ಮೈಸೂರು: ಹಳೆ ಮೈಸೂರು (Old Mysuru) ಭಾಗಕ್ಕೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru Mysuru Expressway) ನಮಗೆ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿ ಮಂಡ್ಯದಲ್ಲೇ (Mandya) ಅದರ ಉದ್ಘಾಟನೆ ನೆರವೇರಿಸಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದ್ದಾರೆ.
Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಾವುಟ ಹಾರಿಸುತ್ತೇವೆ. ಹಳೆ ಮೈಸೂರು ಭಾಗಕ್ಕೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ದೊಡ್ಡ ಶಕ್ತಿಯಾಗಿದೆ. ಅದಕ್ಕಾಗಿಯೇ ಪ್ರತಿ ಪಕ್ಷಗಳಿಂದ ಅಷ್ಟೊಂದು ಅಪಸ್ವರ ಕೇಳಿಬರುತ್ತಿದೆ. ಇದರೊಂದಿಗೆ ನರೇಂದ್ರ ಮೋದಿ (Narendra Modi) ಅವರ ಜಲಜೀವನ್ ಮಿಷನ್, ಕಿಸಾನ್ ಸಮ್ಮಾನ್ ಯೋಜನೆಗಳು ನಮ್ಮ ಪಕ್ಷಕ್ಕೆ ಬಲ ತುಂಬಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Mood Of Karnataka – `ಪಬ್ಲಿಕ್’ ಸರ್ವೆಯಲ್ಲಿ ಕರ್ನಾಟಕ ಕುರುಕ್ಷೇತ್ರ ಅತಂತ್ರ
Advertisement
Advertisement
ಮಂಡ್ಯದಲ್ಲಿ ಈ ಬಾರಿ ಬಿಜೆಪಿ ಧ್ವಜ (BJP Flag) ಹಾರಬೇಕು ಅನ್ನೋ ಕಾರಣಕ್ಕೆ ಎಕ್ಸ್‌ಪ್ರೆಸ್‌ವೇ ಅಲ್ಲಿಯೇ ಉದ್ಘಾಟಿಸಿದ್ದೇವೆ. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಹಳೆ ಮೈಸೂರು ಭಾಗದಲ್ಲಿ 15 ಸ್ಥಾನಗಳನ್ನು ಗೆಲ್ಲುವ ಗುರಿಯಿದೆ. ಕನಿಷ್ಠ 10 ಸ್ಥಾನಗಳನ್ನು ಈ ಭಾಗದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಶಪಥ ಮಾಡಿದ್ದಾರೆ. ಇದನ್ನೂ ಓದಿ: Mood Of Karnataka – ಮಲೆನಾಡು, ಮಧ್ಯ ಕರ್ನಾಟಕದಲ್ಲಿ ಹಿನ್ನಡೆಯಾದರೂ ಬಿಜೆಪಿಯೇ ದೊಡ್ಡ ಪಕ್ಷ
Advertisement
ಇದೇ ವೇಳೆ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜ್ಯದ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಿ.ಎಸ್ ಯಡಿಯೂರಪ್ಪ ಅವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತೆ. ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ನಾನು ಪಕ್ಷದ ಕಾರ್ಯಕರ್ತನಾಗಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ದುಡಿಯುತ್ತೇನೆ ಎಂದು ನುಡಿದಿದ್ದಾರೆ.