ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ (Delhi) ರಾಹುಲ್ ಗಾಂಧಿ (Rahul Gandhi) ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯ (Siddaramaiah) ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ಮನೆಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಆಗಮಿಸಿ ಸಿದ್ದರಾಮಯ್ಯ ಮನೆಮುಂದೆ ಘೋಷಣೆಗಳನ್ನು ಕೂಗುತ್ತಾ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವರುಣಾ (Varuna) ಕ್ಷೇತ್ರದಲ್ಲೂ ಸಹಾ ಸಂಭ್ರಮ ಮನೆ ಮಾಡಿದೆ. ಇದನ್ನೂ ಓದಿ: ಅಣ್ಣ ಬಹಳ ಕಷ್ಟಪಟ್ಟಿದ್ದಾನೆ, ನಾವ್ಯಾವತ್ತೂ ವಿಧಾನಸೌಧಕ್ಕೆ ಹೋಗಲ್ಲ: ಸಿದ್ದರಾಮಯ್ಯ ಸಹೋದರ
Advertisement
Advertisement
ಸಿದ್ದರಾಮಯ್ಯ ಸಿಎಂ ಆಗಲು ಹೈಕಮಾಂಡ್ (High Command) ಒಪ್ಪಿಗೆ ಸೂಚಿಸಿದ ಹಿನ್ನೆಲೆ ಅವರ ಅಭಿಮಾನಿಗಳು ಕರೆಂಟ್ ಫ್ರೀ, ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಫ್ರೀ, ಗೃಹಿಣಿಯರಿಗೆ 2 ಸಾವಿರ ರೂ. ದುಡ್ಡು ಎಂದು ಅನೇಕ ಘೋಷಣೆಗಳನ್ನು ಕೂಗಿ ಸಿದ್ದರಾಮಯ್ಯನವರಿಗೆ ಜೈಕಾರ ಹಾಕಿ ಸಂಭ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳಿಗೆ ಷರತ್ತಲ್ಲ, ಮಾನದಂಡ: ಉಲ್ಟಾ ಹೊಡೆದ ಪರಮೇಶ್ವರ್
Advertisement
Advertisement
ಡಿಕೆ ಶಿವಕುಮಾರ್ (D.K.Shivakumar) ಉಪಮುಖ್ಯಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು, ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲು ರಾಹುಲ್ ನಿವಾಸಕ್ಕೆ ಆಗಮಿಸಿದ್ದಾರೆ. ಇದನ್ನೂ ಓದಿ: Exclusive – ಮತ್ತೆ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ
ಇಲ್ಲಿಯವರೆಗೆ ಎಐಸಿಸಿ ಅಧಿಕೃತವಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂಬುದನ್ನು ತಿಳಿಸಿಲ್ಲ. ಡಿಕೆಶಿ ಜೊತೆಗಿನ ಸಭೆಯ ಬಳಿಕ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನದಿಂದ ವೈಎಸ್‌ವಿ ದತ್ತ ಸೋಲಿನ ಪ್ರಾಯಶ್ಚಿತ್ತ ಪಾದಯಾತ್ರೆ