ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ – ಡಿಕೆಶಿಗೆ ಬಿಜೆಪಿ, ಜೆಡಿಎಸ್‍ನಿಂದ ಮಾಸ್ಟರ್ ಸ್ಟ್ರೋಕ್!

Public TV
1 Min Read
DK Shivakumar

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲು ಸರ್ಕಸ್ ಮಾಡುತ್ತಿರುವ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ ಎದುರಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪ್ರತಿಷ್ಠೆಯ ಫೈಟ್‍ಗೆ ಮಾಸ್ಟರ್‌ ಸ್ಟ್ರೋಕ್‌ ನೀಡಲು ಬಿಜೆಪಿ ಹಾಗೂ ಜೆಡಿಎಸ್ ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ.

ಚುನಾವಣೆಯಲ್ಲಿ (Karnataka Election) ತಮ್ಮವರಿಗೆ ಟಿಕೆಟ್ ಕೊಡಿಸಬೇಕು ಎಂದು ಡಿಕೆಶಿ ಹಠಕ್ಕೆ ಬಿದ್ದಿರುವ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಗಳಿಗೆ ಬಿಜೆಪಿ ಹಾಗೂ ಜೆಡಿಎಸ್ (BJP, JDS) ಗಾಳ ಹಾಕಿದೆ  ಎನ್ನಲಾಗಿದೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತ ತಲುಪಿದ ಹಾಸನ ಟಿಕೆಟ್ ದಂಗಲ್ – ಇಂದು ಹೆಚ್‌ಡಿಕೆ, ರೇವಣ್ಣ ಸಂಧಾನ

ಟಿಕೆಟ್‍ಗಾಗಿ ಕಾಂಗ್ರೆಸ್‌ನಲ್ಲಿ ಪರದಾಡುವ ಬದಲು ನಮ್ಮಲ್ಲಿಗೆ ಬನ್ನಿ ಎಂದು ಎರಡು ಪಕ್ಷಗಳಿಂದ ಆಫರ್ ನೀಡಲಾಗಿದೆ. ಕಲಘಟಗಿಯಲ್ಲಿ ಮಾಜಿ ಸಚಿವ ಸಂತೋಷ್ ಲಾಡ್‍ಗೆ (Santosh Lad) ಬಿಜೆಪಿ ಗಾಳ ಹಾಕಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ

ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯನ್ನು (Akhanda Srinivasa Murthy) ಕರೆತರಲು ಜೆಡಿಎಸ್ ಪ್ಲಾನ್ ಮಾಡಿಕೊಂಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

Share This Article