ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಮುಹೂರ್ತ ಫಿಕ್ಸ್ ಆಗಿದ್ದು, ಇಂದಿನಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಮತ ಎಣಿಕೆಗೆ ದಿನಾಂಕ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಚುನಾವಣೆ ಘೋಷಣೆ ಮಾಡ್ತಿದ್ದಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಕೂಡ ಸುದ್ದಿಗೋಷ್ಠಿ ಮಾಡಿ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಯಾವ ರೀತಿ ಸಿದ್ಧತೆ ಆಗಿದೆ ಎಂಬ ಬಗ್ಗೆ ವಿವರಣೆ ನೀಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಚುನಾವಣೆ ಕರ್ತವ್ಯ ನಿರ್ವಹಣೆ ಮಾಡಲು 78 ಸಾವಿರ ಸಿಬ್ಬಂದಿ ಅಗತ್ಯವಿದ್ದು, ಈಗಾಗಲೇ 48 ಸಾವಿರ ಸಿಬ್ಬಂದಿ ನಿಯೋಜನೆ ಮಾಡಿಕೊಳ್ಳಲಾಗಿದೆ. ಈ ಬಾರಿ ಹೊಸ ಇವಿಎಂ (EVM) ಬಳಕೆ ಮಾಡಲಾಗುತ್ತಿದೆ. ಎಲ್ಲ ಮತಗಟ್ಟೆಗಳಿಗೆ ಹೊಸ ಇವಿಎಂ ನೀಡಲಾಗುವುದು ಎಂದು ಆಯುಕ್ತರು ಚುನಾವಣಾ ಸಿದ್ಧತೆ ಬಗ್ಗೆ ವಿವರಣೆ ನೀಡಿದ್ದಾರೆ. ಇದನ್ನೂ ಓದಿ: Karnataka Election 2023- ಮೇ 10 ರಂದು ಮತದಾನ, ಮೇ 13ಕ್ಕೆ ಫಲಿತಾಂಶ
Advertisement
Advertisement
ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸುದ್ದಿಗೋಷ್ಠಿ ನಡೆಸಿದರು. ಈಗಾಗಲೇ ಚುನಾವಣೆಗೆ ಬೇಕಾದ ತಂಡದ ರಚನೆ ಆಗಿದೆ. ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ, ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಮುಖ್ಯವಾಗಿ ಇಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಬೆಂಗಳೂರಿನಲ್ಲಿ ಒಟ್ಟು ಮತದಾರರ ಸಂಖ್ಯೆ 95,13,830 ಇದ್ದು, ಅವರ ಪೈಕಿ ಪುರುಷ ಮತದಾರರ ಸಂಖ್ಯೆ 49,26,270 ಮತ್ತು ಮಹಿಳಾ ಮತದಾರರು 45,85,824 ಇದ್ದಾರೆ. ಹೊಸ ಮತದಾರರ ಸಂಖ್ಯೆ 1,08,494 ಇದೆ. 28 ವಿಧಾನಸಭಾ ಕ್ಷೇತ್ರಗಳಿಗೂ ರಿರ್ಟನಿಂಗ್ ಆಫೀಸರ್‌ಗಳ ನೇಮಕವಾಗಿದ್ದು , ಒಟ್ಟು ಮತಗಟ್ಟೆಗಳ ಸಂಖ್ಯೆ 8,615 ಗಳನ್ನ ಪಟ್ಟಿಮಾಡಲಾಗಿದೆ. ಚುನಾವಣಾ ಅಕ್ರಮ ತಡೆಯಲು ಸಹ ಸಾಕಷ್ಟು ಕ್ರಿಯಾಯೋಜನೆಗಳನ್ನ ಅಧಿಕಾರಿಗಳು ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ಅಂತಾ ಒಬ್ಬ ದಡ್ಡ ಇದ್ದಾನೆ, ಅವನಿಗೆ ದಿನವೂ ಹಣ ಎಣಿಸೋದೆ ಕೆಲಸ : ಸಿದ್ದರಾಮಯ್ಯ
Advertisement
8,615 ಪೈಕಿ 2,217 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಘೋಷಣೆ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ಕೆಲವು ಸಮಸ್ಯೆಗಳು ಆದ ಆಧಾರದ ಮೇರೆಗೆ ಸೂಕ್ಷ್ಮ ಮತಗಟ್ಟೆ ಎಂದು ಗುರುತು ಮಾಡಲಾಗಿದೆ. ಸೂಕ್ಷ್ಮ ಮತಗಟ್ಟೆಗಳಲ್ಲಿ Central Para Military Force ನಿಯೋಜನೆ ಮಾಡುತ್ತೇವೆ. ಚುನಾವಣೆ ಸಂಬಂಧ ಒಟ್ಟು 36 ಚೆಕ್‌ಪೋಸ್ಟ್ ಮಾಡಲಾಗಿದ್ದು, ಕರ್ನಾಟಕ-ತಮಿಳುನಾಡು ಬಾರ್ಡರ್‌ನಲ್ಲಿ 8 ಚೆಕ್‌ಪೋಸ್ಟ್ ನಿಯೋಜನೆ ಮಾಡಲಾಗಿದೆ. ಜೊತೆಗೆ ಜಿಲ್ಲೆ ಬಾರ್ಡರ್‌ಗಳಲ್ಲಿ 11 ಚೆಕ್‌ಪೋಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.