ಯಾದಗಿರಿ: ಚುನಾವಣಾ (Election) ಪ್ರಚಾರದ ವೇಳೆ ಆಮ್ ಆದ್ಮಿ ಪಾರ್ಟಿಯ (AAP) ಕಾರ್ಯಕರ್ತನ ಮೇಲೆ ಬಿಜೆಪಿ (BJP) ಕಾರ್ಯಕರ್ತನಿಂದ ಹಲ್ಲೆ ನಡೆದಿರುವ ಘಟನೆ ಸುರಪುರ ವಿಧಾನಸಭಾ ಕ್ಷೇತ್ರದ ತೋಳದಿನ್ನಿ ಗ್ರಾಮದಲ್ಲಿ ನಡೆದಿದೆ.
ಆಮ್ ಆದ್ಮಿ ಅಭ್ಯರ್ಥಿ ಮಂಜುನಾಥ ನಾಯಕ್ ಪರ ಮತಯಾಚನೆ ಮಾಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೋರ್ವ ಏಕಾಏಕಿ ನುಗ್ಗಿ ಗಲಾಟೆ ಆರಂಭಿಸಿದ್ದಾನೆ. ಕಟ್ಟೆಯ ಮೇಲಿದ್ದ ಕಾರ್ಯಕರ್ತನನ್ನು ಕೊರಳಪಟ್ಟಿ ಹಿಡಿದು ಕಟ್ಟೆಯ ಮೇಲಿನಿಂದ ಕೆಳಗೆ ಕೆಡವಿ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: 60 ವರ್ಷದಲ್ಲಿ ಪರಿಶಿಷ್ಟರಿಗೆ ಕಾಂಗ್ರೆಸ್ ಕೊಡುಗೆ ಶೂನ್ಯ: ಸುಧಾಕರ್ ಕಿಡಿ
ಇದೇ ತಿಂಗಳ 6ರಂದು ಸುರಪುರ ವಿಧಾನಸಭಾ ಕ್ಷೇತ್ರದ ಕೊಡೇಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ (Congress) ಕಾರ್ಯಕರ್ತರ ನಡುವೆ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ಐದಾರು ಜನರಿಗೆ ಗಾಯಗಳಾಗಿತ್ತು. 15ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದವು. ಆ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ನಡೆದಿದೆ. ಇದನ್ನೂ ಓದಿ: 12ನೇ ತರಗತಿ ಪಾಸ್ ಮಾಡಿದ ಇಬ್ಬರು ಮಾಜಿ ಶಾಸಕರು