ಬೆಳಗಾವಿ: ಜಗದೀಶ್ ಶೆಟ್ಟರ್ (Jagadish Shettar) ಎಲ್ಲಾ ಹುದ್ದೆಗಳನ್ನು ಅನುಭವಿಸಿದ್ದರೂ ಸಹ ಬಿಜೆಪಿ (BJP) ತೊರೆದಿದ್ದಾರೆ. ಅವರೇನೂ ದೊಡ್ಡ ನಾಯಕರಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ವಾಗ್ದಾಳಿ ನಡೆಸಿದ್ದಾರೆ.
ನಗರದ ಧರ್ಮನಾಥ್ ಭವನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಲ್.ಕೆ ಅಡ್ವಾಣಿಯಂತಹ (L.K Advani) ದೊಡ್ಡ ನಾಯಕರೇ ಬಹು ದೊಡ್ಡ ತ್ಯಾಗಗಳನ್ನು ಮಾಡಿದ್ದಾರೆ. ಆದರೆ ಎಲ್ಲಾ ಅಧಿಕಾರವನ್ನು ಅನುಭವಿಸಿ ಕೆಲವರು ಪಕ್ಷವನ್ನು ತೊರೆಯುತ್ತಿದ್ದಾರೆ. ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಹೋಗುವವರು ಹೋಗಲಿ ಪಕ್ಷ ಸ್ವಚ್ಛ ಆಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ: ಸಿದ್ದು ವಿರುದ್ಧ ವಾಸು ಕಿಡಿ
Advertisement
Advertisement
ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಧನಂಜಯ ಜಾಧವ್ ಇಬ್ಬರೂ ಬೆಳಗಾವಿ ಗ್ರಾಮೀಣ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ ಮೂರನೇಯವರಿಗೆ ಟಿಕೆಟ್ ಸಿಕ್ಕರೂ ಸಭೆಯಲ್ಲಿ ಮನಪೂರ್ವಕವಾಗಿ ಭಾಗವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಸನ್ನಿವೇಶ ಬಿಜೆಪಿಯಲ್ಲಿ ಮಾತ್ರ ನೋಡಲು ಸಾಧ್ಯ ಎಂದು ಹೇಳಿದ್ದಾರೆ.
Advertisement
Advertisement
ಸಂಜಯ್ ಪಾಟೀಲ್ ಎರಡು ಬಾರಿ ಶಾಸಕರಾಗಿ ಕೆಲಸ ಮಾಡಿದ್ದಾರೆ. ಸಂಜಯ್ ಪಾಟೀಲ್ ಹಾಗೂ ಧನಂಜಯ ಜಾಧವ್ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಬೇಕು. ಇಬ್ಬರೂ ಗ್ರಾಮೀಣ ಭಾಗದ ಉಸ್ತುವಾರಿ ವಹಿಸಿಕೊಂಡು ಬಿಜೆಪಿಯನ್ನು ಗೆಲ್ಲಿಸಬೇಕು. ಆಗ ಪಕ್ಷ ನಿಮ್ಮನ್ನು ಗುರುತಿಸುತ್ತದೆ ಎಂದು ಸಲಹೆ ನೀಡಿದ್ದಾರೆ.
ಕಾರ್ಯಕರ್ತರು ಬೆಳಗಾವಿ ಜಿಲ್ಲೆಯ 15ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ದೃಢ ಸಂಕಲ್ಪ ಮಾಡಬೇಕು. ವಿಶೇಷವಾಗಿ ಅಥಣಿಗೆ ಬಹಳ ಒತ್ತು ಕೊಡಬೇಕು. ಅಥಣಿ (Athani) ಕ್ಷೇತ್ರದಲ್ಲಿ ನಮ್ಮ ಬಿಜೆಪಿ ಬಾವುಟ ಹಾರಿಸಲೇಬೇಕು ಎಂದು ದೃಢ ಸಂಕಲ್ಪ ಮಾಡಿದ್ದೇನೆ. ಅದನ್ನು ಮಾಡಿಯೇ ತೀರುತ್ತೇನೆ ಎಂದು ಅವರು ಲಕ್ಷ್ಮಣ ಸವದಿ (Laxman Savadi) ಅವರಿಗೆ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ: ಹೆಚ್‍ಡಿಕೆ