ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ (Congress) ಗೆದ್ದರೆ ಡಿ.ಕೆ.ಶಿವಕುಮಾರ್ (DK Shivakumar) ಅವರನ್ನು ಹೈಕಮಾಂಡ್ ಸಿಎಂ ಮಾಡಲ್ಲ ಎಂದು ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಆ ರೀತಿ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ತಿರುಚಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಿಎಂ ಆಯ್ಕೆ ಮಾಡುತ್ತೇವೆ ಎಂದು ನಾನು ಹೇಳಿದ್ದೇನೆ. ನಾನು ಆಕಾಂಕ್ಷಿ, ಅವರು (ಡಿ.ಕೆ.ಶಿವಕುಮಾರ್) ಕೂಡ ಆಕಾಂಕ್ಷಿ ಎಂದಷ್ಟೆ ಹೇಳಿದ್ದೇನೆ. ಬೇರೆದೆಲ್ಲ ನಾನು ಹೇಳಿಲ್ಲ. ಇದು ಶುದ್ಧ ಸುಳ್ಳು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Advertisement
Advertisement
ಸೋಮವಾರ ರಾಷ್ಟ್ರೀಯ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಸಿಎಂ ಸ್ಥಾನದ ಆಕಾಂಕ್ಷಿ. ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಪ್ರಜಾಪ್ರಭುತ್ವದಲ್ಲಿ ಇದು ಸಾಮಾನ್ಯ. ಇದರಲ್ಲಿ ಏನೂ ತಪ್ಪಿಲ್ಲ. ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಬಯಸೋದರಲ್ಲಿ ಯಾವುದೇ ತಪ್ಪಿಲ್ಲ. ನಾನು ಸಿಎಂ ಆಗಬೇಕು ಎಂದು ಬಯಸೋದ್ರಲ್ಲಿ ಯಾವುದೇ ತಪ್ಪಿಲ್ಲ. ಯಾರೋ ಮತ್ತೊಬ್ಬರು ಬಯಸೋದರಲ್ಲೂ ತಪ್ಪಿಲ್ಲ. ನಮ್ಮದು ಪ್ರಜಾಪ್ರಭುತ್ವ. ಆದ್ರೆ ಅಂತಿಮವಾಗಿ ಹೊಸದಾಗಿ ಆಯ್ಕೆಯಾಗುವ ಶಾಸಕರು, ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡ್ತಾರೆ. ಹೈಕಮಾಂಡ್ ಮುಂದಿನ ನಿರ್ಧಾರ ಮಾಡುತ್ತೆ ಎಂದಿದ್ದರು. ಇದನ್ನೂ ಓದಿ: ಪತಿ ಇಲ್ಲದಿರುವ ನೋವು ನನಗೆ ಕಾಡುತ್ತಿದೆ: ಕುಸುಮಾ ಶಿವಳ್ಳಿ
Advertisement
Advertisement
ಒಂದು ವೇಳೆ ಹೈಕಮಾಂಡ್ ಡಿ.ಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿದ್ರೆ ಏನ್ ಮಾಡ್ತಿರಾ ಎಂಬ ಪ್ರಶ್ನೆಗೆ, “ಹಾಗೆ ಆಗಲ್ಲ. ಹೈಕಮಾಂಡ್ ಹಾಗೆ ನಿರ್ಧಾರ ಮಾಡಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯ ನಿರ್ಧಾರದಂತೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗುತ್ತೆ. ಹೈಕಮಾಂಡ್ ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಆಗಲ್ಲ. ನೂತನ ಶಾಸಕರ ಆಯ್ಕೆಯ ಮೇಲೆ ನಿಂತಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಶಾಸಕ ಟಿ.ಡಿ ರಾಜೇಗೌಡ ಹಂಚಿದ್ದ ಕುಕ್ಕರ್ ಬ್ಲಾಸ್ಟ್- ರೊಚ್ಚಿಗೆದ್ದ ಹಳ್ಳಿಗರು