ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಜಟಾಪಟಿ ಶುರುವಾಗಿದ್ದು, ಕೈ-ಕೈ ಮೀಲಾಯಿಸಿದ್ದಾರೆ.
Advertisement
ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ (KPCC) ಕಚೇರಿಯಲ್ಲಿ ರಾಜಾಜಿನಗರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಇದನ್ನೂ ಓದಿ: ನನ್ನ ಜೊತೆ ಬಿಸಿನೆಸ್ ಮಾಡಲು ಯಾರೂ ಮುಂದೆ ಬರುತ್ತಿಲ್ಲ: ಡಿಕೆ ಶಿವಕುಮಾರ್ ಬೇಸರ
Advertisement
Advertisement
ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೂರು ಬಣಗಳ ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಪದ್ಮಾವತಿ, ಮನೋಹರ್, ಮಾಜಿ ಉಪ ಮೇಯರ್ ಪುಟ್ಟರಾಜು ಬಣಗಳ ನಡುವೆ ಮಾತಿಗೆ ಮಾತು ಬೆಳೆದು ಕಿತ್ತಾಟ ಶುರುವಾಗಿದೆ. ಇದನ್ನೂ ಓದಿ: ಟಿಕೆಟ್‍ಗಾಗಿ ಕಾಂಗ್ರೆಸ್ ಕಾರ್ಯಕರ್ತರ ಸಮರ- ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಭುಗಿಲೆದ್ದ ಆಕ್ರೋಶ
Advertisement
ಈಗಾಗಲೇ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿರುವುದಾಗಿ ಕಾರ್ಯಕರ್ತರು ಹೇಳಿದ್ದಾರೆ. ಈ ಬಗ್ಗೆ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿಲ್ಲ.