ವಿಜಯಪುರ: ತಪ್ಪು ಮಾಹಿತಿಯಿಂದ ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.
Advertisement
Advertisement
ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ್ದಾರೆ. ಇದನ್ನೂ ಓದಿ: ಮತ ಚಲಾಯಿಸಲು ಬಂದಿದ್ದ ವ್ಯಕ್ತಿ, ಮಹಿಳೆ ಪ್ರತ್ಯೇಕ ಮತದಾನ ಕೇಂದ್ರದಲ್ಲಿ ಸಾವು
Advertisement
Advertisement
ಘಟನೆಯ ವೇಳೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗೂ ಥಳಿಸಿದ್ದು, ಘಟನೆಯಿಂದಾಗಿ ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಆದರೂ ಸಹ ಮತದಾನ ಪ್ರಕ್ರಿಯೆ ಮುಂದುವರಿದಿದೆ. ಇದನ್ನೂ ಓದಿ: Karnataka Election 2023: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯಿಂದ ಮತದಾನ