ಚಾಮರಾಜನಗರ: ಜಿಲ್ಲೆಗೆ ಮುಖ್ಯಮಂತ್ರಿಗಳು (Chief Minister) ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎಂಬ ಮೌಢ್ಯ ಪ್ರಚಲಿತದಲ್ಲಿದೆ. ರಾಜ್ಯದ ಹಲವು ಮುಖ್ಯಮಂತ್ರಿಗಳು ಅಧಿಕಾರ ಹೋಗುವ ಭಯದಿಂದ ಜಿಲ್ಲಾ ಕೇಂದ್ರಕ್ಕೆ ಎಂಟ್ರಿ ಕೊಡದೇ ರಾಜ್ಯದ ಆಡಳಿತ ನಡೆಸಿರುವ ನಿದರ್ಶನ ಸಾಕಷ್ಟಿದೆ. ಅದೇ ರೀತಿ ಜಿಲ್ಲಾ ಕೇಂದ್ರಕ್ಕೆ ಬಂದು ಹೋದ ನಂತರವೂ ಕೂಡ ಅನೇಕ ಮುಖ್ಯಮಂತ್ರಿಗಳ ಅಧಿಕಾರ ಕೂಡ ಹೋಗಿದೆ. ಆದರೆ ಸಿದ್ದರಾಮಯ್ಯ (Siddaramaiah) 11 ಬಾರಿ ಭೇಟಿ ನೀಡಿದರೆ ಬೊಮ್ಮಾಯಿ (Basavaraj Bommai) ಎರಡು ಬಾರಿ ನೀಡಿ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದಾರೆ.
ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರಕ್ಕೆ (Chamarajanagara) ಮುಖ್ಯಮಂತ್ರಿಗಳು ಭೇಟಿ ನೀಡಿದ ಆರು ತಿಂಗಳ ಒಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಮೊದಲಿನಿಂದಲೂ ರಾಜ್ಯದ ರಾಜಕಾರಣಿಗಳಲ್ಲಿ ಮನೆ ಮಾಡಿದೆ. ಚಾಮರಾಜನಗರಕ್ಕೆ ರಾಜ್ಯದ ದೊರೆ ಬರಲೂ ಹಿಂದೇಟು ಹಾಕುವ ಹಿನ್ನೆಲೆಯಲ್ಲಿ ಜಿಲ್ಲೆ ಅಭಿವೃದ್ಧಿ ದೃಷ್ಟಿಯಲ್ಲಿ ಈಗಲೂ ಹಿಂದುಳಿದಿದೆ. ಇದಕ್ಕೆ ಮುಖ್ಯ ಕಾರಣ ಚಾಮರಾಜನಗರಕ್ಕೆ ಭೇಟಿ ಕೊಟ್ಟು ತದನಂತರ ಹೋದ್ರೆ ಅಧಿಕಾರ ಹೋಗುತ್ತದೆ ಎನ್ನುವ ವಿಚಾರ ಬೇರೂರಿದೆ. ಆ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಈ ಜಿಲ್ಲೆಯತ್ತ ಮುಖ ಮಾಡುತ್ತಿಲ್ಲ.
Advertisement
ಸೃಷ್ಟಿಯಾಗಿದ್ದು ಹೇಗೆ?
1988ರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಂದೆ ಎಸ್. ಆರ್ ಬೊಮ್ಮಾಯಿ (SR Bommai) ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜನಗರಕ್ಕೆ ಭೇಟಿ ನೀಡಿ ಮಿನಿ ವಿಧಾನಸೌಧ, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ್ದರು. ಭೇಟಿ ನೀಡಿದ ಕೆಲವೇ ತಿಂಗಳಲ್ಲಿ ರಾಜಕೀಯ ಕಾರಣಗಳಿಂದ ಅಧಿಕಾರ ಕಳೆದುಕೊಡಿದ್ದರು.
Advertisement
Advertisement
Advertisement
ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸ್, ಗುಂಡೂರಾವ್, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಕುಮಾರಸ್ವಾಮಿ ಅವರುಗಳು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ತಮ್ಮ ಚಾಮರಾಜನಗರ ಭೇಟಿಯ 6 ತಿಂಗಳ ಒಳಗೆ ಬೇರೆ ಬೇರೆ ಕಾರಣಗಳಿಗಾಗಿ ಈ ಎಲ್ಲರೂ ಮುಖ್ಯಮಂತ್ರಿ ಪಟ್ಟವನ್ನು ಕಳೆದುಕೊಂಡಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಮುಖ್ಯಮಂತ್ರಿಯಾದವರು ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ಮೂಢನಂಬಿಕೆಯೊಂದು ಸೃಷ್ಟಿಯಾಯಿತು.
11 ಬಾರಿ ಸಿದ್ದು ಭೇಟಿ
ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗ ಚಾಮರಾಜನಗರಕ್ಕೆ ಅಂಟಿದ್ದ ಕಳಂಕವನ್ನು ತೊಳೆದು ಹಾಕಿದ್ದರು. ಚಾಮರಾಜನಗರಕ್ಕೆ 11 ಬಾರಿ ಭೇಟಿ ನೀಡಿದ ಅವರು ಕೋಟ್ಯಂತರ ರೂ. ಅನುದಾನವನ್ನು ಸಹ ಒದಗಿಸಿದರು. ಅಲ್ಲದೇ ಮುಖ್ಯಮಂತ್ರಿಯಾಗಿ 5 ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದ್ದರು. ಇದನ್ನೂ ಓದಿ: ಅಂದು ಸುಗ್ರೀವಾಜ್ಞೆ ಹರಿದು ಎಸೆಯದೇ ಇದ್ದಿದ್ದರೆ ರಾಹುಲ್ ಅನರ್ಹರಾಗುತ್ತಿರಲಿಲ್ಲ!
ಬಿಎಸ್‌ವೈ ಭೇಟಿ ನೀಡಿರಲಿಲ್ಲ:
ಮಾಜಿ ಸಿಎಂ ಸಿದ್ದರಾಮಯ್ಯ ನಂತರ ಅಧಿಕಾರ ನಡೆಸಿದ ಯಡಿಯೂರಪ್ಪ ಕೂಡ ಚಾಮರಾಜನಗರಕ್ಕೆ ಭೇಟಿ ಕೊಟ್ಟಿಲ್ಲ. ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಅಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕೊಟ್ಟಿದ್ದರು. ಅವರು ಕೂಡ ಮೌಢ್ಯಕ್ಕೆ ಹೆದರಿಕೊಂಡು ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಬರುವ ಧೈರ್ಯ ಮಾಡಿರಲಿಲ್ಲ.
2 ಬಾರಿ ಬೊಮ್ಮಾಯಿ ಭೇಟಿ
ಮೂಢನಂಬಿಕೆಯ ನಡುವೆಯೂ ಕೂಡ ಇದೀಗ ರಾಜ್ಯದ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಎರಡು ಬಾರಿ ಭೇಟಿ ಕೊಟ್ಟಿದ್ದಾರೆ. ಮೊದಲ ಬಾರಿಗೆ ಚಾಮರಾಜನಗರ ಮೆಡಿಕಲ್ ಕಾಲೇಜಿನ ಆಸ್ಪತ್ರೆಯ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ತದನಂತರ ಎರಡು ತಿಂಗಳ ಹಿಂದೆ ಜಿಲ್ಲೆಯ ಗುಂಡ್ಲುಪೇಟೆ, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಕ್ಕೆ ಭಾಗವಹಿಸಿ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದಾರೆ.