ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಚಿಕ್ಕಮ್ಮತಾಯಿ ಹೇಳಿದಂತೆ ಎರಡು ಕ್ಷೇತ್ರದಲ್ಲಿ ನಿಲ್ಲಲು ಮುಂದಾಗಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಚೊಟ್ಟನಹಳ್ಳಿ ಗ್ರಾಮ ಆದಿನಾಡು ಚಿಕ್ಕಮ್ಮತಾಯಿ ಈ ಹಿಂದೆ ಸಿದ್ದರಾಮಯ್ಯಗೆ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ನುಡಿದಿತ್ತು. ದೇವಿಯ ಮಾತಿಗೋ ಅಥವಾ ರಾಜಕೀಯ ಕಾರಣಕ್ಕೋ ಗೊತ್ತಿಲ್ಲ ಈಗ ಸಿದ್ದರಾಮಯ್ಯ ಎರಡು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ.
Advertisement
ದೇವಿ ಹೇಳಿದ್ದೇನು?
ಜನವರಿ ತಿಂಗಳಿನಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ (Yathindra Siddaramaiah) ಆದಿನಾಡು ಚಿಕ್ಕಮ್ಮತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಅರ್ಚಕ ಲಿಂಗಣ್ಣ ಮೈ ಮೇಲೆ ಚಿಕ್ಕಮ್ಮತಾಯಿ ಬಂದು ಸಿದ್ದರಾಮಯ್ಯ ಸ್ಪರ್ಧೆಯ ವಿಚಾರವಾಗಿ ಮಾತನಾಡಿತ್ತು.
Advertisement
Advertisement
ನಾನು ನಿಮ್ಮ ಮನೆಯ ಮೂಲ ದೇವರು. ನಿಮ್ಮ ತಂದೆ ಒಂದು ಕಡೆ ಸ್ಪರ್ಧೆ ಮಾಡಿದರೆ ಕೆಡುಕು ಆಗುತ್ತದೆ. ಎರಡು ಕಡೆ ಸ್ಪರ್ಧೆ ಮಾಡಿದರೆ ಒಳ್ಳೆಯದು. ಎರಡು ಬಾಹುಗಳನ್ನು ಎರಡು ಕಡೆ ಚಾಚಿದರೆ ನಾನು ಒಳ್ಳೆಯದು ಮಾಡುತ್ತೇನೆ ಎಂದು ನುಡಿದಿತ್ತು. ಇದನ್ನೂ ಓದಿ: ಪ್ರಧಾನಿ ವಾಹನದ ಬಳಿ ನುಗ್ಗಲು ಯತ್ನಿಸಿದ ಯುವಕ- ಭದ್ರತಾ ಲೋಪವಾಗಿಲ್ಲ ಅಂದ್ರು ಎಸ್‍ಪಿ
Advertisement
ಕಾಂಗ್ರೆಸ್ (Congress) ಟಿಕೆಟ್ ಪಟ್ಟಿ ಶನಿವಾರ ಪ್ರಕಟವಾಗಿದ್ದು ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದ ಟಿಕೆಟ್ ನೀಡಿದೆ. ಆದರೆ ಸಿದ್ದರಾಮಯ್ಯ ಅವರು ನಾನು ಎರಡು ಕಡೆ ಸ್ಪರ್ಧೆ ಮಾಡುವಂತೆ ಕುಟುಂಬಸ್ಥರು ಹೇಳುತ್ತಿದ್ದಾರೆ. ಹೀಗಾಗಿ ನಾನು ಕೋಲಾರದಲ್ಲೂ ಟಿಕೆಟ್ ಕೇಳಿದ್ದೇನೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ನಿರ್ಧಾರದ ಹಿಂದೆ ಆದಿನಾಡು ಚಿಕ್ಕಮ್ಮತಾಯಿ ಅಂದು ನುಡಿದ ಮಾತೇ ಕಾರಣ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಕ್ಷೇತ್ರ ಆಯ್ಕೆ ವಿಚಾರ ಬಂದಾಗ ಪತ್ನಿ, ಪುತ್ರನ ಜೊತೆ ಕೇಳಿ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದರು. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ದೇವರನ್ನು ಹೆಚ್ಚಾಗಿ ನಂಬುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಎರಡು ಕಡೆ ಟಿಕೆಟ್ ಕೇಳಿದ್ದು ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೋ ಎಂಬ ಕುತೂಹಲ ಹೆಚ್ಚಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಜಿ.ಟಿ.ದೇವೇಗೌಡರ ವಿರುದ್ಧ ಸೋಲು ಅನುಭವಿಸಿದ್ದರೆ, ಬಾದಾಮಿಯಲ್ಲಿ ಶ್ರೀರಾಮುಲು ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಗೆಲುವು ಪಡೆಯುವ ಮೂಲಕ ನಿಟ್ಟುಸಿರು ಬಿಟ್ಟಿದ್ದರು.
ಒಂದೂವರೆ ತಿಂಗಳಿನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಕಾಂಗ್ರೆಸ್‌ಗೆ ಬಹುಮತ ಬಂದರೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಆಸೆಯಲ್ಲಿ ಇದ್ದಾರೆ. ಈ ಕಾರಣಕ್ಕೆ ಬಾದಾಮಿ ಬೆಂಗಳೂರು ಹಾಗೂ ಮೈಸೂರಿನಿಂದ ದೂರವಾಗುತ್ತದೆ ಎಂಬ ಕಾರಣ ನೀಡಿ ವರುಣಾದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.