ಉಡುಪಿ: ಉಡುಪಿ (Udupi) ಜಿಲ್ಲೆಯಲ್ಲಿ ಎಲ್ಲಾ ಐದು ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಉಡುಪಿ ಹಾಗೂ ಕುಂದಾಪುರದಲ್ಲಿ ಬಹುದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ. ಉಳಿದ ಕ್ಷೇತ್ರಗಳಲ್ಲೂ ನಿಶ್ಚಯವಾಗಿ ಗೆಲುವು ಸಾಧಿಸುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojary) ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಮತದಾನವಾದಾಗ ಭಾರತೀಯ ಜನತಾ ಪಕ್ಷಕ್ಕೆ ಅನುಕೂಲವಾಗಿದೆ. ಕಡಿಮೆ ಮತದಾನವಾದಾಗ ಬಿಜೆಪಿ (BJP) ಗೆಲುವು ಕಂಡಿರುವುದು ಕಡಿಮೆ. ಈ ಬಾರಿ ಬಹು ದೊಡ್ಡ ಪ್ರಮಾಣದಲ್ಲಿ ಮತದಾನವಾಗಿದೆ. ಮತದಾನದ ಸಂಖ್ಯೆ ಹೆಚ್ಚಿರುವುದರಿಂದ ಬಿಜೆಪಿಯ ಗೆಲುವಿಗೆ ಪೂರಕವಾಗಲಿದೆ. ಬದಲಾವಣೆಗಾಗಿ ಜನ ಹೆಚ್ಚಿನ ಮತ ಹಾಕಿರಬಹುದು ಮತ್ತು ಆ ಬದಲಾವಣೆ ನಮ್ಮ ಪರವಾಗಿ ಇರಬಹುದು ಎಂದರು. ಇದನ್ನೂ ಓದಿ: ಬಿಎಸ್‌ವೈ ನಿವಾಸದಲ್ಲಿ ನಾಯಕರ ಸಭೆ – ಅಧಿಕಾರಕ್ಕೇರಲು ಬಿಜೆಪಿ ರಣತಂತ್ರ
Advertisement
Advertisement
ಬೆಂಗಳೂರಿನಲ್ಲಿ (Bengaluru) ಕಡಿಮೆ ಮತದಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದೇಶಕ್ಕೆ ಒಳ್ಳೆಯದಾಗಬೇಕು, ಅಭಿವೃದ್ಧಿ ಆಗಬೇಕು ಎಂದು ಹೇಳುವವರು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಬೇಕು. ಹಾಗೆ ಮಾಡಿದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ ಬರುತ್ತಿತ್ತು. ಅದನ್ನು ಹೇಳುವುದು ಯಾರು, ಮಾಡುವುದು ಯಾರು ಎಂಬ ಚರ್ಚೆಯಿದೆ. ಕಡ್ಡಾಯವಾಗಿ ಮತದಾನ ಮಾಡಿ ಎಂದು ಹೇಳುವ ಹಕ್ಕು ರಾಜಕೀಯ ಸರ್ಕಾರಕ್ಕೆ ಇಲ್ಲ. ಹೆಚ್ಚು ಮತದಾನದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಇಷ್ಟಾದರೂ ಮತದಾನವಾಗಿದೆಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೋಲು-ಗೆಲುವಿನ ಲೆಕ್ಕಾಚಾರ; ‘ಚೊಂಬೇಶ್ವರ’ ಅಂತ ಚೊಂಬು ಶಾಸ್ತ್ರದ ಮೊರೆ ಹೋದ ಕಾರ್ಯಕರ್ತರು
Advertisement
Advertisement
ರಾಜ್ಯದಲ್ಲಿ ಅತಂತ್ರವಾದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಆಪರೇಷನ್ ಆಗುವ ಪ್ರಶ್ನೆಯೇ ಬರುವುದಿಲ್ಲ. ಆಪರೇಷನ್ ಕಮಲದ ಅಗತ್ಯವೂ ಇಲ್ಲ. ಅತಂತ್ರ ಆದರೇ ಎಂದು ಕೇಳಿ ನಮ್ಮ ದಾರಿ ತಪ್ಪಿಸಬೇಡಿ. ಅತಂತ್ರ ಬಂದರೆ ಏನು ಮಾಡಬೇಕು ಎಂದು ಪಕ್ಷದ ದೊಡ್ಡವರು ಯೋಚನೆ ಮಾಡುತ್ತಾರೆ. ನಳಿನ್ ಕುಮಾರ್, ಬಸವರಾಜ ಬೊಮ್ಮಾಯಿ, ಅಮಿತ್ ಶಾ, ನಡ್ಡಾ ಅವರ ಮಟ್ಟದಲ್ಲಿ ಚರ್ಚೆ ಮಾಡುತ್ತಾರೆ. ನಾಳಿನ ಫಲಿತಾಂಶದಲ್ಲಿ ಮಾತ್ರ ಯಾವ ಆಪರೇಷನ್ ಅಗತ್ಯ ಬರಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಫಲಿತಾಂಶ ಹೊರಬೀಳುವ ಹೊತ್ತಿನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್ – ವಿದ್ಯುತ್ ದರ ಹೆಚ್ಚಳ
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy) ಅವರೊಂದಿಗಿನ ರಾಜಕೀಯ ಮಾತುಕತೆ ವಿಚಾರವಾಗಿ ಮಾತನಾಡಿದ ಅವರು, ಮುಂಜಾಗರೂಕತಾ ಕ್ರಮವಾಗಿ ಒಬ್ಬರ ಜೊತೆ ಇನ್ನೊಬ್ಬರು ಮಾತನಾಡಿರಬಹುದು. ನಾಳೆ ಫಲಿತಾಂಶ ಬಂದನಂತರ ಯಾವುದೇ ಆತಂಕ ಇರುವುದಿಲ್ಲ. ಲೆಕ್ಕಾಚಾರ ಮುಗಿದ ನಂತರ ಯಾವುದೇ ಚರ್ಚೆ ಇರುವುದಿಲ್ಲ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಯಾರು ಎನ್ನುವುದನ್ನು ಶಾಸಕಾಂಗ ಸಭೆ ತೀರ್ಮಾನ ಮಾಡುತ್ತದೆ ಎಂದರು. ಇದನ್ನೂ ಓದಿ: ವಿಧಾನಸಭೆ ಚುನಾವಣೆ 2023: ಕಣದಲ್ಲಿದ್ದ ಸಿನಿಮಾ ಸೆಲೆಬ್ರಿಟಿಗಳ ಕನಸು ನನಸಾಗತ್ತಾ?