ಬೆಂಗಳೂರು: ವಿಧಾನಸಭೆ ಚುನಾವಣೆಗೆ(Karnataka Election 2023) ಜೆಡಿಎಸ್ 93 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಹಾಸನ(Hassana) ಜಿಲ್ಲೆಯ ಹಾಸನ ಕ್ಷೇತ್ರ, ಅರಕಲಗೂಡು, ಅರಸೀಕೆರೆ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಉಂಟಾಗಿದೆ.
ಸ್ವರೂಪ್‍ಗೆ ಟಿಕೆಟ್ ನೀಡಲು ಎಚ್‍ಡಿ ದೇವೇಗೌಡ, ಎಚ್‍ಡಿ ಕುಮಾರಸ್ವಾಮಿ ಒಲವು ತೋರಿದ್ದು ಹಲವು ಬಾರಿ ಟಿಕೆಟ್ ನೀಡುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ. ಆದರೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ(Bhavani Revanna) ಹಾಸನ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಇದನ್ನೂ ಓದಿ: ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್?
Advertisement
Advertisement
ಅರಕಲಗೂಡು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎ.ಟಿ.ರಾಮಸ್ವಾಮಿ ಜೆಡಿಎಸ್‍ನಿಂದ ಅಂತರ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ.
Advertisement
ಅರಸೀಕೆರೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಕೆ.ಎ.ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದು ನಿಚ್ಚಳವಾಗಿದೆ. ಆದರೆ ಇಬ್ಬರು ಶಾಸಕರು ಜೆಡಿಎಸ್ ಪಕ್ಷ ತೊರೆಯುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಇದರಿಂದಾಗಿ ಈ ಮೂರು ಕ್ಷೇತ್ರ ಅಭ್ಯರ್ಥಿಗಳ ಹೆಸರು ಘೋಷಿಸಲು ಕಾಯ್ದು ನೋಡುವ ತಂತ್ರವನ್ನು ಜೆಡಿಎಸ್ ನಾಯಕರು ಅನುಸರಿಸಿದ್ದಾರೆ.
Advertisement
ಸೋಮವಾರ ಪಕ್ಷದ ಕಚೇರಿಯಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್‌ಡಿ ಕುಮಾರಸ್ವಾಮಿ ಮತ್ತು ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ 93 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದ್ದರು.