆಯಲ್ಲೇ ಸ್ಪರ್ಧಿಸುವುದು ಬೇಡ ಅಂದುಕೊಂಡಿದ್ದೆ ಆದ್ರೆ ಆ ಮಹಾನಾಯಕನಿಗೆ ಚಾಲೆಂಜ್ ಮಾಡಲು ನಾನು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಡಿಕೆಶಿಗೆ ಪರೋಕ್ಷವಾಗಿ ಕುಟುಕಿದ್ದಾರೆ. ಇದನ್ನೂ ಓದಿ: ಆಸ್ಟ್ರೆಲಿಯಾದಲ್ಲಿ ಮತ್ತೆ ಖಲಿಸ್ತಾನಿಯರ ಅಟ್ಟಹಾಸ – ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ದಾಳಿ
Advertisement
ಏನು ಬೇಕಾದ್ರೂ ತ್ಯಾಗ ಮಾಡಲು ಸಿದ್ಧ:
ಅವನನ್ನು ಮೂಲೆಗೆ ಕೂರಿಸಲೆಂದೇ ಕಣಕ್ಕಿಳಿಯುತ್ತಿರುವೆ, ಇಲ್ಲವಾದರೇ ನಾನು ಸ್ಪರ್ಧಿಸುತ್ತಿರಲಿಲ್ಲ. ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ಆಗಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ಜೀವನವನ್ನೇ ಪಣವಾಗಿಡುತ್ತೇನೆ. ಅದಕ್ಕಾಗಿ ನಾನು ಏನು ಬೇಕಾದರೂ ತ್ಯಾಗ ಮಾಡಲು ಸಿದ್ಧನಿದ್ದೇನೆ. 2023ರಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ. ಬಿಜೆಪಿಯವರನ್ನೇ ಸಿಎಂ ಮಾಡುತ್ತೇವೆ. ಇದಕ್ಕೆ ತಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ ಎಂದು ಕೋರಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k