Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ-ಕಾಂಗ್ರೆಸ್‍ನ ಹೊಸ ಮುಖಗಳ ಪ್ರಯೋಗ ಶಾಲೆಯಾಗುತ್ತಾ ರಾಜ್ಯದ ಏಕೈಕ ಮೀಸಲು ಕ್ಷೇತ್ರ ಸುಳ್ಯ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಬಿಜೆಪಿ-ಕಾಂಗ್ರೆಸ್‍ನ ಹೊಸ ಮುಖಗಳ ಪ್ರಯೋಗ ಶಾಲೆಯಾಗುತ್ತಾ ರಾಜ್ಯದ ಏಕೈಕ ಮೀಸಲು ಕ್ಷೇತ್ರ ಸುಳ್ಯ?

Dakshina Kannada

ಬಿಜೆಪಿ-ಕಾಂಗ್ರೆಸ್‍ನ ಹೊಸ ಮುಖಗಳ ಪ್ರಯೋಗ ಶಾಲೆಯಾಗುತ್ತಾ ರಾಜ್ಯದ ಏಕೈಕ ಮೀಸಲು ಕ್ಷೇತ್ರ ಸುಳ್ಯ?

Public TV
Last updated: March 31, 2023 11:37 am
Public TV
Share
3 Min Read
angara 1
SHARE

ಮಂಗಳೂರು: 1972ರಿಂದ ಪರಿಶಿಷ್ಟ ಜಾತಿಯವರಿಗೆ ಮಾತ್ರ ಸ್ಪರ್ಧೆಗೆ ಅವಕಾಶವಾಗಿರುವ ರಾಜ್ಯದ ಏಕೈಕ ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರ (Sullia Vidhanasabha Constituency). ಮುಂದೆ 1985, 89ರ ಚುನಾವಣೆಯಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ (Congress) ಗೆಲುವಿನ ನಗೆ ಬೀರಿತಾದರೂ 1994ರಲ್ಲಿ ಮರಳಿ ಕ್ಷೇತ್ರ ಬಿಜೆಪಿ (BJP) ತೆಕ್ಕೆಗೆ ಬಂತು. ನಂತರ ಒಮ್ಮೆಯೂ ಇಲ್ಲಿ ಬಿಜೆಪಿ ಸೋತಿದ್ದಿಲ್ಲ. 1994, 1999, 2004, 2008, 2013, 2018 ಹೀಗೆ ಸತತ 6 ಚುನಾವಣೆಗಳಲ್ಲಿ ಬಿಜೆಪಿಯ ಎಸ್ ಅಂಗಾರ (S Angara) ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು 2013ರಲ್ಲಿ ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಾಗ ಗೆದ್ದ ಏಕೈಕ ಕಮಲ ಪಕ್ಷದ ಅಭ್ಯರ್ಥಿ ಅಂದರೆ ಎಸ್.ಅಂಗಾರ ಆಗಿದ್ದಾರೆ.

CongressFlags1 e1613454851608

ತಮ್ಮ ಗೆಲುವಿನ ಮೂಲಕ ಕರಾವಳಿ ಜಿಲ್ಲೆಯಲ್ಲಿ ಅವರು ಬಿಜೆಪಿಯ ಮಾನ ಉಳಿಸಿದ್ದರು. ಮೀಸಲು ಕ್ಷೇತ್ರದಲ್ಲಿ ಕೇಸರಿ ಪಡೆ ನಿರಂತರವಾಗಿ ಜಯ ದಾಖಲಿಸಿಕೊಳ್ಳುತ್ತಿದ್ದರೂ, ಇತ್ತ ಕಾಂಗ್ರೆಸ್ ಸೋಲಿಲ್ಲದ ಸರದಾರ ಅಂಗಾರರನ್ನು ಸೋಲಿಸಲು ತುದಿಗಾಲಿಲ್ಲ ನಿಂತಿದೆ. ಈ ನಿಟ್ಟಿನಲ್ಲಿ ವಿರೋಧ ಪಕ್ಷವೂ ಈ ಕ್ಷೇತ್ರದಲ್ಲಿ ಬಲೆ ಹೆಣೆಯಲಾರಂಭಿಸಿದ್ದು, ಜನ ಸಾಮಾನ್ಯರ ಗಮನ ಸೆಳೆಯಲು ಪ್ಲಾನ್ ಮಾಡಿದೆ. ಮೂರೂವರೆ ದಶಕಗಳ ಬಳಿಕ ಬಿಜೆಪಿ ಹಾಗೂ ಎರಡು ದಶಕದ ಬಳಿಕ ಕಾಂಗ್ರೆಸ್ ಹೊಸ ಮುಖ ಕಣಕ್ಕಿಳಿಸುವ ಯೋಚನೆ ಮಾಡಿದ್ದಾರೆನ್ನುವುದು ಸದ್ಯದ ಅಪ್‍ಡೇಟ್ಸ್.  ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ದಾಖಲೆ ಬರೆದ ಸುಳ್ಯದ ಎಸ್ ಅಂಗಾರ

angara

ಅಭ್ಯರ್ಥಿಗಳಿಗಾಗಿಯೇ ಹುಡುಕಾಟ ನಡೆಸಬೇಕಿದ್ದ ಕ್ಷೇತ್ರದಲ್ಲೀಗ ಪ್ರಮುಖ ಎರಡು ಪಕ್ಷಗಳಲ್ಲಿ ಆಕಾಂಕ್ಷಿಗಳ ದಂಡೇ ತುಂಬಿದೆ. ಹೀಗಾಗಿ ಹೈಕಮಾಂಡ್‍ಗೆ ಅಭ್ಯರ್ಥಿ ಹೆಸರು ಅಂತಿಮ ಮಾಡುವುದೇ ದೊಡ್ಡ ಸವಾಲು. 35 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯನ್ನು ಕೆಡವಲು ಬಿಜೆಪಿ ಪ್ರಯೋಗಿಸಿದ್ದು ತರುಣ ಅಭ್ಯರ್ಥಿ ಪ್ರಯೋಗ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ 27 ವರ್ಷದ ಅಂಗಾರ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿತ್ತು. 1989ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‍ನ ಕುಶಲ ಅವರ ವಿರುದ್ಧ ಅಂಗಾರ ಸೋತರೂ 1994ರಿಂದ 2018ರ ತನಕ ನಿರಂತರ ಗೆಲುವು ದಾಖಲಿಸಿದ್ದಾರೆ. ಆದರೆ ಅಂಗಾರ ಅವರ ಕಾರ್ಯವೈಖರಿ ಬಗ್ಗೆ ಜನಸಾಮಾನ್ಯರಿಗಷ್ಟೆ ಅಲ್ಲ, ಸಂಘ ಪರಿವಾರ ಮತ್ತು ಬಿಜೆಪಿ ಬಿಡಾರದಲ್ಲಿಯೂ ಅಸಮಾಧಾನದ ಹೊಗೆಯಾಡುತ್ತಿದೆ ಎನ್ನಲಾಗಿದೆ.

BJP FLAG

ಸುಳ್ಯ-ಕಡಬದ ಭೌಗೋಳಿಕ ಸ್ಥಿತಿಗತಿ, ಜನಜೀವನದ ನಾಡಿಮಿಡಿತವೇ ತಿಳಿಯದ ಶಾಸಕ ಅಂಗಾರ ತಮ್ಮ 28 ವರ್ಷಗಳ ಶಾಸಕತ್ವದ ಈ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಒಂದು ಯೋಜನೆಯನ್ನೂ ಹಾಕಿಕೊಂಡಿಲ್ಲ ಎಂಬ ಅಸಮಾಧಾನವೂ ಜನರಲ್ಲಿದೆ. ಹೀಗಾಗಿ ಅಭ್ಯರ್ಥಿಯನ್ನು ಬದಲಿಸಬೇಕೆಂಬ ಕೂಗು ಕೇಳಿಬರುತ್ತಿದ್ದು, ಈ ಬಾರಿ ಬಿಜೆಪಿ ಅಂಗಾರ ಅವರನ್ನು ಬದಲಾಯಿಸಿ ಮತ್ತೆ ತರುಣ ಅಭ್ಯರ್ಥಿ ಕಣಕ್ಕಿಳಿಸುವ ಪ್ರಯೋಗ ಮಾಡುವ ಸಾಧ್ಯತೆ ಇದೆ ಅನ್ನುವುದು ಪ್ರಚಲಿತದಲ್ಲಿರುವ ಮಾತು. ಇದನ್ನೂ ಓದಿ: ಬಿಜೆಪಿಗೆ ಎರಡನೇ ಗೆಲುವಿನ ಕೊಡುಗೆ ನೀಡಲಿದೆಯೇ ಮೂಡುಬಿದಿರೆ ಕ್ಷೇತ್ರ?

DINESH AMTUR

ಸುಳ್ಯ ಸಂಘ ಪರಿವಾರದ ಭದ್ರಕೋಟೆ. 2013ರಲ್ಲಿ ದ.ಕ. ಜಿಲ್ಲೆಯಲ್ಲಿನ 8 ಸ್ಥಾನಗಳ ಪೈಕಿ ಬಿಜೆಪಿ 7ರಲ್ಲಿ ಸೋತಿತ್ತು. ಇನ್ನೇನು ಸೋತೇ ಬಿಟ್ಟಿತು ಎಂದು ಭಾವಿಸಲಾಗಿದ್ದ ಸುಳ್ಯ ಕ್ಷೇತ್ರದಲ್ಲಿ ಗೆಲುವು ದಾಖಲಿಸಿ ಬಿಜೆಪಿ ಭದ್ರಕೋಟೆ ಅನ್ನುವುದನ್ನು ಸಾಬೀತುಪಡಿಸಿತು. ಇಲ್ಲಿ ಬಿಜೆಪಿಯ ಭವಿಷ್ಯ ಇರುವುದು ಸಂಘದ ಕೈಯಲ್ಲಿ. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಪ್ರಕಟಗೊಳ್ಳುವುದೇ ಇಲ್ಲಿ ಅಪರೂಪ. ಸಂಘ ಸೂಚಿಸುವ ವ್ಯಕ್ತಿಯೇ ಇಲ್ಲಿ ಅಭ್ಯರ್ಥಿಯಾಗುವುದು ಈ ತನಕದ ಪರಿಪಾಠ. ಒಂದು ವೇಳೆ ಅಂಗಾರ ಅವರನ್ನು ಬದಲಾಯಿಸಿ ಹೊಸ ಮುಖಕ್ಕೆ ಅವಕಾಶ ನೀಡುವುದಿದ್ದರೆ ಮೊದಲ ಹೆಸರು ಕೇಳಿ ಬರುತ್ತಿರುವುದು ಬಿಜೆಪಿ ಎಸ್‍ಸಿ/ಎಸ್ಟಿ ಮೋರ್ಚಾದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ದಿನೇಶ್ ಅಮ್ಟೂರು ಹೆಸರು.

kaladka prabhakar bhat

ಮೀಸಲಾತಿ ಹಿನ್ನೆಲೆಯಲ್ಲಿ, ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಪ್ತರೂ ಆಗಿರುವ ದಿನೇಶ್ ಅವರನ್ನು ಹೊಸ ಮುಖವನ್ನಾಗಿ ಪರಿಚಯಿಸಲು ಪಕ್ಷ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ. ಕೆಲವು ಆಕಾಂಕ್ಷಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ಗ್ರೂಪ್ ರಚಿಸಿ ಆಕಾಂಕ್ಷೆ ತೋರ್ಪಡಿಸುತ್ತಿದ್ದಾರೆ. ಈ ಮಧ್ಯೆ ಸುಳ್ಯ ಕ್ಷೇತ್ರಕ್ಕೆ ಹೊರಗಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಬಾರದು ಎಂದು ಆಗ್ರಹಿಸಿ ಸುಳ್ಯದ ದಲಿತ ಮುಖಂಡರು ಪತ್ರಿಕಾಗೋಷ್ಠಿ ನಡೆಸಿರುವುದು ಕೂಡ ಗಮನಾರ್ಹ ಸಂಗತಿ. ಇದನ್ನೂ ಓದಿ: ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್‍ನ ಲಾಭ ಪಡೆಯಲಿದೆಯೇ ಬಿಜೆಪಿ?

ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸತತ 4 ಬಾರಿ ಸೋತಿರುವ ಡಾ. ರಘು ಅವರು ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದಾರೆ. ಅವರ ಪುತ್ರರಾದ ಪ್ರಹ್ಲಾದ್, ಅಭಿಷೇಕ್ ಅವರು ಟಿಕೆಟ್ ಆಕಾಂಕ್ಷೆ ವ್ಯಕ್ತಪಡಿಸಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಕೆಪಿಸಿಸಿ ಜಿ. ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಕಾಂಗ್ರೆಸ್‍ನಲ್ಲಿ ಹೊಸಮುಖ ಪರಿಚಯವಾಗಿದೆ. ಬಿಜೆಪಿಯೂ ಇದೇ ಹಾದಿ ತುಳಿಯುತ್ತಾ ಅನ್ನೋದು ಕುತೂಹಲದ ಬಿಂದುವಾಗಿದೆ.

TAGGED:bjpcongressMangalurus angarasullia constituencyಎಸ್ ಅಂಗಾರಕಾಂಗ್ರೆಸ್ಬಿಜೆಪಿಮಂಗಳೂರುಸುಳ್ಯ ವಿಧಾನಸಭಾ ಕ್ಷೇತ್ರ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
4 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
4 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
4 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
5 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
6 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?