ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ

Public TV
1 Min Read
bjp office bengaluru malleshwaram

ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election) ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ (BJP Office) ಬಿಗಿ ಪೊಲೀಸ್‌ ಭದ್ರತೆ (Security) ನೀಡಲಾಗಿದೆ.

ದೆಹಲಿಯಲ್ಲಿ ಸರಣಿ ಸಭೆ ನಡೆಸುತ್ತಿರುವ ಹೈಕಮಾಂಡ್‌ ನಾಯಕರು ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದ್ದು ಇಂದು ಮೊದಲ ಪಟ್ಟಿ ಬಿಡುಗಡೆಯಾಗಲಿದೆ.  ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

 

ಈ ಪಟ್ಟಿಯಲ್ಲಿ ಹಾಲಿ ಶಾಸಕರು ಸೇರಿದಂತೆ ಹಿರಿಯ ನಾಯಕರಿಗೆ ಕೊಕ್‌ ನೀಡಿ ಹೊಸಬರಿಗೆ ಮಣೆ ಹಾಕಲಾಗುತ್ತಿದೆ ಮೂಲಗಳು ತಿಳಿಸಿವೆ. ಟಿಕೆಟ್‌ ವಂಚಿತ ನಾಯಕರ ಬೆಂಬಲಿಗರು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಇರುವ 2 ಕೆಎಸ್‌ಆರ್‌ಪಿ (KSRP) ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಅಭ್ಯರ್ಥಿಗಳ ಆಯ್ಕೆಗೆ ತೀವ್ರ ಕಸರತ್ತು ನಡೆಸುತ್ತಿರುವ ಬಿಜೆಪಿ ಇಂದು ತನ್ನ ಮೊದಲ ಪಟ್ಟಿ ಪ್ರಕಟಿಸುತ್ತಿದೆ. ಇಂದು ಮಧ್ಯಾಹ್ನ 175 ಅಭ್ಯರ್ಥಿಗಳ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ. ಭಾನುವಾರ ಚುನಾವಣಾ ಸಮಿತಿ ಸಭೆ ನಡೆಸಿರುವ ವರಿಷ್ಠರು ಸಚಿವರು ಸೇರಿದಂತೆ 85ಕ್ಕೂ ಹೆಚ್ಚು ಹಾಲಿ ಶಾಸಕರ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.

Share This Article