ಬೆಂಗಳೂರು: ಸಿದ್ದರಾಮಯ್ಯ (Siddaramaiah) ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದರು.
ಬೆಂಗಳೂರಿನ (Bengaluru) ಯಲಹಂಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಆಡಳಿತದಲ್ಲಿ ಟೀಚರ್ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಸ್ಕ್ಯಾಮ್ (Scam) ನಡೆದಿದೆ. 843 ಎಕರೆ ಭೂಮಿಯನ್ನು ಅಕ್ರಮವಾಗಿ ಸಾಹುಕಾರರಿಗೆ ಬಿಟ್ಟುಕೊಟ್ಟು 8 ಸಾವಿರ ಕೋಟಿ ರೂ. ಸ್ಕ್ಯಾಮ್ ಯಾರಾದರೂ ಮಾಡಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂಬುದನ್ನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿ ನಾಯಕರು ಜಾತಿ ರಾಜಕಾರಣ ಮಾಡಲ್ಲ: ಈಶ್ವರಪ್ಪ
Advertisement
Advertisement
ಕಾಂಗ್ರೆಸ್ (Congress) ಪಕ್ಷದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಎಂದರೆ ಅನ್ಯಾಯ, ಭ್ರಷ್ಟಾಚಾರ, ಅನೀತಿ, ಅಧರ್ಮ. ಈ ಅನಿಷ್ಟ ಕಾಂಗ್ರೆಸ್ ಪಕ್ಷವನ್ನು ಶಾಶ್ವತವಾಗಿ ಕರ್ನಾಟಕದ ಆಡಳಿತದಿಂದ ದೂರವಿಡಬೇಕಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕವನ್ನು ಮಾಡಬೇಕಾಗಿದೆ. ಕಾಂಗ್ರೆಸ್ ಎಂಬ ಹೆಸರನ್ನು ಶಾಶ್ವತವಾಗಿ ಈ ನೆಲದಿಂದ ಕಿತ್ತು ಹಾಕಬೇಕಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಲಿಂಗಾಯತರೆಲ್ಲಾ ಭ್ರಷ್ಟರು ಎಂದು ನಾನು ಹೇಳಲೇ ಇಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
Advertisement
Advertisement
ಕಾಂಗ್ರೆಸ್ನವರು ಗ್ಯಾರಂಟಿ ಕಾರ್ಡ್ (Guarantee Card) ಅನ್ನು ಕೊಟ್ಟಿದ್ದಾರೆ. ಅದಕ್ಕೆ ಯಾವುದೇ ಜೀವ ಇಲ್ಲ. ಅದನ್ನು ತೆಗೆದುಕೊಂಡು ಉಪ್ಪಿನಕಾಯಿ ಹಾಕಬೇಕು ಅಷ್ಟೇ ಬಿಟ್ಟರೆ, ಅದರಿಂದ ಬೇರೆ ಯಾವುದೇ ಉಪಯೋಗವಿಲ್ಲ. ಚುನಾವಣೆ ಮುಗಿಯುವವರೆಗೂ ಅದು ಗ್ಯಾರಂಟಿ, ಚುನಾವಣೆ ಮುಗಿದ ನಂತರ ಅದು ಗಳಗಂಟಿ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ಆರೋಪ